Right to Education : ಪೋಷಕರೇ ಗಮನಿಸಿ, RTE ಸೀಟಿನ ಕುರಿತು ಮಹತ್ವದ ಮಾಹಿತಿ!
Right To Education : ಇಂದಿನ ಕಾಲದಲ್ಲಿ ಶಿಕ್ಷಣ(Education) ಅತ್ಯಗತ್ಯವಾಗಿದ್ದು,ಮಕ್ಕಳ ಭವಿಷ್ಯ ರೂಪಿಸಿಕೊಳ್ಳಲು ಭವಿಷ್ಯದ ಏಳಿಗೆಗೆ ಪೂರಕವಾಗಿ ವಿದ್ಯಾರ್ಹತೆ ಮಕ್ಕಳ ಏಳಿಗೆಗೆ ಮಹತ್ತರ ಪಾತ್ರ ವಹಿಸುತ್ತದೆ. ಇದೀಗ, ಮಕ್ಕಳನ್ನು ಶಾಲೆಗೆ ಸೇರಿಸಲು ಅಣಿಯಾಗಿರುವ ಪೋಷಕರಿಗೆ ಮಹತ್ವದ ಮಾಹಿತಿ ಹೊರಬಿದ್ದಿದೆ.
ಹೌದು!! 2023-24ನೇ ಸಾಲಿನಲ್ಲಿ ಶಿಕ್ಷಣ ಹಕ್ಕು ಕಾಯ್ದಿಯಡಿ ದಾಖಲಾತಿ ಮಾಡಲು ( RTE Admission ) ಮಾರ್ಚ್ 20, 2023ರಿಂದ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸದ್ಯ, ಈ ಕುರಿತು ಪ್ರಾಥಮಿಕ ಶಿಕ್ಷಣ ಇಲಾಖೆಯ ನಿರ್ದೇಶಕರು, 2023-24ನೇ ಸಾಲಿನಲ್ಲಿ ಶಿಕ್ಷಣ ಹಕ್ಕು ಕಾಯಿದೆಯ ಅನುಸಾರ ( Right to Education Act – RTE ) ದಾಖಲಾತಿಗಾಗಿ ಅರ್ಜಿಗಳನ್ನು ದಿನಾಂಕ 20-03-2023ರಿಂದ 20-04-2023ರವರೆಗೆ ಅರ್ಜಿ ಸ್ವೀಕರಿಸುವ ಬಗ್ಗೆ ಪತ್ರಿಕಾ ಪ್ರಕಟಣೆಯ ಮೂಲಕ ಮಾಹಿತಿ ನೀಡಿದ್ದಾರೆ.
ಇಂದು ಪುಸ್ತಕ (book) ಹಿಡಿಯಬೇಕಿದ್ದ ಅದೆಷ್ಟೋ ಕೈಗಳು ಆರ್ಥಿಕ ಪರಿಸ್ಥಿತಿಯಿಂದ ಓದಿಗೆ ವಿರಾಮ ಹೇಳಿ ಕೂಲಿ ಕೆಲಸದತ್ತ ಮುಖ ಮಾಡುತ್ತಿರುವ ಪ್ರಕರಣಗಳು ಕೂಡ ಇದ್ದು, ಸರ್ಕಾರ ಮಕ್ಕಳ ಶಿಕ್ಷಣಕ್ಕೆ ನೆರವಾಗುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ರೂಪಿಸಿ ಮಕ್ಕಳ(encouragement of children’s education ) ಕಲಿಕೆಯನ್ನು ಪ್ರೋತ್ಸಾಹಿಸುತ್ತಿದೆ.
ಇದೀಗ, ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ (right to education act) ಮಕ್ಕಳ ಹಕ್ಕು ಕಾಯಿದೆ-2009ರ ಅಡಿಯಲ್ಲಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ಮಕ್ಕಳಿಗೆ ಪ್ರವೇಶ (admission)ಪಡೆಯಲು ಪೋಷಕರು ಅರ್ಜಿಯನ್ನು ಸಲ್ಲಿಸಬಹುದು ಎಂಬುದಾಗಿ ಪ್ರಾಥಮಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ಮಾಹಿತಿ ನೀಡಿದ್ದಾರೆ.
ಇದರ ಜೊತೆಗೆ, ಅರ್ಜಿ ಸಲ್ಲಿಸುವ ಪೋಷಕರು ತಮ್ಮ ವ್ಯಾಪ್ತಿಯ ಶಾಲೆಗಳ ಮಾಹಿತಿಯನ್ನು ಪಡೆದುಕೊಳ್ಳಲು ಇಲಾಖಾ ವೆಬ್ ಸೈಟ್ ಗೆ https://www.schooleducation.kar.nic.in ಭೇಟಿ ನೀಡಿ ಶಾಲೆಗಳ ಬಗ್ಗೆ ಮಾಹಿತಿ ಖಚಿತಪಡಿಸಿಕೊಳ್ಳಬೇಕಾಗುತ್ತದೆ. ಈ ಪ್ರಕ್ರಿಯೆಯ ನಂತರ ಆನ್ ಲೈನ್ ಮೂಲಕ ಆರ್ ಟಿಇ ಸೀಟಿಗೆ ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ಶಿಕ್ಷಣ ಇಲಾಖೆಯ ನಿರ್ದೇಶಕರು ಮಾಹಿತಿ ನೀಡಿದ್ದಾರೆ.