2022ರಲ್ಲಿ ಜಮ್ಮು ಕಾಶ್ಮೀರದಲ್ಲಿ 187 ಉಗ್ರರ ಹತ್ಯೆ
ನವದೆಹಲಿ : 2022ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು 187 ಭಯೋತ್ಪಾದಕರನ್ನು ಕೊಲ್ಲಲಾಗಿದೆ, 11 ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳನ್ನು ನಡೆಸಲಾಗಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.
2022ರಲ್ಲಿ ಕಾಶ್ಮೀರದಲ್ಲಿ 125 ಭಯೋತ್ಪಾದಕರು ಉಗ್ರ ಕೃತ್ಯ ನಡೆಸಲು ಸಂಚು ರೂಪಿಸಿದ್ದು,ಭದ್ರತಾ ಪಡೆಗಳು 117 ಎನ್‌ಕೌಂಟರ್‌ಗಳನ್ನು ನಡೆಸಿವೆ ಎಂದು ನಿತ್ಯಾನಂದ ರಾಯ್ ಅವರು ಹೇಳಿದ್ದಾರೆ.
2021 ರಲ್ಲಿ ಜಮ್ಮು ಕಾಶ್ಮೀರದಲ್ಲಿ 180 ಭಯೋತ್ಪಾದಕರನ್ನು ಕೊಲ್ಲಲಾಗಿದೆ ಹಾಗೂ 95 ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳನ್ನು ನಡೆಸಲಾಯಿತು ಎಂದು ಅವರು ತಿಳಿಸಿದರು.
ರಾಜ್ಯ ಸಭೆಯಲ್ಲಿ ಬಿಜೆಪಿ ಸದಸ್ಯ ಸುಶೀಲ್ ಕುಮಾರ್ ಮೋದಿಯವರ ಲಿಖಿತ ಪ್ರಶ್ನೆಗೆ ಉತ್ತರಿಸಿದ ವೇಳೆ ರಾಯ್ ಈ ಮಾಹಿತಿ ನೀಡಿದ್ದಾರೆ. 2021ರಲ್ಲಿ ಕೇಂದ್ರಾಡಳಿತ ಪ್ರದೇಶದಲ್ಲಿ ಒಟ್ಟು 100 ಎನ್‌ಕೌಂಟರ್‌ಗಳು ಮತ್ತು 129 ಭಯೋತ್ಪಾದಕರ ಸಂಚಿನ ಘಟನೆ ನಡೆದಿತ್ತು ಎಂದು ಅವರು ತಿಳಿಸಿದರು.