KEA ಯಿಂದ ಐದು ಇಲಾಖೆ ಹುದ್ದೆಗಳಿಗೆ ಅಧಿಸೂಚನೆ ! ಯಾವೆಲ್ಲಾ ಇಲಾಖೆ? ಇಲ್ಲಿದೆ ವಿವರ

KEA : ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA)ವು ಸರ್ಕಾರದ ನಿರ್ದೇಶನದಂತೆ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು, ಶೀಘ್ರದಲ್ಲಿ ಅಧಿಸೂಚನೆ ಹೊರಡಿಸಲಿದೆ. ಸರ್ಕಾರಿ ಸಂಸ್ಥೆಗಳಲ್ಲಿ ವಿವಿಧ ಹುದ್ದೆ(job)ಗಳು ಖಾಲಿ ಇದ್ದು, ಈ ಬಗ್ಗೆ ಅಧಿಸೂಚನೆ ಬಿಡುಗಡೆಯಾದ ನಂತರ ಅಭ್ಯರ್ಥಿಗಳು ಆನ್‌ಲೈನ್‌ (online) ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಯಾವೆಲ್ಲಾ ಇಲಾಖೆಗಳಿಗೆ ನೇಮಕ ಅಧಿಸೂಚನೆ ಬಿಡುಗಡೆ ಆಗಲಿದೆ?
• ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ (KFCSC), ಬೆಂಗಳೂರು.
• ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ, ಬೆಂಗಳೂರು.
• ಕರ್ನಾಟಕ ಸ್ಟೇಟ್ಸ್‌ ಮಿನರಲ್ಸ್‌ ಕಾರ್ಪೋರೇಶನ್ ಲಿಮಿಟೆಡ್ (Karnataka State Minerals Corporation Limited), ಬೆಂಗಳೂರು.
• ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು.
• ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಬೆಂಗಳೂರು.
• ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದ ಹುದ್ದೆಗಳು.

ಅರ್ಜಿ ಸಲ್ಲಿಕೆ:
ಅಧಿಸೂಚನೆ ಬಿಡುಗಡೆ ನಂತರ ಆಸಕ್ತ, ಅರ್ಹ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ http://kea.kar.nic.in ಗೆ ಭೇಟಿ ನೀಡಿ, ಅರ್ಜಿ ಸಲ್ಲಿಸಬಹುದಾಗಿದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

ಸೂಚನೆ:
• ಆನ್‌ಲೈನ್‌ ಮೂಲಕ ಮಾತ್ರವೇ ಅರ್ಜಿ ಸಲ್ಲಿಕೆ.
• ಬೆಂಗಳೂರು (Bengaluru) ಕೇಂದ್ರದಲ್ಲಿ ಮಾತ್ರ ಈ ಮೇಲಿನ ಇಲಾಖೆಗೆ ಸಂಬಂಧಿಸಿದ ಎಲ್ಲಾ ಹುದ್ದೆಗಳಿಗೂ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ.
• ಈ ಸ್ಪರ್ಧಾತ್ಮಕ ಪರೀಕ್ಷೆಯನ್ನು 2023 ರ ಜೂನ್, ಜುಲೈ ತಿಂಗಳಿನಲ್ಲಿ ನಡೆಸಲಾಗುತ್ತದೆ.

Leave A Reply

Your email address will not be published.