ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಕೊನೆ ದಿನ ಫೆ.28

ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಪ್ರೋತ್ಸಹ ನೀಡುವ ನಿಟ್ಟಿನಲ್ಲಿ ಹಲವು ಸಂಸ್ಥೆಗಳು ಪ್ರೋತ್ಸಾಹಧನವನ್ನು ನೀಡುತ್ತಾ ಬಂದಿದ್ದಾರೆ. ಅದರಂತೆ, ಇದೀಗ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನಿಸಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

 

2022-23ನೇ ಸಾಲಿನಲ್ಲಿ ವಿವಿಧ ಕೋರ್ಸ್‌ಗಳಲ್ಲಿ ಅಧ್ಯಯನ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಈ ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಲಭಿಸುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸದ ಮೇಲೆ ಡೌನ್‌ಲೋಡ್‌ ಮಾಡಿಕೊಂಡು, ಪ್ರಿಂಟ್ ತೆಗೆದುಕೊಳ್ಳಬೇಕು. ಹಾಗೆಯೇ ಆನ್‌ಲೈನ್‌ ಅರ್ಜಿ ಸಲ್ಲಿಸುವಾಗ ಕಾಲೇಜಿನ ಹೆಸರು ಇಲ್ಲದೆ ಹೋದಲ್ಲಿ ಕಾಲೇಜಿನ ಹೆಸರನ್ನು ಇಲಾಖಾ ವೆಬ್‌ಸೈಟ್‌ನಲ್ಲಿ ಸೇರಿಸಲು ಸಂಬಂಧಪಟ್ಟ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ಜಿಲ್ಲಾ ಪರಿಶಿಷ್ಟ ವರ್ಗದ ಕಲ್ಯಾಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಲು ಸೂಚಿಸಲಾಗಿದೆ. ಏಕೆಂದರೆ ಇದೇ ಮೊದಲ ವರ್ಷವಾದ್ದರಿಂದ ತಪ್ಪಿಹೋಗಿರುವ ಸಾಧ್ಯತೆ ಇರುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
*ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ sw.kar.nic.in ಗೆ ಭೇಟಿ ನೀಡಿ.
*ಮುಖಪುಟದಲ್ಲಿ ಮೆಟ್ರಿಕ್ ನಂತರದ ಪದವಿ/ ಸ್ನಾತಕೋತ್ತರ ಪದವಿ ಪ್ರೋತ್ಸಾಹಧನ ಎನ್ನುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
*ನಂತರ ಮತ್ತೊಂದು ಪುಟ ತೆರೆದುಕೊಳ್ಳುತ್ತದೆ.
*ಆ ಪುಟದಲ್ಲಿ ಆನ್‌ಲೈನ್‌ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ. ಆಗ ಇನ್ನೊಂದು ಪುಟ ತೆರೆಯುತ್ತದೆ
*ಆ ಪುಟದಲ್ಲಿ ಅಗತ್ಯ ವಿವರಗಳನ್ನು ಭರ್ತಿ ಮಾಡಿ, ಸಬ್ಮಿಟ್ ಮಾಡಿ.
*ನಂತರ ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.

ಅಗತ್ಯ ದಾಖಲೆಗಳು:
*ಅಂಕಪಟ್ಟಿ
*ಆಧಾರ್‌ ಕಾರ್ಡ್‌
*ಬ್ಯಾಂಕ್‌ ಪಾಸ್‌ ಬುಕ್‌ ಪ್ರತಿ
*ಫೋಟೋ

ಪ್ರೋತ್ಸಾಹಧನದ ವಿವರ:
*ದ್ವಿತೀಯ ಪಿಯುಸಿ ಮತ್ತು ಮೂರು ವರ್ಷದ ಪಾಲಿಟೆಕ್ನಿಕ್‌ ಡಿಪ್ಲೊಮ ವಿದ್ಯಾರ್ಥಿಗಳಿಗೆ – ರೂ.20,000/-.
*ಪದವಿ ವಿದ್ಯಾರ್ಥಿಗಳಿಗೆ – ರೂ.25,000/-.
*ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ – ರೂ. 30,000/-.
*ಅಗ್ರಿಕಲ್ಚರ್‌, ಇಂಜಿನಿಯರ್, ವೆಟರನರಿ, ಮೆಡಿಷನ್ ವಿದ್ಯಾರ್ಥಿಗಳಿಗೆ – ರೂ.35,000/-

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಫೆಬ್ರವರಿ 28
ಅಧಿಕೃತ ವೆಬ್‌ಸೈಟ್‌ : sw.kar.nic.in

Leave A Reply

Your email address will not be published.