BIG BREAKING : RBI ಮತ್ತೆ ಹೆಚ್ಚಿಸಿತು ರೆಪೋ ದರ !!!
ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ದೇಶದ ವಾಣಿಜ್ಯ ಬ್ಯಾಂಕುಗಳಿಗೆ ಕೊಡುವ ಸಾಲದ ಮೇಲಿನ ಬಡ್ಡಿ ದರವೇ ರೆಪೋ ರೇಟ್. ವಾಣಿಜ್ಯ ಬ್ಯಾಂಕುಗಳು ತಮ್ಮಲ್ಲಿ ಹಣದ ಕೊರತೆಯಾದಾಗ ಆರ್‌ಬಿಐನಿಂದ ಹಣ ಪಡೆಯುತ್ತವೆ. ಈ ಹಣಕ್ಕೆ ಬಡ್ಡಿ ನೀಡುವ ದರ ಇದಾಗಿದೆ. ಇದೀಗ , ಆರ್‌ಬಿಐ ರೆಪೊ ದರವನ್ನು 25 ಬೇಸಿಸ್ ಪಾಯಿಂಟ್‌ಗಳಿಂದ 6.5% ಗೆ ಹೆಚ್ಚಿಸಿದೆ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಘೋಷಿಸಿದ್ದಾರೆ.
ಕಳೆದ ಮೂರು ವರ್ಷಗಳಲ್ಲಿ ಕೋರೋನಾ ದಂತಹ ಪರಿಸ್ಥಿತಿ ಎದುರಾದಾಗ ಸ್ಥಿರತೆ ಕಾಯ್ದುಕೊಂಡಿದ್ದ ರೆಪೋ ದರವನ್ನು ಏರಿಕೆ ಮಾಡಲಾಗಿದೆ. ಉದಯೋನ್ಮುಖ ಮಾರುಕಟ್ಟೆ ಆರ್ಥಿಕತೆಗಳು ಆರ್ಥಿಕ ಚಟುವಟಿಕೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜೊತೆಗೆ ಹಣದುಬ್ಬರವನ್ನು ನಿಯಂತ್ರಿಸುವ ಸಲುವಾಗಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ. ಇದಲ್ಲದೆ, ನೀತಿ ವಿಶ್ವಾಸಾರ್ಹತೆಯನ್ನು ರಕ್ಷಿಸುವ ಜೊತೆಗೆ ತೀಕ್ಷ್ಣವಾದ ವಿನಿಮಯವನ್ನು ಎದುರಿಸುತ್ತಿರುವ ಕುರಿತು ಆರ್ ಬಿಐ ಗವರ್ನರ್ ಮಾಹಿತಿ ನೀಡಿದ್ದಾರೆ.
ಆರ್.ಬಿ.ಐ. ಗವರ್ನರ್ ಶಕ್ತಿಕಾಂತ್ ದಾಸ್ ನೇತೃತ್ವದಲ್ಲಿ ಮುಂಬೈನಲ್ಲಿ ನಡೆದ ಮೂರು ದಿನಗಳ ಹಣಕಾಸು ನೀತಿ ಪರಾಮರ್ಶ ಸಭೆಯ ಬಳಿಕ ರೆಪೊ ದರ ಏರಿಕೆ ಕುರಿತಂತೆ ತೀರ್ಮಾನವನ್ನು ಪ್ರಕಟಿಸಲಾಗಿದೆ. ಶೇಕಡ 0.25ರಷ್ಟು ಹೆಚ್ಚಳವಾಗಿದ್ದು, ರೆಪೊ ದರ ಏರಿಕೆಯಿಂದಾಗಿ ಗೃಹ, ವಾಹನ ಸೇರಿದಂತೆ ವಿವಿಧ ಸಾಲಗಳ ಬಡ್ಡಿದರ ಏರಿಕೆಯಾಗಿ ಇಎಂಐ ಕೂಡ ಏರಿಕೆ ಕಾಣಲಿದೆ.
ತಾತ್ಕಾಲಿಕ ಅವಧಿಯ ಅಗತ್ಯತೆಯನ್ನು ಪೂರೈಸಲು ಭಾರತೀಯ ರಿಸರ್ವ್ ಬ್ಯಾಂಕಿನಿಂದ ಬ್ಯಾಂಕುಗಳು ಹಣವನ್ನು ಪಡೆಯುತ್ತವೆ. ಬ್ಯಾಂಕುಗಳು ಪಡೆದ ಸಾಲದ ಮೇಲೆ ಆರ್‌ಬಿಐ ಕೊಂಚ ಬಡ್ಡಿದರ ವಿಧಿಸುತ್ತದೆ. ಈ ಬಡ್ಡಿದರವನ್ನೇ ರೆಪೊ ದರ ಎಂದು ಪರಿಗಣಿಸಲಾಗುತ್ತದೆ . ಬ್ಯಾಂಕುಗಳಿಗೆ ಸಾಲ ಪಡೆಯುವುದನ್ನು ಹೆಚ್ಚು ಕಠಿಣಗೊಳಿಸಲು ಆರ್‌ಬಿಐ ಬಯಸಿದರೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವೂ ರೆಪೊ ದರಗಳನ್ನು ಏರಿಸುತ್ತದೆ. ಒಂದು ವೇಳೆ, ರೆಪೊ ದರ ತಗ್ಗಿಸಿದರೆ ಬ್ಯಾಂಕುಗಳು ಆರ್‌ಬಿಐನಿಂದ ಕಡಿಮೆ ಬಡ್ಡಿದರಕ್ಕೆ ಸಾಲ ಪಡೆಯಬಹುದಾಗಿದೆ. ದೇಶದ ಒಟ್ಟಾರೆ ಬ್ಯಾಂಕಿಂಗ್ ಕ್ಷೇತ್ರದ ಮೇಲೆ ರೆಪೋ ರೇಟ್ ಪರಿಣಾಮ ಬೀರುತ್ತದೆ ಎಂದರೆ ತಪ್ಪಾಗದು.