Subsidy : ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ಕುಶಲಕರ್ಮಿಗಳಿಗೆ ಸಹಾಯಧನ

ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ವಿವಿಧ ವರ್ಗದ ಕುಶಲಕರ್ಮಿಗಳಿಗೆ ತಲಾ 50,000 ವರೆಗೆ ಸಹಾಯಧನ ಯೋಜನೆಯನ್ನು ಜಾರಿಗೊಳಿಸಲಾಗಿದ್ದು ವಾಣಿಜ್ಯ ಬ್ಯಾಂಕ್ ಸಹಕಾರ ಬ್ಯಾಂಕ್ ಹಾಗೂ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ (ಪತ್ತಿನ ಸಹಕಾರ ಸಂಘಗಳನ್ನು ಹೊರತುಪಡಿಸಿ) ಮಂಜೂರಾದ ಸಾಲದ ಮೇಲೆ ಇಲಾಖೆ ವತಿಯಿಂದ ಶೇಕಡ 30ರಷ್ಟು ಗರಿಷ್ಠ 15,000 ವರೆಗೆ ಸಹಾಯಧನ ನೀಡಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 28.

ಉಡುಪಿ ಜಿಲ್ಲೆಯ 18 ವರ್ಷ ಮೇಲ್ಪಟ್ಟ ಅರ್ಹರು ಅರ್ಜಿಯನ್ನು ಸಲ್ಲಿಸಬಹುದು. ಪಂಚಾಯತ್ ವ್ಯಾಪ್ತಿಯ ಕುಶಲಕರ್ಮಿಗಳು ಸಂಬಂಧಿಸಿದ ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ ಹಾಗೂ ನಗರ ಪ್ರದೇಶದ ಕುಶಲಕರ್ಮಿಗಳು ಕೈಗಾರಿಕಾ ವಿಸ್ತರಣಾಧಿಕಾರಿ ಉಡುಪಿ ರವರಿಂದ ಕುಶಲಕರ್ಮಿ ವೃತ್ತಿಯನ್ನು ನಡೆಸುತ್ತಿರುವ ಬಗ್ಗೆ ಅರ್ಜಿಯೊಂದ ದಿನ ನಿಗದಿತ ನಮೂನೆಯಲ್ಲಿ ದೃಢೀಕರಣ ಪಡೆದು ಕೊನೆಯ ದಿನಾಂಕದ ಮುಂಚಿತವಾಗಿ ಕಚೇರಿಗೆ ಸಲ್ಲಿಸಬೇಕು.

ಜಂಟಿ ನಿರ್ದೇಶಕರ ಕಛೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ ,ಶಿವಳ್ಳಿ ಕೈಗಾರಿಕಾ ಪ್ರದೇಶ, ಉಡುಪಿ ಅಥವಾ ಕೈಗಾರಿಕಾ ವಿಸ್ತರಣಾಧಿಕಾರಿ ಉಡುಪಿ ಮೊ.ನ;8310828195 ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave A Reply

Your email address will not be published.