ಭಾರತಕ್ಕೆ 5 ದೇಶಗಳಿಂದ ಬರುವ ವಿದೇಶಿ ಪ್ರಯಾಣಿಕರಿಗೆ ಫೆ.13 ರಿಂದ RTPCR ಟೆಸ್ಟ್ ಕಡ್ಡಾಯವಿಲ್ಲ!

ಕೊರೊನಾ ಮಹಾಮಾರಿಯ ಮತ್ತೊಂದು ರೂಪಾಂತರ ವಿದೇಶದಲ್ಲಿ ಕಂಡುಬಂದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕಡ್ಡಾಯ ಕೋವಿಡ್ ಪರೀಕ್ಷೆಯಲ್ಲಿ ಬದಲಾವಣೆ ಮಾಡಲಾಗಿದೆ.

ಹೌದು!! ಕೇಂದ್ರ ಆರೋಗ್ಯ ಸಚಿವಾಲಯ ಚೀನಾ, ಸಿಂಗಾಪುರ, ಕೊರಿಯಾ, ಥಾಯ್ಲೆಂಡ್ ಮತ್ತು ಜಪಾನ್‌ನಿಂದ ಆಗಮಿಸುವ ಪ್ರಯಾಣಿಕರಿಗೆ ವಿಧಿಸಲಾಗಿದ್ದ ಕಡ್ಡಾಯ ಕೋವಿಡ್ ಪರೀಕ್ಷಾ ನಿಯಮದಲ್ಲಿ ಬದಲಾವಣೆ ಮಾಡಿದ್ದು ಈ ನಿಯಮಗಳನ್ನು ಕೈ ಬಿಟ್ಟಿರುವ ಕುರಿತು ಶುಕ್ರವಾರ ಮಾಹಿತಿ ನೀಡಿದೆ.
‘ಸಚಿವಾಲಯವು ತನ್ನ ‘ಅಂತರರಾಷ್ಟ್ರೀಯ ಆಗಮನಕ್ಕಾಗಿ ಮಾರ್ಗಸೂಚಿಗಳನ್ನು’ ನವೀಕರಣ ಮಾಡಿದ್ದು ಜೊತೆಗೆ ನಿರ್ಗಮನ ಪೂರ್ವ COVID-19 ಪರೀಕ್ಷೆಯ ಅವಶ್ಯಕತೆಗಳನ್ನು ಕೈಬಿಡುತ್ತಿದೆ. ನಾಗರಿಕ ವಿಮಾನಯಾನ ಸಚಿವಾಲಯದ ‘ಏರ್ ಸುವಿಧಾ’ ಪೋರ್ಟಲ್‌ನಲ್ಲಿ ಸ್ವಯಂ-ಆರೋಗ್ಯ ಘೋಷಣೆಯನ್ನು ಅಪ್‌ಲೋಡ್ ಮಾಡಲಾಗಿದೆ.

ಕೆಲ ದೇಶಗಳಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ಕೋವಿಡ್ ಪರೀಕ್ಷಾ ನಿಯಮದಿಂದ ವಿನಾಯಿತಿ ನೀಡಲಾಗಿದ್ದು, ಕೋವಿಡ್ ಪ್ರಕರಣಗಳ ಹೆಚ್ಚಳ ಉಂಟಾದ ಪರಿಣಾಮ, ಕೇಂದ್ರ ಸರ್ಕಾರ ದೇಶದ ಹಿತದೃಷ್ಟಿಯನ್ನು ಗಮನದಲ್ಲಿರಿಸಿ, ಚೀನಾ, ಸಿಂಗಾಪುರ, ಕೊರಿಯಾ, ಥೈಲ್ಯಾಂಡ್ ಮತ್ತು ಜಪಾನ್‌ನಿಂದ ಆಗಮಿಸುವ ಪ್ರಯಾಣಿಕರು ‘ಏರ್ ಸುವಿಧಾ’ ಪೋರ್ಟಲ್‌ನಲ್ಲಿ ಕಡ್ಡಾಯವಾಗಿ ಆರ್‌ಟಿ-ಪಿಸಿಆರ್ ವರದಿಯನ್ನು ಅಪ್‌ಲೋಡ್ ಮಾಡಲು ಅದೇಶಿಸಿತ್ತು. ಇದೀಗ ಈ ನಿಯಮವನ್ನು ಹಿಂಪಡೆದಿದ್ದು, ಇದರಿಂದಾಗಿ ಅಧಿಸೂಚನೆಯ ಅನುಸಾರ, ಫೆಬ್ರವರಿ 13 ರಿಂದ ಚೀನಾ, ಸಿಂಗಾಪುರ್, ಹಾಂಗ್ ಕಾಂಗ್, ರಿಪಬ್ಲಿಕ್ ಆಫ್ ಕೊರಿಯಾ, ಥೈಲ್ಯಾಂಡ್ ಮತ್ತು ಜಪಾನ್’ ದೇಶಗಳಿಂದ ಭಾರತಕ್ಕೆ ಆಗಮಿಸುವವರು ಕಡ್ಡಾಯ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಗಾಗಬೇಕಾದ ಅವಶ್ಯಕತೆ ಇಲ್ಲ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

Leave A Reply

Your email address will not be published.