Karnataka Hijab Row: ಪರೀಕ್ಷೆ ಸಂದರ್ಭ ಹಿಜಾಬ್ ಧರಿಸಲು ಒಪ್ಪಿಗೆ: ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಸಮ್ಮತಿ!
Karnataka Hijab Row: ಈ ಹಿಂದೆ ಎರಡು ಬಣಗಳ ನಡುವೆ ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್ ಪ್ರಕರಣ ಮತ್ತೊಮ್ಮೆ ಮುನ್ನಲೆಗೆ ಬರುವ ಎಲ್ಲಾ ಲಕ್ಷಣಗಳು ಕಂಡುಬರುತ್ತಿವೆ. ಹೌದು!! ಕರ್ನಾಟಕದ ಸರ್ಕಾರಿ ಶಾಲೆಯ ಮುಸ್ಲಿಂ ವಿದ್ಯಾರ್ಥಿನಿಯರ ಗುಂಪೊಂದು ಹಿಜಾಬ್ (Hijab case) ಧರಿಸಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವಂತೆ ಮನವಿ ಮಾಡಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಪ್ರಕರಣ ಬೆಳಕಿಗೆ ಬಂದಿದೆ.
ಸದ್ಯ, ಈ ಕುರಿತು ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ಕೋರಿ ಮನವಿ ಸಲ್ಲಿಸಿರುವ ವಿದ್ಯಾರ್ಥಿನಿಯರ ಈ ಅರ್ಜಿಯನ್ನು ಶೀಘ್ರವೇ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕೆಂದು ಮುಸ್ಲಿಂ ವಿದ್ಯಾರ್ಥಿನಿಯರ ಗುಂಪು ಮನವಿ ಸಲ್ಲಿಸಿದ್ದು ಇದನ್ನು ಸುಪ್ರೀಂ ಕೋರ್ಟ್ ಪರಿಗಣಿಸುವುದಾಗಿ ಸೂಚಿಸಿದೆ (Karnataka Hijab Row) ಎನ್ನಲಾಗಿದೆ.
ಸದ್ಯ, ಕರ್ನಾಟಕ ಹೈಕೋರ್ಟ್ ಆದೇಶದ ಅನುಸಾರ ಶಾಲೆ ಮತ್ತು ಕಾಲೇಜುಗಳಲ್ಲಿ ಹಿಜಾಬ್ ಧರಿಸುವ ಕುರಿತಂತೆ ಸುಪ್ರೀಂಕೋರ್ಟ್‌ನ ದ್ವಿಸದಸ್ಯ ಪೀಠ ವಿಭಿನ್ನ ತೀರ್ಪು ನೀಡಿದ ಹಿನ್ನೆಲೆ ತರಗತಿಗಳಲ್ಲಿ ಹಿಜಾಬ್ ಬಳಕೆಗೆ ನಿಷೇಧ ಮುಂದುವರೆದಿದೆ. ಈ ನಡುವೆ ಮಾರ್ಚ್ 9ರಿಂದ ಪಿಯುಸಿ ಪರೀಕ್ಷೆಗಳು(Exams) ಜರುಗಲಿದ್ದು, ಪರೀಕ್ಷೆಗೆ ಹಾಜರಾಗುವಾಗ ಹಿಜಾಬ್ ಧರಿಸಲು ಅವಕಾಶವಿಲ್ಲ ಎಂಬುದನ್ನು ಸಿಜೆಐ ಡಿವೈ ಚಂದ್ರಚೂಡ್ ಅವರ ನ್ಯಾಯಪೀಠಕ್ಕೆ ಅರ್ಜಿದಾರರು ಹೇಳಿದ್ದಾರೆ.
(Hijab)ಹಿಜಾಬ್ ಧರಿಸುವ ಕುರಿತಂತೆ ಅರ್ಜಿದಾರರ ಮನವಿ ಅನುಸಾರ ಈ ವಿಚಾರವನ್ನು ಪರಿಶೀಲಿಸುವುದಾಗಿ ಮತ್ತು ಅರ್ಜಿ ವಿಚಾರಣೆಗೆ ಪೀಠವೊಂದನ್ನು ರಚಿಸುವುದಾಗಿ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಅರ್ಜಿದಾರರಿಗೆ ವಿಶ್ವಾಸ ನೀಡಿದ್ದಾರೆ. ಹಿಜಾಬ್ ಧರಿಸುವುದಕ್ಕೆ ನಿಷೇಧವಿರುವ ಹಿನ್ನೆಲೆ ಅನೇಕ ವಿದ್ಯಾರ್ಥಿನಿಯರು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ(Private Colleges) ವರ್ಗಾವಣೆ (Transfer) ಮಾಡಿಸಿಕೊಂಡಿದ್ದು, ಆದರೆ ಈ ನಡುವೆ ವಿದ್ಯಾರ್ಥಿನಿಯರು ಸರ್ಕಾರಿ ಸಂಸ್ಥೆಗಳಲ್ಲಿಯೇ ಪರೀಕ್ಷೆಗಳನ್ನು ಎದುರಿಸಬೇಕಾಗಿ ದ್ದು ಇದಕ್ಕೆ ಸಮ್ಮತಿ ಸೂಚಿಸದಿದ್ದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಒಂದು ವರ್ಷ ವ್ಯರ್ಥವಾಗಲಿದೆ ಎಂದು ಹಿಜಾಬ್ ಪರ ವಕೀಲರು ಮನವಿ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಈ ಒಂದು ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಇಲ್ಲವೇ ಶುಕ್ರವಾರದಂದು ಕೋರ್ಟ್ ವಿಚಾರಣೆಗೆ ಪರಿಗಣಿಸಬಹುದು” ಎಂದು ಅರ್ಜಿದಾರರ ಪರ ವಕೀಲ ಶಾದನ್ ಫರಾಸತ್ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಸದ್ಯ ಈ ಪ್ರಕರಣದ ಕುರಿತಂತೆ ತೀರ್ಮಾನ ಕೈಗೊಳ್ಳಲಾಗುತ್ತದೆ ಭರವಸೆಯನ್ನು ಸಿಜೆಐ ನೀಡಿದ್ದಾರೆ ಎನ್ನಲಾಗಿದೆ.