Krishi Sinchai Scheme: ರೈತ ಸಮುದಾಯಕ್ಕೆ ‘ಕೃಷಿ ಸಿಂಚಾಯಿ’ ಯೋಜನೆಯಡಿ ಸಹಾಯಧನ, ಅರ್ಜಿ ಆಹ್ವಾನ!
Krishi Sinchai Scheme: ಕೃಷಿಯಲ್ಲಿ ನಿಯಮಿತ ಸಂಪನ್ಮೂಲಗಳನ್ನು ಬಳಸಿಕೊಂಡು ಹೆಚ್ಚಿನ ಇಳುವರಿ ಪಡೆಯುವ ಕೃಷಿ ವಿಧಾನಗಳನ್ನು ಉತ್ತೇಜಿಸಲು ಭಾರತ ಕೇಂದ್ರ ಸರ್ಕಾರದಿಂದ ಜಾರಿಯಾಗಿರುವ ಯೋಜನೆಯೇ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಾಗಿದ್ದು (krishi sinchai scheme ), ಇದೀಗ ತೋಟಗಾರಿಕೆ ಇಲಾಖೆಯು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ರೈತರಿಗೆ(Farmer )ಸಿಹಿ ಸುದ್ದಿ (good news )ಒಂದನ್ನು ನೀಡಿದೆ. ಹೌದು ಈಗಾಗಲೇ 2022-23 ರ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಅಳವಡಿಸಿಕೊಳ್ಳಲು ಸಹಾಯಧನ ನೀಡಲು ಸರ್ಕಾರ(government )ನಿರ್ಧಾರ ಮಾಡಿದೆ. ಅಲ್ಲದೆ ಅರ್ಹ ಕೃಷಿಕರಿಂದ ಅರ್ಜಿಗಳನ್ನು ಆಹ್ವಾನಿಸಿದೆ.
2022-23 ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಪದ್ಧತಿ ಅಳವಡಿಸಿದ ಸಾಮಾನ್ಯ ರೈತರಿಗೆ ಶೇ.75ರ ಸಹಾಯಧನ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರೈತರಿಗೆ ಶೇ. 90 ರಷ್ಟು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯ ಸಹಾಯಧನ ಪಡೆಯಲು ಸಂಪೂರ್ಣ ಅರ್ಜಿಯನ್ನು ಸಂಬಂಧಪಟ್ಟ ತಾಲ್ಲೂಕು ತೋಟಗಾರಿಕೆ ಕಚೇರಿಗಳಿಗೆ ಮಾರ್ಚ್, 15 ರೊಳಗೆ ಸಲ್ಲಿಸಿ ಸಹಾಯಧನ ಪಡೆಯುವಂತೆ ತೋಟಗಾರಿಕೆ ಉಪ ನಿರ್ದೇಶಕರಾದ ನಾಯಕ್ ಅವರು ಮಾಹಿತಿ ನೀಡಿದ್ದಾರೆ.
ಸದ್ಯ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಪದ್ಧತಿ ಅಳವಡಿಸಲು ರೈತರು ತಮ್ಮ ಆರ್ಟಿಸಿ(RTC ), ಆಧಾರ್ ಕಾರ್ಡ್ (aadhaar card )ಪ್ರತಿಯೊಂದಿಗೆ ಅರ್ಜಿಯನ್ನು ಸಮೀಪದ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಮಡಿಕೇರಿ, ಸೋಮವಾರಪೇಟೆ, ಪೊನ್ನಂಪೇಟೆಗೆ ಮುದ್ದಾಂ ಅಥವಾ ಅಂಚೆ (post )ಮೂಲಕ ಅರ್ಜಿ ಸಲ್ಲಿಸಿ ನೋಂದಾಣಿ ಮಾಡಿಕೊಳ್ಳಲು ಮಾಹಿತಿ(information )ನೀಡಲಾಗಿದೆ.