ಮಹಿಳೆಯರೇ ಗುಡ್‌ನ್ಯೂಸ್ | ಉಚಿತವಾಗಿ ಫ್ಯಾಶನ್ ಡಿಸೈನಿಂಗ್/ ಟೈಲರಿಂಗ್ ತರಬೇತಿ ಪಡೆಯಲು ಇಲ್ಲಿದೆ ಸುವರ್ಣ ಅವಕಾಶ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಭಾಗದ ನಿರುದ್ಯೋಗಿ ಯುವತಿಯರಿಗೆ ಫ್ಯಾಶನ್ ಡಿಸೈನಿಂಗ್/ ಟೈಲರಿಂಗ್ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಪ್ರಸ್ತುತ ರುಡ್ಸೆಟ್ ಸಂಸ್ಥೆಯ ವತಿಯಿಂದ ಫ್ಯಾಶನ್ ಡಿಸೈನಿಂಗ್/ ಟೈಲರಿಂಗ್ ಕುರಿತ 30 ದಿನಗಳ ಉಚಿತ ತರಬೇತಿಯನ್ನು ಫೆಬ್ರವರಿ 13 ರಿಂದ ಹಮ್ಮಿಕೊಳ್ಳಲಾಗಿದ್ದು, ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿರಬೇಕು ಮತ್ತು ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು.
ಮುಖ್ಯವಾಗಿ ಫ್ಯಾಶನ್ ಡಿಸೈನಿಂಗ್/ ಟೈಲರಿಂಗ್ ತರಬೇತಿ ಪಡೆಯಲು ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ನ್ನು ಕಡ್ಡಾಯವಾಗಿ ಹೊಂದಿರಬೇಕು. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 13 ರಂದು ನಡೆಯಲಿರುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದ್ದು, ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು ಎಂದು ಮಾಹಿತಿ ತಿಳಿಸಲಾಗಿದೆ.
ಅದಲ್ಲದೆ ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿಯ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು ಎಂದು ತಿಳಿಸಲಾಗಿದೆ.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನೇರ ಭೇಟಿ ನೀಡಬಹುದು.
ಅದಲ್ಲದೆ ಕಚೇರಿ ದೂರವಾಣಿ ಸಂಖ್ಯೆ: 080-27728166 (ಬೆಳಿಗ್ಗೆ 9.30 ಗಂಟೆಯಿAದ ಸಂಜೆ 6 ಗಂಟೆ), ಮೊಬೈಲ್ ಸಂಖ್ಯೆ: 9113880324, 9740982585, 8884554510, 8050549412, 9241482541 ಅನ್ನು ಸಂಪರ್ಕಿಸಿ ಮಾಹಿತಿ ತಿಳಿಯಬಹುದು ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ಆನಂದ್.ಜೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.