Karnataka PDO Recruitment 2023 : ರಾಜ್ಯದಲ್ಲಿ 570 ಪಿಡಿಒ ನೇಮಕಕ್ಕೆ ಕ್ರಮ – ಸಿ ಸಿ ಪಾಟೀಲ್
ರಾಜ್ಯದಲ್ಲಿ ಸ್ಥಳೀಯ ಆಡಳಿತ ಸುಗಮವಾಗಿ ನಡೆಯಲು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಥವಾ ಪಿಡಿಒ ಹುದ್ದೆಗಳಲ್ಲಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಇರಬೇಕಾಗುತ್ತದೆ. ರಾಜ್ಯ ಸರ್ಕಾರ ಈ ಹುದ್ದೆಗಳನ್ನು ಸದ್ಯದಲ್ಲೇ ಭರ್ತಿ ಮಾಡುವ ಸಾಧ್ಯತೆ ದಟ್ಟವಾಗಿದೆ.
ರಾಜ್ಯದಾದ್ಯಂತ ಸ್ಥಳೀಯ ಆಡಳಿತದಲ್ಲಿ ಸುಧಾರಣೆ ಮಾಡುವ ಸಲುವಾಗಿ ದ ಶೀಘ್ರದಲ್ಲೇ 570 ಪಿಡಿಒ / ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ನೇಮಕ ಮಾಡಲು ಕ್ರಮ ಕೈಗೊಳ್ಳುವ ಭರವಸೆಯನ್ನು ವಿಧಾನಸಭೆಯಲ್ಲಿ ಲೋಕೋಪಯೋಗಿ ಸಚಿವ ಸಿ ಸಿ ಪಾಟೀಲರವರು ಇತ್ತೀಚೆಗಷ್ಟೆ ಮಾಹಿತಿ ನೀಡಿದ್ದಾರೆ.
ಸದ್ಯ, ರಾಜ್ಯದಲ್ಲಿ ಪಿಡಿಒ (PDO)ಹುದ್ದೆಗಳ ಕೊರತೆಯಿರುವುದರಿಂದ ಒಬ್ಬ ಪಿಡಿಒ’ಗೆ 2-3 ಪಂಚಾಯಿತಿಯ ಜವಾಬ್ದಾರಿ ನಿರ್ವಹಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಹೀಗಾಗಿ ಹಳ್ಳಿಯ ಜನರು ತಮ್ಮ ಕಾರ್ಯ ಕೆಲಸಗಳಿಗೆ ಪಿಡಿಒ’ ಗಳು ಬರುವವರೆಗೆ ತಮ್ಮ ಕೆಲಸ ಕಾರ್ಯ ಪೂರ್ಣಗೊಳಿಸಲು ಕಾಯುತ್ತಾ ಕೂರಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ, ರಾಜ್ಯ ಸರ್ಕಾರ ಶೀಘ್ರದಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸುವ ನಿರೀಕ್ಷೆ ಇದೆ.
ಹಾಗಾದ್ರೆ, ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಖಾಲಿ ಇರುವ ಹುದ್ದೆಗಳ ಮಾಹಿತಿ, ವೇತನ, ನೇಮಕಾತಿ ಪ್ರಕ್ರಿಯೆ ಬಗ್ಗೆ ಆಸಕ್ತ ಅಭ್ಯರ್ಥಿಗಳು ಮಾಹಿತಿ ತಿಳಿದಿರುವುದು ಒಳ್ಳೆಯದು.
ಪಿಡಿಒ ಹುದ್ದೆಗಳು: (PDO) 727 ಖಾಲಿಯಿದೆ.
ವಿದ್ಯಾರ್ಹತೆ ಮತ್ತು ವಯೋಮಿತಿ:(education and age limits)
ಪಿಡಿಒ ಹುದ್ದೆಗೆ ಕಡ್ಡಾಯವಾಗಿ ಅರ್ಜಿ ಸಲ್ಲಿಸುವ ಕೊನೆ ದಿನಾಂಕದ ಒಳಗಾಗಿ ಯಾವುದೇ ಪದವಿ ಪಾಸ್ ಆಗಿರಬೇಕು.ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ವರ್ಷಗಳಾಗಿದ್ದು, ಗರಿಷ್ಠ 35 ವರ್ಷ ಮೀರಿರಬಾರದು. ಒಬಿಸಿಗೆ 3 ವರ್ಷ, ಎಸ್‌ಸಿ/ ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರಲಿದೆ.
ಮಾಸಿಕ ವೇತನ – ರೂ.36,300
ನೇಮಕಾತಿ ಪ್ರಕ್ರಿಯೆ:
ಪಿಡಿಒ ಹುದ್ದೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಲಿಖಿತ ಪರೀಕ್ಷೆ ನಡೆಸಿದ ಬಳಿಕ ಗಳಿಸಿದ ಅಂಕಗಳ ಆಧಾರದ ಅನುಸಾರ ಮೀಸಲಾತಿಯನ್ನು ಪರಿಗಣಿಸಿ,ಹುದ್ದೆಗಳಿಗೆ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ.