ದಕ್ಷಿಣ ಕನ್ನಡ : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಫ್ರೀಡಂ ಕಮ್ಯೂನಿಟಿ ಹಾಲ್‌ ಎನ್.ಐ.ಎ. ವಶಕ್ಕೆ

Praveen Nettaru Case : ಪುತ್ತೂರು: ದೇಶದಲ್ಲೇ ತಲ್ಲಣ ಸೃಷ್ಟಿಸಿದ್ದ ಬಿಜೆಪಿ ಯುವ ಮುಖಂಡ, ಬೆಳ್ಳಾರೆ ಸಮೀಪದ ನೆಟ್ಟಾರ್ ನಿವಾಸಿ ಪ್ರವೀಣ್ ( Praveen Nettaru) ಅವರ ಹತ್ಯೆಗೆ ಸಂಬಂಧಿಸಿದಂತೆ ಫ್ರೀಡಂ ಕಮ್ಯೂನಿಟಿ ಹಾಲ್‌ ಅನ್ನು ಎನ್.ಐ.ಎ. ( NIA)ವಶ ಪಡೆದುಕೊಂಡಿದೆ.

ಪ್ರವೀಣ್ ನೆಟ್ಟಾರು ಹತ್ಯೆ ತನಿಖೆಯ ವೇಳೆ ಕಬಕ ಸಮೀಪದ ಇಡ್ಕಿದು ಗ್ರಾಮದ ಮಿತ್ತೂರು ಎಂಬಲ್ಲಿರುವ ಫ್ರೀಡಂ ಕಮ್ಯೂನಿಟಿ ಹಾಲ್‌ನಲ್ಲಿ ಪಾಪ್ಯುಲರ್ ಫ್ರೆಂಟ್ ಅಫ್ ಇಂಡಿಯಾದ ಸದಸ್ಯರಿಗೆ ಅನಧಿಕೃತವಾಗಿ ಭಯೋತ್ಪಾದನೆಗೆ ಸಹಕಾರಿಯಾಗುವಂತಹ ಶಸ್ತ್ರಾಸ್ತ್ರ ತರಬೇತಿಯನ್ನು ನೀಡಲಾಗುತ್ತಿತ್ತು ಎಂಬ ವಿಚಾರ ಬೆಳಕಿಗೆ ಬಂದಿತ್ತು.

ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಫ್ರೀಡಂ ಕಮ್ಯೂನಿಟಿ ಹಾಲ್‌ನ್ನು ಸ್ವಾಧೀನ ಪಡಿಸಿಕೊಂಡಿದೆ ಎಂದು ತಿಳಿದು ಬಂದಿದೆ.

ಪ್ರವೀಣ್ ನೆಟ್ಟಾರು ಹತ್ಯಾ ಪ್ರಕರಣ ದೇಶದಾದ್ಯಂತ ಭಾರೀ ಸದ್ದು  ಮಾಡಿದ ಪ್ರಕರಣವಾಗಿತ್ತು. ರಾಜ್ಯ ಸರಕರದ ವಿರುದ್ಧ ಹಿಂದೂ ಕಾರ್ಯಕರ್ತರು ರೊಚ್ಚಿಗೆದ್ದು ರಾಜ್ಯ ರಾಜಕೀಯದಲ್ಲಿ ಕೂಡ ಭಾರೀ ಸಂಚಲನ ಸೃಷ್ಟಿ ಮಾಡಿತ್ತು ಎಂದೇ ಹೇಳಬಹುದು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅನೇಕ ಮಂದಿಯ ಬಂಧನವಾಗಿದ್ದು ಈಗ ತನಿಖೆಯ ಮುಂದುವರಿದ ಭಾಗವಾಗಿ ಎನ್ ಐಎ ಫ್ರೀಡಂ ಕಮ್ಯುನಿಟಿ ಹಾಲನ್ನು ವಶಕ್ಕೆ ಪಡೆದುಕೊಂಡಿದೆ.

 

Leave A Reply

Your email address will not be published.