ಕಾರ್ಕಳದಲ್ಲಿ ಸುನಿಲ್ ಕುಮಾರ್ ವಿರುದ್ಧದ ಸ್ಪರ್ಧೆಗೆ ಬಿಜೆಪಿಯ ಸಚಿವರು,ಶಾಸಕರಿಂದ ತನುಮನ ಧನದ ಭರವಸೆ -ಮುತಾಲಿಕ್ ಬಾಂಬ್

Share the Article

ಮಂಗಳೂರು: ಕಾರ್ಕಳದಲ್ಲಿ ಸ್ಪರ್ಧಿಸಲು ಬಿಜೆಪಿ ಸಚಿವರು, ಶಾಸಕರು ತನುಮನ ಧನದ ಸಹಕಾರ ನೀಡುವ ಭರವಸೆ ನೀಡಿದ್ದಾರೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುತಾಲಿಕ್ ಅವರು,ಕಾರ್ಕಳದ ಸುನಿಲ್ ಕುಮಾರ್ ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿಸಲ್ಪಡುತ್ತಿದ್ದು, ಮುಖ್ಯಮಂತ್ರಿ ರೇಸ್ ನಲ್ಲಿರುವ ಇತರ ಕೆಲವು ಬಿಜೆಪಿ ಮುಖಂಡರು ನನಗೆ ಸಹಕಾರದ ಭರವಸೆ ನೀಡಿದ್ದಾರೆ.

ಕಾರ್ಕಳದಲ್ಲಿ ನನ್ನ ಗೆಲುವು ಖಚಿತ. ನಕಲಿ ಹಿಂದುತ್ವ ಮತ್ತು ಭ್ರಷ್ಟಾಚಾರದ ವಿರುದ್ದ ನನ್ನ ಸ್ಪರ್ಧೆ ಎಂದರು.

ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಕಾರ್ಕಳ ವಿಧಾನಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಈಗಾಗಲೇ ಘೋಷಣೆ ಮಾಡಿದ್ದಾರೆ.

Leave A Reply