Rohini Sindhuri : ಮತ್ತಷ್ಟು ತಾರಕಕ್ಕೇರಿದ IPS vs IAS ವಾರ್! ರೂಪಾಗೆ ಸಿಂಧೂರಿ ಅಭಿಮಾನಿಗಳಿಂದ 9 ಪ್ರಶ್ನೆ: ಇಬ್ಬರಿಗೂ ನೋಟಿಸ್ ಕೊಡುವಂತೆ ಸಿಎಂ ಸೂಚನೆ!!
Rohini Sindhuri : ನಿನ್ನೆಯಿಂದ ರಾಜ್ಯದಲ್ಲಿ ಸಂಚಲನ ಸೃಷ್ಟಿಸುತ್ತಿರುವ ಹಿರಿಯ ಐಪಿಎಸ್ ಹಾಗೂ ಐಎಎಸ್ ಅಧಿಕಾರಿಗಳ ಟಾಕ್ ವಾರ್, ಇಂದು ಕೂಡ ಮುಂದುವರೆದಿದೆ. ಇಂದು ಐಎಎಸ್(IAS) ಅಧಿಕಾರಿ ರೋಹಿಣಿ ಸಿಂಧೂರಿ(Rohini Sindhuri)ಯವರ ಅಭಿಮಾನಿಗಳು ಈ ಪ್ರಕರಣದ ಮಧ್ಯೆ ಪ್ರವೇಶಿಸಿದ್ದಾರೆ. ಅಲ್ಲದೇ ಐಪಿಎಸ್(IPS) ಅಧಿಕಾರಿ ರೂಪಾ.ಡಿ(Rupa D) ಅವರಿಗೆ 9 ಪ್ರಶ್ನೆಗಳನ್ನು ಮುಂದಿಟ್ಟು ನೀವಿದಕ್ಕೆ ಉತ್ತರ ಕೊಡುವಿರಾ ಎಂದು ಪ್ರಶ್ನಿಸಿದ್ದಾರೆ.
ಅಭಿಮಾನಿಗಳು ಕೇಳಿದ ಪ್ರಶ್ನೆಗಳೆಂದರೆ
1. ತಮ್ಮ ಟ್ವೀಟ್’ನಲ್ಲಿ ಶಿಲ್ಪಾನಾಗ್(Shilpa Nag) ಅವರನ್ನು ‘ಕನ್ನಡತಿ’ ಎಂದು ಹೈಲೈಟ್ ಮಾಡಿರುವ ತಾವು, ಸಿಂಧೂರಿಯವರು ಎಂದಾದರೂ ಕನ್ನಡಿಗರನ್ನು ದ್ವೇಷಿಸಿದ್ದನ್ನು ನೋಡಿದ್ದೀರಾ? ಅವರು ಯಾವುದೇ ವೇದಿಕೆ ಮೇಲೆ ತೆಲುಗುನಲ್ಲಿ ಭಾಷಣ ಮಾಡಿದ್ದನ್ನು ನೋಡಿದ್ದೀರಾ?
2. ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ರೋಹಿಣಿ ಸಿಂಧೂರಿ ಅವರದ್ದು ಏನೂ ತಪ್ಪಿಲ್ಲ ಎಂದು ಈಗಾಗಲೇ ಎಲ್ಲರಿಗೂ ತಿಳಿದಿದ್ದು, ಮತ್ತೆ ಮತ್ತೆ ನೀವು ಅವರ ಮೇಲೆ ಆರೋಪ ಹೊರಿಸುತ್ತಿರುವುದು ಏಕೆ ರೂಪಾ.ಡಿ ಅವರೇ.?
3. ಹಿರಿಯ ಐಪಿಎಸ್ ಅಧಿಕಾರಿಯಾದ ತಮ್ಮ ಗಮನಕ್ಕೆ ಈ ಆದೇಶ ಬಂದಿಲ್ಲವೇ.?
4. ಮೈಸೂರಿನ ಡಿಸಿ ನಿವಾಸದ ಈಜುಕೊಳ ನಿರ್ಮಾಣದ ಯೋಜನೆ ಮತ್ತು ಯೋಚನೆ ಎರಡು ನನ್ನದಲ್ಲ ಎಂದು ಸಿಂಧೂರಿಯವರು ಸ್ಪಷ್ಟಪಡಿಸಿದ್ದು ತಮ್ಮ ಗಮನಕ್ಕೆ ಬಂದಿಲ್ಲವೇ ಮೇಡಂ?
5. ತಾವು ನಿನ್ನೆ ನ್ಯೂಸ್ ಚಾನಲ್ ಗಳೊಂದಿಗೆ ಮಾತನಾಡುವಾಗ ‘ರೋಹಿಣಿಗೂ ನನಗೂ ಹೋಲಿಸಬೇಡಿ’ ಎಂದಿದ್ರಿ, ಇಷ್ಟೆಲ್ಲಾ ನಡೆದರೂ ‘ಎಂದಿನಂತೆ ಶ್ರದ್ಧೆಯಿಂದ ಕೆಲಸ ಮಾಡ್ತೀನಿ’ ಎನ್ನುವ ಅವರೆಲ್ಲಿ.? ಮಾಧ್ಯಮಗಳ ಗಮನ ತಮ್ಮೆಡೆಗೆ ಪ್ರಯತ್ನಿಸುತ್ತಿರುವ ನೀವೆಲ್ಲಿ?
6. ಎಲ್ಲಾ ಕನ್ನಡಿಗರಿಗೆ ತಮ್ಮ ಮೇಲೆ ಅಪಾರ ಗೌರವವಿದೆ, ಕನ್ನಡದ ಎಲ್ಲಾ ಹೆಣ್ಣು ಮಕ್ಕಳಿಗೆ ತಾವೇ ದೊಡ್ಡ ಸ್ಪೂರ್ತಿ, ಇದರ ನಡುವೆ ಕರ್ನಾಟಕ ಸರ್ಕಾರದ ಹಿರಿಯ, ಮಹಿಳಾ ಅಧಿಕಾರಿಯನ್ನು ಬೇರೆ ರಾಜ್ಯದವರು ಎಂದು ಹೇಳಿ ನೋವುಂಟು ಮಾಡುವುದು ಸರಿಯೇ?
7. ಗಾಯಕ ಲಕ್ಕಿ ಅಲಿ ಜಮೀನಿಗೂ ಮತ್ತು ನನಗೂ ಯಾವುದು ಸಂಬಂಧ ಇಲ್ಲ’ ಎಂದು ಸಿಂಧೂರಿಯವರು ಸ್ಪಷ್ಟಪಡಿಸಿದ್ದಾರೆ, ಅವರ ಕುಟುಂಬದ ಯಾರ ಮೇಲೆ ಆರೋಪ ಬಂದರೂ, ಸಿಂಧೂರಿಯವರ ಮೇಲೆ ನೇರ ಆರೋಪ ಹೊರಿಸುವುದು ಏಕೆ??
8. ರೋಹಿಣಿ ಅವರ ಮೇಲೆ ಯಾವುದೇ ಆರೋಪ ಇದ್ದರೂ, ಅದನ್ನು ನೇರವಾಗಿ ಸಿಎಸ್, ಡಿಜಿಪಿ ಅವರ ಗಮನಕ್ಕೆ ತರದೆ, WhatsApp Screenshot ಗಳಲ್ಲಿ ತೆಗೆದ ಅವರ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದು ಸರಿಯೇ?
9.ಸಿಂಧೂರಿಯವರು ಕರ್ನಾಟಕಕ್ಕೆ ಬಂದ ಆರೇ ತಿಂಗಳಲ್ಲಿ ಕನ್ನಡವನ್ನು ಸ್ಪಷ್ಟವಾಗಿ ಮಾತನಾಡುವುದನ್ನು ಕಲಿತಿದ್ದಾರೆ, ಅವರು ತಮ್ಮ ಕಚೇರಿ ವೇಳೆಯಲ್ಲಿ ಎಂದಾದರೂ ಕನ್ನಡಿಗರನ್ನು ಕಡೆಗಣಿಸಿರುವುದು ತಮ್ಮ ಗಮನಕ್ಕೆ ಬಂದಿದೆಯೇ?
ರೋಹಿಣಿ ಸಿಂಧೂರಿ ಅಭಿಮಾನಿಗಳು ಎಂದು ಬರೆದುಕೊಂಡಿರುವ ಫೇಸ್ ಬುಕ್ ಖಾತೆಯಲ್ಲಿ ಈ ಪ್ರಶ್ನೆಗಳನ್ನು ಕೇಳಲಾಗಿದ್ದು, ಈ ಫೇಸ್ ಬುಕ್(Face book) ಖಾತೆಗೂ ಮತ್ತು ರೋಹಿಣಿ ಸಿಂಧೂರಿ ಅವರಿಗೂ ಯಾವುದೇ ಸಂಬಂಧವಿಲ್ಲ, ಇದೊಂದು ಅವರ ಅಭಿಮಾನಿಗಳ ಪೇಜ್ ಆಗಿರುತ್ತದೆ, ಎಲ್ಲಾ ಪೋಸ್ಟ್ ಗಳು ಅವರ ಅಭಿಮಾನಿಗಳದ್ದೆ ಆಗಿರುತ್ತದೆ ಎಂಬುದಾಗಿ ತಿಳಿಸಲಾಗಿದೆ. ಅಲ್ಲದೆ ಈ ಮೇಲ್ಕಂಡಂತೆ ನಾವು ಕೇಳಿರುವ ಪ್ರಶ್ನೆಗಳಿಗೂ ಮತ್ತು ರೋಹಿಣಿ ಸಿಂಧೂರಿ ಯವರಿಗೂ ಯಾವುದೇ ಸಂಬಂಧವಿಲ್ಲ. ರೋಹಿಣಿ ಸಿಂಧೂರಿ ಅವರ ಅಭಿಮಾನಿಗಳಾದ ನಾವುಗಳು ಈ ಪ್ರಶ್ನೆಗಳನ್ನು ಕೇಳಿರುತ್ತೇವೆ ಎಂದು ಹೇಳಲಾಗಿದೆ.
ಇನ್ನು ಇದೀಗ ಇವರ ಜಗಳಕ್ಕೆ ಸಿಎಂ ಬಸವರಾಜ ಬೊಮ್ಮಾಯಿ( CM Bommai) ಮಧ್ಯಪ್ರವೇಶಿಸಿದ್ದಾರೆ. ರೂಪಾ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ನೋಟಿಸ್(Notice) ನೀಡಲು ಮುಖ್ಯಕಾರ್ಯದರ್ಶಿಗೆ ಸಿಎಂ ಸೂಚನೆ ನೀಡಿದ್ದಾರೆ. ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ಕಾರ್ಯನಿರ್ವಹಣೆ ನೇರವಾಗಿ ಸರ್ಕಾರದ ವ್ಯಾಪ್ತಿಗೆ ಬರುವುದಿಲ್ಲ. ಇದರ ಬಗ್ಗೆ ಮುಖ್ಯ ಕಾರ್ಯದರ್ಶಿ ಮೇವಿಚಾರಣೆ ಹೊಂದಿರುವುದರಿಂದ ಸಿಎಸ್ ಆಗಿರುವ ವಂದಿತಾ ಶರ್ಮಾ ಅವರಿಗೆ ಸಿಎಂ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಇಬ್ಬರ ಅಧಿಕಾರಿಗಳ ಜಗಳ ಅತೀರೇಕಕ್ಕೆ ಹೋಗಿದೆ. ಕೂಡಲೇ ಇಬ್ಬರ ಕರೆಸಿ ವಿಚಾರಣೆ ಮಾಡಿ ಜತೆಯಾಗಿ ಇಲ್ಲವೇ ಪ್ರತ್ಯೇಕವಾಗಿ ಕರೆಸಿಕೊಂಡು ವಿಚಾರಣೆ ತೆಗೆದುಕೊಂಡು ಇಬ್ಬರಿಗೂ ಎಚ್ಚರಿಕೆ ನೀಡಿ ಎಂದು ಸಿಎಂ ಸೂಚನೆ ನೀಡಿದ್ದಾರೆ.