SSLC ಪೂರ್ವ ಸಿದ್ಧತಾ ಪ್ರವೇಶ ಶುಲ್ಕ ಇಳಿಕೆ- ಬಿಸಿ ನಾಗೇಶ್ ಘೋಷಣೆ

ಈಗಾಗಲೇ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಪೂರ್ವಭಾವಿ ಸಿದ್ಧತೆ ಪರೀಕ್ಷೆಗಳನ್ನು ನಡೆಸುತ್ತಿದ್ದು, ಈ ಕುರಿತಂತೆ ಕೆಳಕಂಡ ಬದಲಾವಣೆಗಳನ್ನು ಪೂರ್ವಭಾವಿ ಪರೀಕ್ಷೆಯನ್ನು ನಡೆಸಲು ಸೂಚಿಸಿದ್ದಾರೆ.

ಪ್ರಸ್ತುತ ಸಾಲಿನಲ್ಲಿ ಎಸ್ಎಸ್ ಎಲ್ ಸಿ ಪೂರ್ವ ಸಿದ್ದತಾ ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ತಲಾ 60 ರೂ. ಬದಲಾಗಿ 50 ರೂ. ಪರೀಕ್ಷಾ ಶುಲ್ಕ ಪಡೆಯುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಆದೇಶ ಹೊರಡಿಸಿದ್ದಾರೆ.

ಪೂರ್ವಭಾವಿ ಪರೀಕ್ಷೆಯ ಕುರಿತು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಿಂದ ಪ್ರಶ್ನೆ ಪತ್ರಿಕೆಗಳನ್ನು ಸಿದ್ದಪಡಿಸುವುದರ ಬದಲಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಹಂತದಲ್ಲಿ ವಾರ್ಷಿಕ ಪರೀಕ್ಷೆಯ ಮಾದರಿಯಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಲಾಗಿನ್ ಕಳುಹಿಸಲು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಲ್ಲಿ ಮುದ್ರಿಸಿ, ಪೂರ್ವಭಾವಿ ಪರೀಕ್ಷೆಗಳನ್ನು ನಡೆಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ಈ ಮೇಲಿನಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಪ್ರತಿ ವಿದ್ಯಾರ್ಥಿಯಿಂದ 60 ರೂ.ಬದಲಾಗಿ 50 ರೂ. ಸಂಗ್ರಹಿಸುವಂತೆ ಆದೇಶ ನೀಡಿದ್ದಾರೆ.

Leave A Reply

Your email address will not be published.