Hassan news: ಬೆಂಕಿ ನಂದಿಸಲು ಹೋದ ಅರಣ್ಯ ಇಲಾಖೆ ಸಿಬ್ಬಂದಿ ಕಾಡ್ಗಿಚ್ಚಿಗೆ ಸಿಲುಕಿ ಮೃತ್ಯು

Share the Article

Hassan: ಹಾಸನ : ಸಕಲೇಶಪುರ ತಾಲೂಕಿನ ಪಶ್ಚಿಮಘಟ್ಟದಲ್ಲಿ ಕಾಡ್ಗಿಚ್ಚಿಗೆ ಸಿಲುಕಿ ಸುಟ್ಟಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದ ಅರಣ್ಯ ವೀಕ್ಷಕ ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೃತಪಟ್ಟವರನ್ನು ತೀರ್ಥಹಳ್ಳಿ ನಿವಾಸಿ ಸುಂದರೇಶ್ ಎಂದು ಗುರುತಿಸಲಾಗಿದೆ.

ಸಕಲೇಶಪುರ ತಾಲೂಕಿನ ಮೂರ್ಕಣ್ಣು ಗುಡ್ಡ ಅರಣ್ಯ ಪ್ರದೇಶದಲ್ಲಿ ಗುರುವಾರ ಮಧ್ಯಾಹ್ನ ಕಾಡ್ಗಿಚ್ಚು ಕಾಣಿಸಿಕೊಂಡಿತ್ತು. ಕಾಡ್ಗಿಚ್ಚಿಗೆ ಸಿಲುಕಿ ಅರಣ್ಯ ಇಲಾಖೆ ಸಿಬ್ಬಂದಿಗಳಾದ ಮಂಜುನಾಥ್, ಸುಂದರೇಶ್, ತುಂಗೇಶ್, ಮಹೇಶ್ ಗಂಭೀರ ಗಾಯಗೊಂಡಿದ್ದರು.

ಗಾಯಗೊಂಡವರನ್ನು ಸಕಲೇಶಪುರದ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹಾಸನ(Hassan) ದ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿತ್ತು.

ಗಾಯಾಳುಗಳ ಪೈಕಿ ಗಂಭೀರಗಾಯಗೊಂಡಿದ್ದ ಮಂಜುನಾಥ್ ಹಾಗೂ ಸುಂದರೇಶ್ ರವರಿಗೆ
ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಆದರೆ, ಚಿಕಿತ್ಸೆ ಫಲಕಾರಿಯಾಗದೆ ತೀವ್ರ ಸುಟ್ಟ ಗಾಯಗಳೊಂದಿಗೆ ಸುಂದರೇಶ್ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

Leave A Reply