ಅತೀ ಕಡಿಮೆ ಬೆಲೆಯಲ್ಲಿ ಭಾರತದಲ್ಲಿ ಖರೀದಿಸಬಹುದಾದ ಆಟೋಮ್ಯಾಟಿಕ್‌ ಕಾರುಗಳು! ಇಲ್ಲಿದೆ ಲಿಸ್ಟ್‌

Automatic Gearbox: ಇಂದಿನ ದಿನಗಳಲ್ಲಿ ಓಡಾಟ ನಡೆಸಲು ವಾಹನಗಳು ಅತ್ಯಗತ್ಯವಾಗಿದ್ದು, ಪ್ರತಿಯೊಬ್ಬರ ಮನೆಯಲ್ಲಿ ಕೂಡ ವಾಹನಗಳು ಇರೋದು ಸಾಮಾನ್ಯವಾಗಿ ಬಿಟ್ಟಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಪ್ರೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಹೆಚ್ಚಳ ಕಂಡುಬರುತ್ತಿರುವ ಹಿನ್ನೆಲೆ ಹೆಚ್ಚಿನವರು ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿದ್ದಾರೆ. ಈ ನಡುವೆ ಕೆಲ ಕಾರು ತಯಾರಿಕಾ ಕಂಪನಿಗಳು ಆಗಾಗ ಹೊಸ ಮಾದರಿಗಳನ್ನು ಪರಿಚಯಿಸಿ ಜನರ ಗಮನ ಸೆಳೆಯುವತ್ತ ಲಕ್ಷ್ಯ ವಹಿಸುತ್ತವೆ. ಆದರೆ ಕೆಲ ಬ್ರಾಂಡ್ ಗಳ ಕಾರುಗಳು ಜನರ ಮನದಲ್ಲಿ ವಿಶೇಷ ಸ್ಥಾನ ಪಡೆದುಕೊಂಡು ಬಿಟ್ಟಿವೆ.

ಹೊಸ ಹೊಸ ವೈಶಿಷ್ಟ್ಯದ ಮೂಲಕ ಕಾರುಗಳು ಮಾರುಕಟ್ಟೆಗೆ ಲಗ್ಗೆ ಇಡುವ ಜೊತೆಗೆ ಗ್ರಾಹಕರ ಬೇಡಿಕೆಯ ಅನುಸಾರ ವಿವಿಧ ಬ್ರಾಂಡ್ ಕಾರುಗಳು ಕೈಗೆ ಎಟಕುವ ದರದಲ್ಲಿ ಲಭ್ಯವಿದ್ದು, ವಾಹನಗಳ ಕ್ರೇಜ್ ಹೊಂದಿರುವವರು ತಿಳಿದುಕೊಳ್ಳಬೇಕಾದ ಮಾಹಿತಿ ಇಲ್ಲಿ ನೀಡಲಾಗಿದೆ. ಆಟೋಮ್ಯಾಟಿಕ್ ಗೇರ್ ಬಾಕ್ಸ್ ಹೊಂದಿರುವ ಹಲವು ಮಾದರಿಗಳು ಮಾರುಕಟ್ಟೆಯಲ್ಲಿ ಟ್ರೆಂಡ್ ಸೃಷ್ಟಿ ಮಾಡಿವೆ. ಹಾಗಿದ್ರೆ, ಬಜೆಟ್ ಬೆಲೆಯಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಲಭ್ಯವಿರುವ ಆಟೋಮ್ಯಾಟಿಕ್ ಗೇರ್ ಬಾಕ್ಸ್(Automatic Gearbox ) ಹೊಂದಿರುವ ಕಾರುಗಳಾವುವು?

ನಾವು ನಗರ ಪ್ರದೇಶಗಳಲ್ಲಿ ಓಡಾಟ ನಡೆಸುವಾಗ ಟ್ರಾಫಿಕ್ ಸಿಗ್ನಿಲ್ ಗಳು ಇರೋದು ಗೊತ್ತಿರುವ ವಿಚಾರವೇ. ಈ ರೀತಿಯ ಸಂದರ್ಭಗಳಲ್ಲಿ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಕಾರುಗಳು ಉತ್ತಮವಾದ ಆಯ್ಕೆ ಎಂದರೆ ತಪ್ಪಾಗದು. ಬಜೆಟ್ ಬೆಲೆಯಲ್ಲಿಯು ಕೂಡ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಹೊಂದಿರುವ ಕಾರುಗಳ ಕುರಿತ ಮಾಹಿತಿ ಇಲ್ಲಿದೆ.

ಮಾರುತಿ ಸುಜುಕಿ ವ್ಯಾಗನ್ಆರ್(Maruti Suzuki Wagon R ) :
ಮಾರುತಿ ಸುಜುಕಿ ವ್ಯಾಗನ್ ಆರ್ (Maruti Suzuki Wagon R ) 1.0-ಲೀಟರ್ ಮತ್ತು 1.2-ಲೀಟರ್ ಕೆ-ಸೀರಿಸ್ ಪೆಟ್ರೋಲ್ ಎಂಜಿನ್ ಗಳ ಆಯ್ಕೆಗಳನ್ನು ಹೊಂದಿವೆ. ಈ ಕಾರನ್ನು ಹೊಸ ಪ್ಲಾಟ್ಫಾರ್ಮ್ನಲ್ಲಿ ತಯಾರಿಸಲಾಗಿದ್ದು, ಈ ಮಾದರಿಯು ಮಾರುತಿ ಸುಜುಕಿ ಸ್ವಿಫ್ಟ್ನಂತಹ ಇತರ ಉನ್ನತ-ವಿಭಾಗದ ಕಾರುಗಳಿಗೆ ಬೇಸ್ ರೀತಿ ಕಾರ್ಯ ನಿರ್ವಹಿಸುತ್ತದೆ.ಮಾರುತಿ ಸುಜುಕಿ ವ್ಯಾಗನ್ಆರ್ ಭಾರತದಲ್ಲಿ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಒಂದಾಗಿದೆ. ಮಾರುತಿ ಸುಜುಕಿ ವ್ಯಾಗನ್ಆರ್ 5-ಸ್ಫೀಡ್ ಗೇರ್ ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ವ್ಯಾಗನ್‍ಆರ್ ಸುಮಾರು ಎರಡು ದಶಕಗಳಿಂದ ಮಾರಾಟವಾಗುತ್ತಿದೆ.ಈ ಕಾರಿನ ಆಟೋಮ್ಯಾಟಿಕ್ ರೂಪಾಂತರ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.6.53 ಲಕ್ಷದಿಂದ ಪ್ರಾರಂಭವಾಗುತ್ತದೆ.

ಮಾರುತಿ ಸುಜುಕಿ ಸೆಲೆರಿಯೊ(Maruti Suzuki Celerio)
ಗ್ರಾಹಕರ ಆಯ್ಕೆಗೆ ಪೂರಕವಾಗುವ ಅನೇಕ ವಿಶೇಷತೆ ಒಳಗೊಂಡ ಅತ್ಯುತ್ತಮ ಸಿಟಿ ಕಾರುಗಳಲ್ಲಿ ಒಂದಾಗಿರುವ ಮಾರುತಿ ಸುಜುಕಿ ಸೆಲೆರಿಯೊ((Maruti Suzuki Celerio)ಕಾರಿನಲ್ಲಿ 1.0-ಲೀಟರ್ NA ಪೆಟ್ರೋಲ್ ಎಂಜಿನ್ ಒಳಗೊಂಡಿದೆ. ಈ ಎಂಜಿನ್ 66.6 ಬಿಹೆಚ್ಪಿ ಪವರ್ ಮತ್ತು 89 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಕೂಡ ಒಳಗೊಂಡಿದೆ. ಆಟೋಮ್ಯಾಟಿಕ್ ಆವೃತ್ತಿ ಬೆಲೆಯು ಎಕ್ಸ್ ಶೋರೂಂ ಅನುಸಾರ ರೂ.6.37 ಲಕ್ಷದಿಂದ ಲಕ್ಷದಿಂದ ಪ್ರಾರಂಭವಾಗುತ್ತದೆ.

ರೆನಾಲ್ಟ್ ಕ್ವಿಡ್ (Renault KWID) :
ರೆನಾಲ್ಟ್ ಕ್ವಿಡ್( Renault KWID) ಕಾರು ಸಣ್ಣ ಖರೀದಿದಾರರ ಮೆಚ್ಚುಗೆಗೆ ಪಾತ್ರವಾಗಿದೆ. ಭಾರತದಲ್ಲಿ ರೆನಾಲ್ಟ್ ಕ್ವಿಡ್ ಜನಪ್ರಿಯತೆ ಗಳಿಸಿದ್ದು, ಹ್ಯಾಚ್ಬ್ಯಾಕ್ ಜನಪ್ರಿಯ ಎಂಟ್ರಿ ಲೆವೆಲ್ ಮಾದರಿಯಾಗಿ ಗುರುತಿಸಿಕೊಂಡಿದೆ.RXT 1.0 EASY-R ರೂಪಾಂತರದ ಬೆಲೆಯು ಎಕ್ಸ್ ಶೂರೂಂ ಪ್ರಕಾರ ರೂ.6.12 ಲಕ್ಷವಾಗಿದೆ.

ಮಾರುತಿ ಸುಜುಕಿ ಎಸ್-ಪ್ರೆಸ್ಸೊ (Maruti Suzuki S-Presso):
ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಎಸ್ಯುವಿ ಸ್ಟೈಲಿಂಗ್ನೊಂದಿಗಿನ ಕಾಂಪ್ಯಾಕ್ಟ್ ಹ್ಯಾಚ್ಬ್ಯಾಕ್ ಒಳಗೊಂಡಿದೆ. ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಕಾರಿನಲ್ಲಿ 1.0-ಲೀಟರ್ ಎಂಜಿನ್ ಅನ್ನು ಒಳಗೊಂಡಿದೆ. ಈ ಎಂಜಿನ್ 68 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ. ಈ ಎಂಜಿನ್ ಅನ್ನು 5-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ. ಮಾರುತಿ ಎಸ್-ಪ್ರೆಸ್ಸೊದ ಆಟೋಮ್ಯಾಟಿಕ್ ರೂಪಾಂತರವು ವಿಎಕ್ಸ್ಐ (ಒ) ಎಜಿಎಸ್ ರೂಪಾಂತರದ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.5.75 ಲಕ್ಷವಾಗಿದೆ.

ಮಾರುತಿ ಸುಜುಕಿ ಆಲ್ಟೋ K10 (Maruti Suzuki Alto K10)
ಪ್ರಸ್ತುತ ಭಾರತೀಯ ಮಾರುಕಟ್ಟೆಯಲ್ಲಿ ಅಗ್ಗದ ಬೆಲೆಯಲ್ಲಿ ಆಟೋಮ್ಯಾಟಿಕ್ ಕಾರ್ ಆಗಿದ್ದು, ಈ ಕಾರಿನಲ್ಲಿ 1.0-ಲೀಟರ್, 3-ಸಿಲಿಂಡರ್, ನ್ಯಾಚುರಲ್ ಆಸ್ಪರರ್ಡ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಎಂಜಿನ್ 65.7 ಬಿಹೆಚ್‍ಪಿ ಪವರ್ ಮತ್ತು 89 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ.ಈ ಮಾರುತಿ ಆಲ್ಟೋ K10 VXI AGS ಬೆಲೆಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ.5.59 ಲಕ್ಷವಾಗಿದೆ.

Leave A Reply

Your email address will not be published.