ದಕ್ಷಿಣ ಕನ್ನಡ : ಕೊನೆಗೂ ಸೆರೆಸಿಕ್ಕ ಕಾಡಾನೆ!!!
Elephant Matter : ಪುತ್ತೂರು: ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನೈಲ ಎಂಬಲ್ಲಿ ಇಬ್ಬರನ್ನು ಬಲಿ ಪಡೆದಿದ್ದ ನರಹಂತಕ ಕಾಡಾನೆಯನ್ನು ಸೆರೆ ಹಿಡಿಯಲು ಕಳೆದ ಮೂರು ದಿನಗಳಿಂದ ನಡೆದ ಕಾರ್ಯಾಚರಣೆ ಕೊನೆಗೂ ಯಶಸ್ಸು ಕಂಡಿದೆ. ಕಡಬ ಬಳಿಯ ಮೂಜೂರು ರಕ್ಷಿತಾರಣ್ಯದ ಕೊಂಬಾರು(ಮಂಡೆಕರ) ಎಂಬಲ್ಲಿ ಆನೆಯನ್ನು ಪತ್ತೆ ಹಚ್ಚಿ ಗನ್ ಮೂಲಕ ಆನೆಗೆ ಅರಿವಳಿಕೆ ನೀಡಲಾಗಿದೆ.
ಕಡಬ ತಾಲೂಕಿನ ಕೊಂಬಾರು ಗ್ರಾಮದ ಮಂಡಕರ ಎಂಬಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಆನೆಯನ್ನು ಕಂಡುಬಂದಿದೆ. ಬುಧವಾರದಂದು ಐತ್ತೂರು ಗ್ರಾಮದ ಸುಳ್ಯ ಸಮೀಪ ಕಂಡುಬಂದಿದ್ದ ಆನೆಯನ್ನು ಸೆರೆಹಿಡಿಯಲು ಹರಸಾಹಸ ನಡೆಸಿದ್ದ ಅಧಿಕಾರಿಗಳು, ಪೊದರುಗಳ ನಡುವೆ ಅವಿತಿದ್ದ ಆನೆಯ ಮೇಲೆ ಶೂಟ್ ಮಾಡಿದ್ದ ಅರಿವಳಿಕೆ ಚುಚ್ಚುಮದ್ದು ಗುರಿ ತಪ್ಪಿತ್ತು.
ಸಂಜೆ ವೇಳೆಗೆ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದು, ಗುರುವಾರ ಕೊಂಬಾರು ಗ್ರಾಮದ ಬಾರ್ಯ ಸಮೀಪ ಕಾಡಿನಲ್ಲಿ ಆನೆ ಕಂಡುಬಂದ ಹಿನ್ನೆಲೆಯಲ್ಲಿ ಮತ್ತೆ ಕಾರ್ಯಾಚರಣೆ ಮುಂದುವರಿಸಿದ್ದರು. ಅಪರಾಹ್ನ ಕೊಂಬಾರು ಮಂಡೆಕರ ಎಂಬಲ್ಲಿ ಕಾರ್ಯಾಚರಣೆ ನಡೆಸಿ ಕೊನೆಗೂ ಸೆರೆಹಿಡಿದಿದ್ದಾರೆ.