Realme V30 : ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ರಿಯಲ್​ಮಿ ಸ್ಮಾರ್ಟ್​​ಫೋನ್ | ಫೀಚರ್ಸ್, ಬೆಲೆ ಬಗ್ಗೆ ಮಾಹಿತಿ ಕೇಳಿದ್ರೆ ಹೌಹಾರ್ತೀರಾ!!!

ಭಾರತೀಯ ಸ್ಮಾರ್ಟ್​ಫೋನ್ ಮಾರುಕಟ್ಟೆಯಲ್ಲಿ ಈಗೀಗ ಮೊಬೈಲ್​ಗಳ ಬಿಡುಗಡೆ ಸಂಖ್ಯೆ ಏರಿಕೆಯಾಗುತ್ತಿದೆ. ಮಾರುಕಟ್ಟೆಯಲ್ಲಿ ಸ್ಮಾರ್ಟ್​ಫೋನ್​ಗಳಿಗೆ ಇದ್ದಷ್ಟು ಬೇಡಿಕೆ ಬೇರೆ ಯಾವುದೇ ಸಾಧನಗಳಿಗಿಲ್ಲ. ಅದೇ ರೀತಿ ಟೆಕ್ ಕಂಪೆನಿಗಳು ಕೂಡ ನೂತನ ಸ್ಮಾರ್ಟ್​​ಫೋನ್​ಗಳನ್ನು ಮಾರುಕಟ್ಟೆಗೆ ಪರಿಚಯಿಸುತ್ತಿರುತ್ತದೆ. ಇದೀಗ ಜನಪ್ರಿಯ ಟೆಲಿಕಾಂ ಕಂಪೆನಿಯಾದ ರಿಯಲ್​ ಮಿ ಕಂಪೆನಿ ಹೊಸ ಸ್ಮಾರ್ಟ್​​ಫೋನ್​ ಬಿಡುಗಡೆ ಮಾಡಿದ್ದು, ಭಾರೀ ಅಗ್ಗದ ಬೆಲೆಯಲ್ಲಿ ಗ್ರಾಹಕರಿಗೆ ಲಭ್ಯವಾಗಲಿದೆ. ಸದ್ಯ ಚೀನಾದ ಮಾರುಕಟ್ಟೆಯಲ್ಲಿ ಭರ್ಜರಿ ಬೇಡಿಕೆಯಲ್ಲಿದೆ. ರಿಯಲ್​ಮಿ ಕಂಪೆನಿ ತನ್ನ ರಿಯಲ್​ಮಿ ವಿ30 ಸೀರಿಸ್​ನಿಂದ ಎರಡು ಸ್ಮಾರ್ಟ್​​ಫೋನ್​ಗಳನ್ನು ಮೊಬೈಲ್ ಮಾರುಕಟ್ಟೆಗೆ ಲಾಂಚ್ ಮಾಡಿದೆ.

ರಿಯಲ್ ಮಿ ಕಂಪೆನಿಯು ಮಾರುಕಟ್ಟೆಗೆ ರಿಯಲ್​ಮಿ ವಿ30 ಸೀರಿಸ್​ನಿಂದ ರಿಯಲ್​ಮಿ ವಿ 30 ಮತ್ತು ವಿ30ಟಿ ಎಂಬ ಎರಡು ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್ ಫೋನ್ ಗಳು ಫೀಚರ್ ಹೇಗಿದೆ? ಬೆಲೆ ? ಇವುಗಳ ಮಾಹಿತಿ ಇಲ್ಲಿದೆ.

ರಿಯಲ್​ಮಿ ವಿ30 ಸ್ಮಾರ್ಟ್​​ಫೋನ್​ :​

ರಿಯಲ್‌ಮಿ ವಿ30 ಸ್ಮಾರ್ಟ್‌ಫೋನ್‌ ಉತ್ತಮ ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಹಾಗೂ ಬಲಿಷ್ಠವಾದ ಮೀಡಿಯಾ ಟೆಕ್ ಡೈಮೆನ್ಸಿಟಿ 700 ಎಸ್​ಓಸಿ ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದ್ದು, ಆಂಡ್ರಾಯ್ಡ್ 12 ಆಧಾರಿತ ರಿಯಲ್‌ಮಿ ಯುಐ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ನಲ್ಲಿ 8GB RAM ಮತ್ತು 128ಜಿಬಿ ಸ್ಟೋರೇಜ್ ಆಯ್ಕೆ ಇದ್ದು, ಮೆಮೊರಿ ಕಾರ್ಡ್‌ ಮೂಲಕ 1 ಟಿಬಿವರೆಗೆ ಸ್ಟೋರೇಜ್ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದು ಎಂದು ಕಂಪನಿ ತಿಳಿಸಿದೆ.

ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹಾಗೂ ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಹಾಗೇ ಇದರಲ್ಲಿ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ. 5,000mAh ಬ್ಯಾಟರಿ ಬ್ಯಾಕಪ್ ಅನ್ನು ಪಡೆದಿದ್ದು, ಬ್ಯಾಟರಿ 10W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್‌ ಅನ್ನು ಸಪೋರ್ಟ್ ಮಾಡುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4ಜಿ ಎಲ್ ಟಿಇ, ವೈ-ಫೈ 802.11 ಎಸಿ, ಬ್ಲೂಟೂತ್ ವಿ 5.0, ಜಿಪಿಎಸ್ / ಎ-ಜಿಪಿಎಸ್, ಮತ್ತು ಯುಎಸ್ಬಿ ಟೈಪ್-ಸಿ ಪೋರ್ಟ್ ಇವೆ. ಹಾಗೆಯೇ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್, ಮ್ಯಾಗ್ನೆಟೋಮೀಟರ್​ ಅನ್ನು ಅಳವಡಿಸಲಾಗಿದೆ. ಇನ್ನು ರಿಯಲ್​ಮಿ ವಿ30ಟಿ ಸ್ಮಾರ್ಟ್​​ಫೋನ್ ಬಗ್ಗೆ ತಿಳಿಯೋಣ.

ರಿಯಲ್​ಮಿ ವಿ30ಟಿ ಸ್ಮಾರ್ಟ್​​ಫೋನ್​ :

ರಿಯಲ್​ಮಿ ವಿ30ಟಿ ಸ್ಮಾರ್ಟ್​​ಫೋನ್ 6.5 ಇಂಚಿನ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದ್ದು, ಬಲಿಷ್ಠವಾದ ಮೀಡಿಯಾ ಟೆಕ್ ಡೈಮೆನಸಿಟಿ 700 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದೆ. ಈ ಸ್ಮಾರ್ಟ್ ಫೋನ್ ಡ್ಯುಯಲ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸಲ್‌ ಸೆನ್ಸಾರ್ ಇದೆ. 5,000mAh ಬ್ಯಾಟರಿ ಬ್ಯಾಕಪ್​ ಅನ್ನು ಹೊಂದಿದ್ದು, ಈ ಬ್ಯಾಟರಿ 10W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್‌ ಅನ್ನು ಸಪೋರ್ಟ್ ಮಾಡುತ್ತದೆ.

ಬೆಲೆ ಮತ್ತು ಲಭ್ಯತೆ :

ರಿಯಲ್‌ಮಿ ವಿ30 ಸ್ಮಾರ್ಟ್‌ಫೋನ್‌ 6GB RAM ಮತ್ತು 128GB ಸ್ಟೋರೇಜ್ ಇರುವ ಸ್ಮಾರ್ಟ್​​ಫೋನ್​ ಬೆಲೆ ಚೀನಾದಲ್ಲಿ CNY 1,099 ಇದೆ. ಅಂದ್ರೆ, ಭಾರತದಲ್ಲಿ ಸುಮಾರು 13,400 ರೂ. ಎಂದು ಅಂದಾಜಿಸಲಾಗಿದೆ. ಹಾಗೇ ರಿಯಲ್‌ಮಿ ವಿ30ಟಿ ಸ್ಮಾರ್ಟ್‌ಫೋನ್‌ 6GB RAM ಮತ್ತು 128ಜಿಬಿ ಸ್ಟೋರೇಜ್​ ಇರುವ ಸ್ಮಾರ್ಟ್​​ಫೋನ್​ ಬೆಲೆ ಚೀನಾದಲ್ಲಿ CNY 1,299 ಇದ್ದು, ಭಾರತದಲ್ಲಿ 15,900ರೂ. ಆಗಿದೆ. ಈ ಎರಡು ಸ್ಮಾರ್ಟ್‌ಫೋನ್‌ ಡಾರ್ಕ್‌ ನೈಟ್‌ ಮತ್ತು ಗೋಲ್ಡ್‌ ಬಣ್ಣಗಳ ಆಯ್ಕೆಯಲ್ಲಿ ಗ್ರಾಹಕರಿಗೆ ಖರೀದಿಗೆ ಲಭ್ಯವಿರುತ್ತದೆ. ಅಗ್ಗದ ಬೆಲೆಯ ಸ್ಮಾರ್ಟ್ ಫೋನ್ ಆಗಿದ್ದು, ಮೊಬೈಲ್ ಖರೀದಿದಾರರಿಗೆ ಇದು ಉತ್ತಮ ಅವಕಾಶವಾಗಿದೆ.

Leave A Reply

Your email address will not be published.