ಮುದ್ರಾಡಿ : ಖ್ಯಾತ ಸಾಹಿತಿ ಅಂಬಾತನಯ ಮುದ್ರಾಡಿ ಇನ್ನಿಲ್ಲ

Ambatanaya Mudradi : ಉಡುಪಿ ಜಿಲ್ಲೆಯ ಖ್ಯಾತ ಸಾಹಿತಿ , ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಮಾಜಿ ಅಧ್ಯಕ್ಷ ಅಂಬಾತನಯ ಮುದ್ರಾಡಿ ( Ambatanaya Mudradi)  ಫೆ.21ರಂದು ನಿಧನರಾದರು. ಅವರು 1935 ರಲ್ಲಿ ಹೆಬ್ರಿ ತಾಲೂಕಿನ ಮುದ್ರಾಡಿ ಯಲ್ಲಿ ಜನಿಸಿದ್ದರು.

ಕವಿ, ನಾಟಕಕಾರ, ವಚನಕಾರ, ಯಕ್ಷಗಾನ ಪ್ರಸಂಗಕರ್ತ, ಯಕ್ಷ ಗಾನ ಅರ್ಥಧಾರಿ, ಹರಿದಾಸ, ಜಿನದಾಸ, ವಿಡಂಬನಕಾರ, ವಾಗ್ಮಿ, ಚಿಂತನ ಅಂಕಣಕಾರ, ಶಿಕ್ಷಕರ ತರಬೇತಿಯಲ್ಲಿ ಸಂಪನ್ಮೂಲ ವ್ಯಕ್ತಿ ಹೀಗೆ ಸಾಹಿತ್ಯದ ವಿವಿಧ ಮಗ್ಗುಲುಗಳಲ್ಲಿ ಕೃಷಿ ಮಾಡಿದವರು.ರಾಜ್ಯೋತ್ಸವ ಪ್ರಶಸ್ತಿ ಪ್ರಶಸ್ತಿಯೂ ಸೇರಿದಂತೆ ಸಂಘ ಸಂಸ್ಥೆಗಳಿಂದ ಪ್ರಶಸ್ತಿಗಳು ಹಾಗೂ ಸನ್ಮಾನಗಳು ಲಭಿಸಿವೆ.

ಇತ್ತೀಚೆಗೆ ನಡೆದ ಉಡುಪಿಯಲ್ಲಿ ಜರಗಿದ ಪ್ರಥಮ ಯಕ್ಷಗಾನ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದದಲ್ಲಿ ಪಾಲ್ಗೊಂಡಿದ್ದರು. ಇದೇ ಅವರ ಕೊನೆಯ ಕಾರ್ಯಕ್ರಮವಾಗಿತ್ತು. ಈ ಸಂದರ್ಭದಲ್ಲಿ ‘ಯಕ್ಷಗಾನ ಮತ್ತು ಹರಿಕಥೆ ಒಂದು ತೌಲನಿಕ ಅಧ್ಯಯನ’ ಪುಸ್ತಕವನ್ನು ಪ್ರಕಟಿಸಲಾಗಿತ್ತು.

ಸಾಹಿತ್ಯ ಕೃಷಿಗಾಗಿ ಮುದ್ರಾಡಿಯವರಿಗೆ ರಾಜ್ಯೋತ್ಸವ ಪ್ರಶಸ್ತಿ, ಪಾರ್ತಿಸುಬ್ಬ ಪ್ರಶಸ್ತಿ ಮುಂತಾದ ಶ್ರೇಷ್ಠ ಗೌರವಗಳು ಪ್ರಾಪ್ತಿಯಾಗಿವೆ. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿಯೂ ಸೇವೆ ಮಾಡಿದ್ದಾರೆ.

ಪತ್ನಿ, ಮೂವರು ಪುತ್ರರು, ಐವರು ಪುತ್ರಿಯರನ್ನು ಹಾಗೂ ಅಪಾರ ಶಿಷ್ಯ ಬಳಗವನ್ನು ಅಗಲಿದ್ದಾರೆ. ಮಂಗಳವಾರ ಸಂಜೆ ಮುದ್ರಾಡಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿದೆ.

Leave A Reply

Your email address will not be published.