Udupi : ಉಡುಪಿ, ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ, ಪೊಲೀಸ್ ದಾಳಿ!

Share the Article

 

ಉಡುಪಿ : ಬಾಡಿಗೆಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದುಕೊಂಡ ಪೊಲೀಸರು ದಾಳಿ ಮಾಡಿದ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕನಿಡಿಯೂರು ಎಂಬಲ್ಲಿಂದ ವರದಿಯಾಗಿದೆ‌.

ತೆಂಕನಿಡಿಯೂರು ಗ್ರಾಮದ ಹಂಪನ್ ಕಟ್ಟೆಯ ಬಾಡಿಗೆ ಮನೆಯಲ್ಲಿ ಹಲವಾರು ಸಮಯಗಳಿಂದ ನಡೆಯುತ್ತಿದ್ದ ವೇಶ್ಯಾವಟಿಕೆ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಅದರಂತೆ ಮಲ್ಪೆ ವೃತ್ತ ನಿರೀಕ್ಷಕ ಸುರೇಶ್ ಕೆ.ಎಸ್ ನೇತೃತ್ವದ ತಂಡ ದಾಳಿ ನಡೆಸಿದಾಗ ಮನೆಯಲ್ಲಿ ಐವರು ಮಹಿಳೆಯರು ಹಾಗೂ ಮೂವರು ಪುರುಷರು ಇದ್ದರು ಎನ್ನಲಾಗಿದೆ.

ದಾಳಿ ಸಂದರ್ಭದಲ್ಲಿ ಇಬ್ಬರು ಯುವಕರು ಪೊಲೀಸರು ಕೈಯಿಂದ ತಪ್ಪಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Leave A Reply