IAS-IPS Officer’s Transfer: ರೂಪ-ರೋಹಿಣಿ ಆರೋಪವೀಗ ವಿರೂಪ! ಇಬ್ಬರನ್ನೂ ಎತ್ತಂಗಡಿ ಮಾಡಿ ಆದೇಶ ಹೊರಡಿಸಿದ ಸರ್ಕಾರ!
Sindhuri vs Roopa : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ನಡುವಣ ಸಂಘರ್ಷಕ್ಕೆ ಬೆಳಿಗ್ಗೆ ಅಷ್ಟೇ ಎಚ್ಚರಿಕೆ ನೀಡಿ ನೋಟಿಸ್ ಜಾರಿ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಈ ಬಂಧಿಸಿ ಮಹತ್ವದ ನಿರ್ಧಾರ ಕೈಗೊಂಡಿದೆ. ಹೌದು, ಈ ಇಬ್ಬರೂ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಮತ್ತು ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ (D Roopa Moudgil) ನಡುವಣ ಸಂಘರ್ಷಕ್ಕೆ (Sindhuri vs Roopa) ಸಂಬಂಧಿಸಿ ಮಹತ್ವದ ನಿರ್ಧಾರ ಕೈಗೊಂಡಿರುವ ರಾಜ್ಯ ಸರ್ಕಾರ ಇಬ್ಬರನ್ನೂ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಆದರೆ, ಯಾವ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ ಎಂಬುದನ್ನು ತಿಳಿಸಿಲ್ಲ. ಜತೆಗೆ ಐಎಎಸ್ ಅಧಿಕಾರಿ, ರೂಪಾ ಅವರ ಪತಿ ಮುನೀಶ್ ಮೌದ್ಗಿಲ್ ಅವರನ್ನೂ ವರ್ಗಾವಣೆ ಮಾಡಲಾಗಿದೆ. ಇವರನ್ನು ಡಿಪಿಆರ್ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಕಳೆದ ಕೆಲವು ದಿನಗಳಿಂದ ಇಬ್ಬರು ಅಧಿಕಾರಿಗಳ ನಡುವಣ ಸಂಘರ್ಷ ತಾರಕಕ್ಕೇರಿತ್ತು. ರೋಹಿಣಿ ಸಿಂಧೂರಿ ಅವರು ಜೆಡಿಎಸ್ ಶಾಸಕ ಸಾರಾ ಮಹೇಶ್ ಜತೆ ಸಂಧಾನಕ್ಕೆ ತೆರಳಿದ್ದರು ಎಂಬ ಬಗ್ಗೆ ವರದಿಯಾದ ಬೆನ್ನಲ್ಲೇ ಅವರ ವಿರುದ್ಧ ಡಿ ರೂಪಾ ಆರೋಪಗಳ ಸುರಿಮಳೆಯನ್ನೇ ಮಾಡಿದ್ದರು. ನಂತರ ಪ್ರಕರಣ ರಾಜಕೀಯ ವಲಯದಲ್ಲಿಯೂ ಭಾರೀ ಚರ್ಚೆಗೆ ಗ್ರಾಸವಾಗಿತ್ತು.
ಸಿಎಂ ಬೊಮ್ಮಾಯಿ(CM Bommai), ಗೃಹ ಸಚಿವ ಆರಗ ಜ್ಞಾನೇಂದ್ರ(Araga Janendra), ರಾಜ್ಯಸಭಾ ಸದಸ್ಯ ಜಗ್ಗೇಶ್(Jaggesh) ಕೂಡ ಈ ಮಹಿಳಾ ನಾರಿಯರ ಕಿತ್ತಾಟದ ಬಗ್ಗೆ ಪ್ರತಿಕ್ರಿಯಿಸಿದ್ದರು. ಅಲ್ಲದೆ ಸಂಸದ ಪ್ರತಾಪ್ ಸಿಂಹ(Prathap Simha) ರೂಪ ಪರ ಬ್ಯಾಟಿಂಗ್ ಮಾಡಿದ್ದರು.