ನಿರುದ್ಯೋಗಿ ಯುವಕ, ಯುವತಿಯರಿಗೆ ಸಿಹಿ ಸುದ್ದಿ, ಸಮಾಜ ಕಲ್ಯಾಣ ಇಲಾಖೆಯಿಂದ ಉಚಿತ ತರಬೇತಿಗೆ ಅರ್ಜಿ ಆಹ್ವಾನ!

ಸಮಾಜ ಕಲ್ಯಾಣ ಇಲಾಖೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನಿರುದ್ಯೋಗಿ ಯುವಕ, ಯುವತಿಯರಿಗೆ ಸಿಹಿ ಸುದ್ದಿಯೊಂದನ್ನ ನೀಡಿದೆ. ನಿರುದ್ಯೋಗಿ ಯುವಕ, ಯುವತಿಯರಿಗೆ ಪ್ಯಾರಾಮೆಡಿಕಲ್ ಕೌಶಲ್ಯ ತರಬೇತಿ ಮತ್ತು ನಾನ್ ಪ್ಯಾರಾಮೆಡಿಕಲ್ ಅಲ್ಪಾವಧಿ ಸರ್ಟಿಫಿಕೇಟ್‌ ಕೋರ್ಸ್‌ಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ.

ಪ್ರಸ್ತುತ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪ.ಜಾತಿ ಮತ್ತು ಪ.ವರ್ಗದ ನಿರುದ್ಯೋಗಿ ಯುವಕ ಯುವತಿಯರಿಗೆ ಎನ್‌ಎಬಿಹೆಚ್‌ ನಿಂದ ಮಾನ್ಯತೆ ಪಡೆದ ಹಾಸ್ಪಿಟಲ್‌ಗಳ ಮೂಲಕ 75% ಉದ್ಯೋಗ ಖಾತರಿಯೊಂದಿಗೆ ನಾನ್ ಪ್ಯಾರಾಮೆಡಿಕಲ್ ಅಲ್ಪಾವಧಿ ಸರ್ಟಿಫಿಕೇಟ್ ಕೋರ್ಸ್‌ಗಳಿಗೆ ವಸತಿ ಸಹಿತ ತರಬೇತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಸದ್ಯ ಪ್ಯಾರಾಮೆಡಿಕಲ್ ಅಸಿಸ್ಟೆಂಟ್ (ನಾನ್‌ ಪ್ಯಾರಾಮೆಡಿಕಲ್)- ಮೂರು ತಿಂಗಳ ಅವಧಿ ಕೋರ್ಸ್‌ ಆಗಿದ್ದು ಕಡ್ಡಾಯವಾಗಿ 10ನೇ ತರಗತಿ ಉತ್ತೀರ್ಣರಾಗಿರಬೇಕು.

ಅರ್ಜಿ ಸಲ್ಲಿಸಲು ಅರ್ಹತೆಗಳು:

  • ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
  • 18 ರಿಂದ 40 ವರ್ಷದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.
  • ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ನಿಗಧಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು.
  • ಕಡ್ಡಾಯವಾಗಿ 10ನೇ ತರಗತಿ ಉತ್ತೀರ್ಣರಾಗಿರಬೇಕು.
  • ಅಂಗವಿಕಲ ಅಭ್ಯರ್ಥಿಗಳು ಸಕ್ಷಮ ಪ್ರಾಧಿಕಾರದಿಂದ ಪಡೆದ ವೈದ್ಯಕೀಯ ದೃಢೀಕರಣ ಪತ್ರವನ್ನು ಅರ್ಜಿ ಸಲ್ಲಿಸುವ ಮುಂಚಿತವಾಗಿ ಹೊಂದಿರಬೇಕು.
  • ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ ರೂ. 5 ಲಕ್ಷ ಮೀರಿರಬಾರದು.

ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು:

  • ಅಭ್ಯರ್ಥಿಯ ಜಾತಿ ಪ್ರಮಾಣ ಪತ್ರ.
  • ಆದಾಯ ಪ್ರಮಾಣ ಪತ್ರ.
  • ನಾನ್ ಪ್ಯಾರಾಮೆಡಿಕಲ್ ತರಬೇತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್ಎಲ್‌ಸಿ ಉತ್ತೀರ್ಣರಾದ ಅಂಕಪಟ್ಟಿ.
  • ಅಂಗವಿಕಲ ಮೀಸಲಾತಿಯಡಿ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಸಕ್ಷಮ ಪ್ರಾಧಿಕಾರದಿಂದ ಪಡೆದ ವೈದ್ಯಕೀಯ ದೃಢೀಕರಣ ಪತ್ರ.

ಮುಖ್ಯವಾಗಿ 10ನೇ ತರಗತಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ಆನ್‌ ಲೈನ್‌ ಮೂಲಕ ನಾನ್‌ ಪ್ಯಾರಾಮೆಡಿಕಲ್ ಅಲ್ಪಾವಧಿ ಸರ್ಟಿಫಿಕೇಟ್ ಕೋರ್ಸ್‌ಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ 13-02-2023 ಕೊನೆಯ ದಿನಾಂಕ ಎಂದು ಮಾಹಿತಿ ನೀಡಲಾಗಿದೆ.

ಸದ್ಯ ಈ ಮೇಲಿನಂತೆ ನಿಯಮ ಅನುಸಾರ ಅರ್ಹ ಅಭ್ಯರ್ಥಿ ಅರ್ಜಿ ನಮೂನೆಯನ್ನು ಇಲಾಖೆಯ ವೆಬ್‌ಸೈಟ್‌ www.sw.kar.nic.in ನಲ್ಲಿ ಡೌನ್‌ಲೋಡ್‌ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಯನ್ನು ಸ್ಕ್ಯಾನ್ ಮಾಡಿ ಇ-ಮೇಲ್ ವಿಳಾಸ petcparamedical@gmail.com ಕ್ಕೆ ಸಲ್ಲಿಸಬೇಕು. ಒಂದು ವೇಳೆ ತಾಂತ್ರಿಕ ಸಮಸ್ಯೆ ಏನಾದರು ಕಂಡುಬಂದರೆ ದೂರವಾಣಿ ಸಂಖ್ಯೆ 080-22207784 ಗೆ ಸಂಪರ್ಕಿಸಬಹುದಾಗಿದೆ.

Leave A Reply

Your email address will not be published.