HMT Recruitement 2023 | ಇಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಮಾಡಿದವರಿಗೆ ಉತ್ತಮ ಅವಕಾಶ | ಒಟ್ಟು ಹುದ್ದೆ-40, ಅರ್ಜಿ ಸಲ್ಲಿಸಲು ಕೊನೆ ದಿನ-ಫೆ.28

ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಅಭ್ಯರ್ಥಿಗಳಿಗೆ ಹಿಂದೂಸ್ತಾನ್ ಮೆಷಿನ್ ಟೂಲ್ಸ್ ಲಿಮಿಟೆಡ್ ಕಂಪೆನಿಯಲ್ಲಿ ಉದ್ಯೋಗವಕಾಶವಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆಯ ಹೆಸರು : HMT ಮೆಷಿನ್ ಟೂಲ್ಸ್ ಲಿಮಿಟೆಡ್
ಒಟ್ಟು ಪೋಸ್ಟ್‌ಗಳ ಸಂಖ್ಯೆ: 40
ಡಿಪ್ಲೊಮಾ ಅಪ್ರೆಂಟಿಸ್- 20 ಹುದ್ದೆಗಳು
ಪದವೀಧರ ಅಪ್ರೆಂಟಿಸ್- 20 ಹುದ್ದೆಗಳು
ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ

ಅರ್ಹತಾ ಮಾನದಂಡಗಳು:
ಡಿಪ್ಲೊಮಾ ಅಪ್ರೆಂಟಿಸ್- ಈ ಹುದ್ದೆಗಳಿಗೆ ಮೆಕ್ಯಾನಿಕಲ್ ಅಥವಾ ಎಲೆಕ್ಟ್ರಿಕಲ್ ಇಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಮಾಡಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಪದವೀಧರ ಅಪ್ರೆಂಟಿಸ್- ಮೆಕ್ಯಾನಿಕಲ್ ಅಥವಾ ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಮಾಡಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಮಾಸಿಕ ವೇತನ:
ಡಿಪ್ಲೊಮಾ ಅಪ್ರೆಂಟಿಸ್- 8,000 ರೂ.
ಪದವೀಧರ ಅಪ್ರೆಂಟಿಸ್- 9,000 ರೂ.

ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ವಿದ್ಯಾರ್ಹತೆಯ ಪ್ರಮಾಣಪತ್ರದ ಝೆರಾಕ್ಸ್ ಪ್ರತಿಗಳೊಂದಿಗೆ ಈ ಕೆಳಗಿನ ಇ-ಮೇಲ್ ವಿಳಾಸಕ್ಕೆ ಕಳುಹಿಸಬೇಕು.
ಇ-ಮೇಲ್ ಐಡಿ:- mbxtrg@hmtmachinetools.com
ಹೆಚ್ಚಿನ ಮಾಹಿತಿಗೆ : 9880234325
ಅಧಿಕೃತ ವೆಬ್​ಸೈಟ್ :  hmtmachinetools.com

ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಫೆಬ್ರವರಿ 28, 2023

Leave A Reply

Your email address will not be published.