Karnataka Budget 2023: ‘ಮುಖ್ಯಮಂತ್ರಿ ವಿದ್ಯಾಶಕ್ತಿ’ ಯೋಜನೆ ಘೋಷಣೆ- ಲಕ್ಷಗಟ್ಟಲೇ ವಿದ್ಯಾರ್ಥಿಗಳಿಗೆ ಅನುಕೂಲ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರು 2023-2024ನೇ ಸಾಲಿನ ಬಜೆಟ್ (Karnataka State Budget 2023-24) ಅನ್ನು ಶುಕ್ರವಾರ (ಫೆ-17) ವಿಧಾನಸಭೆಯಲ್ಲಿ ಮಂಡಿಸಿದ್ದಾರೆ. ಈ ಬಜೆಟ್ನಲ್ಲಿ (Budget) ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತಹ ಯೋಜನೆಗಳನ್ನು ಘೋಷಣೆ ಮಾಡುತ್ತಿದ್ದಾರೆ. ಎಲ್ಲಾ ಫ್ರೌಢ ಶಾಲಾ ವಿದ್ಯಾರ್ಥಿಗಳು(Students) ಉನ್ನತ ಶಿಕ್ಷಣ ಪಡೆಯಲು, ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಸಹಕಾರಿಯಾಗಲು ಸಿಎಂ ‘ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ’ಯನ್ನು (Mukhyamantri Vidyashakti yojana) ಘೋಷಿಸಿದ್ದಾರೆ.
ಸಿಎಂ ಬಸವರಾಜ್ ಬೊಮ್ಮಾಯಿ ಬಜೆಟ್ ನಲ್ಲಿ ‘ಮುಖ್ಯಮಂತ್ರಿ ವಿದ್ಯಾಶಕ್ತಿ’ ಯೋಜನೆ ಘೋಷಣೆ ಮಾಡಿದ್ದು, ಈ ಯೋಜನೆ ಅಡಿಯಲ್ಲಿ ಸರ್ಕಾರಿ ಪದವಿಪೂರ್ವ ಮತ್ತು ಸರ್ಕಾರಿ ಪದವಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ನೀಡಲಾಗುವುದು. ಈ ಯೋಜನೆಯಿಂದ ರಾಜ್ಯದ 8 ಲಕ್ಷ ವಿದ್ಯಾರ್ಥಿಗಳು ಅನುಕೂಲ ಪಡೆಯಲಿದ್ದಾರೆ ಎಂದು ಸಿಎಂ ಹೇಳಿದರು.
ಇದಿಷ್ಟೇ ಅಲ್ಲದೆ, ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ‘ಮಕ್ಕಳ ಬಸ್ಸು’ ಎಂಬ ಹೊಸ ಯೋಜನೆಯನ್ನು ಜಾರಿ ಮಾಡಲಾಗುತ್ತದೆ. ರಾಜ್ಯದಲ್ಲಿ ಈಗಾಗಲೇ 19 ಲಕ್ಷ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಾರ್ವಜನಿಕ ಬಸ್ಸುಗಳ ಸೇವೆ ಅವಲಂಬಿಸಿದ್ದು, ಇಂತಹ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಾರಿಗೆ ನಿಗಮಗಳ ಮೂಲಕ 100 ಕೋಟಿ ರೂ ವೆಚ್ಚದಲ್ಲಿ 1000 ಹೊಸ ಕಾರ್ಯಾಚರಣೆ ಶುರುವಾಗಲಿದೆ. ಜೊತೆಗೆ ಇನ್ನು 2 ಲಕ್ಷ ಹೊಸ ವಿದ್ಯಾರ್ಥಿಗಳಿಗೆ ಈ ಪ್ರಯೋಜನ ಸಿಗಲಿದೆ ಎಂದು ಹೇಳಿದರು.
ರಾಜ್ಯ ಸರ್ಕಾರ ‘ವಿವೇಕ ಯೋಜನೆ’ಯಡಿಯಲ್ಲಿ (Viveka scheme) 7,601 ಶಾಲಾ ಮತ್ತು ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿಗಳನ್ನು 1,194 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸುತ್ತಿದೆ. ಇಲಾಖೆಯ ಇತರೆ ಯೋಜನೆಗಳಡಿ ಹೆಚ್ಚುವರಿಯಾಗಿ 1,955 ಕೊಠಡಿಗಳನ್ನು 382 ಕೋಟಿ ರೂ. ವೆಚ್ಚದಲ್ಲಿ ಅನುಮೋದಿಸಲಾಗಿದೆ ಎನ್ನಲಾಗಿದೆ.
ಇನ್ನು ನರೇಗಾ ಸಂಯೋಜನೆಯೊಂದಿಗೆ (NAREGA) 250 ಕೋಟಿ ರೂ. ವೆಚ್ಚದಲ್ಲಿ 7,750 ಎಲ್ಲಾ ಶಾಲಾ ಕಾಲೇಜುಗಳಲ್ಲಿ ಶೌಚಾಲಯಗಳನ್ನು ನಿರ್ಮಿಸಲಿದ್ದು, ಯೋಜನೆಯಡಿ ಮಾರ್ಚ್ 2023ರ ಅಂತ್ಯದಲ್ಲಿ 2,169 ಶೌಚಾಲಯಗಳು ಪೂರ್ಣಗೊಳ್ಳಲಿವೆ ಎಂದು ಹೇಳಿದ್ದಾರೆ.