PM Kisan 13th Installment : ಈ ದಿನದಂದು 13ನೇ ಕಂತು ಬಿಡುಗಡೆ ಸಾಧ್ಯತೆ ! ಕೆವೈಸಿ ಸ್ಟೇಟಸ್ ಈ ರೀತಿ ಚೆಕ್ ಮಾಡಿ !
PM Kisan 13th Installment : ರೈತರ ಉನ್ನತಿಗಾಗಿ ಭಾರತ (india )ಸರ್ಕಾರ (government )ನಡೆಸುತ್ತಿರುವ ಪ್ರಮುಖ ಯೋಜನೆಯೇ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ(PM kissan samman yojana )ಆಗಿದೆ. ಹೌದು ಈಗಾಗಲೇ ಈ ಯೋಜನೆಯಡಿ 12 ಕಂತುಗಳ ಹಣವನ್ನು ಪಡೆದಿರುವ ರೈತರು ಪಿಎಂ ಕಿಸಾನ್ ಯೋಜನೆಯ 13ನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದು 13 ನೇ ಕಂತು (PM Kisan 13th Installment ) ಕೂಡ ಶೀಘ್ರದಲ್ಲೇ ಬಿಡುಗಡೆಯಾಗುವ ನಿರೀಕ್ಷೆಯಿದೆ. ಅದಕ್ಕೂ ಮೊದಲು 13ನೇ ಕಂತಿನ ಪಿಎಂ ಕಿಸಾನ್ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರೂ ಇದೆಯೇ ಎಂದು ಪರಿಶೀಲಿಸಿ.
ಈಗಾಗಲೇ 2018ರಲ್ಲಿ ಆರಂಭವಾದ ಈ ಯೋಜನೆಯಡಿ ರೈತರಿಗೆ ಪ್ರತಿ ವರ್ಷ ಮೂರು ಕಂತುಗಳಲ್ಲಿ 6,000 ರೂ. ಈ ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ (bank account )ಕಳುಹಿಸಲಾಗುತ್ತಿತ್ತು. ಪ್ರತಿ ಕಂತಿನಲ್ಲೂ 2 ಸಾವಿರ ರೂಪಾಯಿ ನೀಡಲಾಗುತ್ತದೆ. ಇದು ನೇರವಾಗಿ ರೈತರ ಖಾತೆಗೆ ಜಮೆಯಾಗುವ ಯೋಜನೆಯಾಗಿದೆ.
ಸದ್ಯ ಈ ಯೋಜನೆಯ 13ನೇ ಕಂತು ಫೆಬ್ರವರಿ 24ರಂದು ಬಿಡುಗಡೆಯಾಗುವ ಸಾಧ್ಯತೆಯಿದ್ದು ಅಂದರೆ ಫೆಬ್ರವರಿ 24ರಂದು ರೈತರ ಖಾತೆಗೆ 2 ಸಾವಿರ ರೂಪಾಯಿ ಜಮೆಯಾಗುವ ನಿರೀಕ್ಷೆಯಿದೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.
ಆದರೆ ಪಿಎಂ ಕಿಸಾನ್ ಯೋಜನೆಯ ಕಂತನ್ನು ಪಡೆಯಲು ಇ-ಕೆವೈಸಿ ಪೂರ್ಣಗೊಳಿಸುವುದು ಅತ್ಯಗತ್ಯವಾಗಿದೆ. ಗಮನಾರ್ಹವಾಗಿ ಇ-ಕೆವೈಸಿ ಪೂರ್ಣಗೊಳಿಸಿದ ರೈತರಿಗಷ್ಟೇ ಈ ಯೋಜನೆಯ ಪ್ರಯೋಜನ ಲಭ್ಯವಾಗಲಿದೆ. ನೀವು ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಾಗಿದ್ದರೆ ಈ ಯೋಜನೆಯ ಪ್ರಯೋಜನಗಳನ್ನು ಪಡೆಯಲು ತಪ್ಪದೇ ಇಂದೇ ಇ-ಕೆವೈಸಿಯನ್ನು ಪೂರ್ಣಗೊಳಿಸಿ.
ಕೆವೈಸಿ ಮಾಡಿಕೊಳ್ಳುವ ವಿವರ ಇಲ್ಲಿದೆ :
• ಅಧಿಕೃತ ಪಿಎಂ ಕಿಸಾನ್ ವೆಬ್‌ಸೈಟ್ https://pmkisan.gov.in/ ಗೆ ಭೇಟಿ ನೀಡಿ
• ಬಲಭಾಗದಲ್ಲಿ, ಮುಖಪುಟದ ಕೆಳಗೆ, ಇಕೆವೈಸಿ ಕಾಣಲಿದೆ.
• ಫಾರ್ಮರ್ಸ್ ಕಾರ್ನರ್‌ನ ಕೆಳಗೆ ಇಕೆವೈಸಿ ನಮೂದಿಸುವ ಬಾಕ್ಸ್ ಇದೆ ಅಲ್ಲಿ ನೀವು e-kyc ಅನ್ನು ಕ್ಲಿಕ್ ಮಾಡಿ, ಆಧಾರ್ Ekyc ಯ ಪುಟ ತೆರೆಯಲಿದೆ
• ಅಲ್ಲಿ ನೀವು ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಬೇಕು
• ನಂತರ ತೋರಿಸಿರುವ ಕ್ಯಾಪ್ಚಾ ಕೋಡ್ ಅನ್ನು ನಮೂದಿಸಬೇಕು
• ಬಳಿಕ search ಬಟನ್ ಕ್ಲಿಕ್ ಮಾಡಬೇಕು
• ನಂತರ ನಿಮ್ಮ ಆಧಾರ್ ಕಾರ್ಡ್‌ಗೆ ಲಿಂಕ್ ಮಾಡಲಾದ ನಿಮ್ಮ ಮೊಬೈಲ್ ಸಂಖ್ಯೆಯನ್ನು ನೀವು ನಮೂದಿಸಬೇಕು
• ಬಳಿಕ Get OTP ಅನ್ನು ಕ್ಲಿಕ್ ಮಾಡಿ, ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ OTP ಕಳುಹಿಸಲಾಗುತ್ತದೆ.
• ಒಟಿಪಿಯನ್ನು ನಮೂದಿಸಿ, Submit ಮಾಡಿ. ನೀವು Submit ಬಟನ್ ಕ್ಲಿಕ್ ಮಾಡಿದ ಬಳಿಕ ನಿಮ್ಮ ಪಿಎಂ ಕಿಸಾನ್ ಇ-ಕೆವೈಸಿ ಯಶಸ್ವಿಯಾಗುತ್ತದೆ.
ಪಿಎಂ ಕಿಸಾನ್ ಯೋಜನೆಯ 13ನೇ ಕಂತಿನ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಎಂದು ಈ ರೀತಿ ಪರಿಶೀಲಿಸಿ:
• ಮೊದಲನೆಯದಾಗಿ, ನೀವು ಪಿಎಂ ಕಿಸಾನ್ ಯೋಜನೆಯ www.pmkisan.gov.in ವೆಬ್‌ಸೈಟ್‌ಗೆ ಹೋಗಿ.
• ನಂತರ ಬಲಭಾಗದಲ್ಲಿರುವ ಬೆನಿಫಿಶಿಯರಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ.
• ಅಲ್ಲಿ ನೀವು ನಿಮ್ಮ ನೋಂದಣಿ ಸಂಖ್ಯೆ ಅಥವಾ ಮೊಬೈಲ್ ಸಂಖ್ಯೆಯನ್ನು(mobile number )ನಮೂದಿಸಬೇಕು.
• ನಂತರ ನೀವು ಕ್ಯಾಪ್ಚಾ ಕೋಡ್ ಅನ್ನು ನಮೂದಿಸಿ ಮತ್ತು ನಂತರ ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿ.
ಆದರೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಕಂತಿನ ಹಣ ಜಮೆ ಆಗಿಲ್ಲದಿದ್ದರೆ, ನೀವು ಪಿಎಂ ಕಿಸಾನ್ ಸಹಾಯವಾಣಿ ಸಂಖ್ಯೆ – 011-24300606 ಗೆ ಕರೆ ಮಾಡಬಹುದು. ಅಥವಾ ನೀವು ಪಿಎಂ ಕಿಸಾನ್ ಟೋಲ್ ಫ್ರೀ ಸಂಖ್ಯೆ 18001155266 ಕ್ಕೂ ಕೂಡಾ ಕರೆ ಮಾಡಬಹುದು.
ಇದಲ್ಲದೇ ಇಮೇಲ್ ಕೂಡಾ ಮಾಡಬಹುದು. PMkisan-ict@gov.in ಗೆ ಮೇಲ್ ಮಾಡುವ ಮೂಲಕ ಪಿಎಂ ಕಿಸಾನ್ ಯೋಜನೆಯ ಕಂತಿಗೆ ಹಣವನ್ನು ಸ್ವೀಕರಿಸದ ಕಾರಣವನ್ನು ನೀವು ಕೇಳಬಹುದು. ಇಮೇಲ್ ಐಡಿ: pmkisan-ict@gov.in. ಮತ್ತು pmkisan-funds@gov.in
ಸಹಾಯವಾಣಿ ಸಂಖ್ಯೆ: 011-24300606,155261 ಟೋಲ್-ಫ್ರೀ ಸಂಖ್ಯೆ: 1800-115-526
ಈ ರೀತಿಯಾಗಿ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ ಜಮೀನು ಹೊಂದಿರುವ ರೈತರ ಕುಟುಂಬಗಳು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಕಂತು ಪಡೆದುಕೊಳ್ಳಬಹುದು. ಆದರೆ ಪಿಎಂ ಕಿಸಾನ್ ಯೋಜನೆಯ ಕಂತನ್ನು ಪಡೆಯಲು ಇ-ಕೆವೈಸಿ ಪೂರ್ಣಗೊಳಿಸುವುದು ಅತ್ಯಗತ್ಯವಾಗಿದೆ.