AAP Corruption : ಸಚಿವ ಸ್ಥಾನಕ್ಕೆ ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್ – ರಾಜೀನಾಮೆ ಅಂಗೀಕರಿಸಿದ ಸಿಎಂ ಕೇಜ್ರಿವಾಲ್, AAP ಗೆ ತೀವ್ರ ಮುಖಭಂಗ !

AAP Corruption : ಸಚಿವ ಸ್ಥಾನಕ್ಕೆ ಮನೀಶ್ ಸಿಸೋಡಿಯಾ (Manish Sisodiya) ಮತ್ತು ಸತ್ಯೇಂದ್ರ ಜೈನ್ ರಾಜೀನಾಮೆ ನೀಡಿದ್ದು, ಸಿಎಂ ಅರವಿಂದ್ ಕೇಜ್ರಿವಾಲ್ (Arvind khejrival) ಅವರ ರಾಜೀನಾಮೆಗಳನ್ನು ಅಂಗೀಕರಿಸಿದ್ದಾರೆ ಎಂದು ತಿಳಿದುಬಂದಿದೆ. ದೆಹಲಿ ಸರ್ಕಾರದ ಸಚಿವ ಸ್ಥಾನಕ್ಕೆ ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ರಾಜೀನಾಮೆ ನೀಡಿದ್ದು, ಸಿಎಂ ಅರವಿಂದ್ ಕೇಜ್ರಿವಾಲ್ ಅವರ ರಾಜೀನಾಮೆಗಳನ್ನು ಅಂಗೀಕರಿಸಿದ್ದಾರೆ ಎಂದು ತಿಳಿದುಬಂದಿದೆ. ಇದರಿಂದಾಗಿ ತಾವು ” ಕ್ಲೀನ್ ” ಅನ್ನುತ್ತಿದ್ದ ಆಪ್ ಪಕ್ಷಕ್ಕೆ ತೀವ್ರ ಮುಖಭಂಗ (AAP Corruption) ಉಂಟಾಗಿದೆ.

ಮನೀಶ್ ಸಿಸೋಡಿಯಾ ಅಬಕಾರಿ ಹಗರಣದಲ್ಲಿ ಬಂಧನಕ್ಕೀಡಾಗಿದ್ದಾರೆ. ಮತ್ತು ಎಎಪಿ ಸರ್ಕಾರದ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ED) ಬಂಧನಕ್ಕೊಳಗಾಗಿದ್ದಾರೆ. ಈಗ ಇಬ್ಬರೂ ತಿಹಾರ್‌ ಜೈಲಿನಲ್ಲಿದ್ದಾರೆ. ಇಬ್ಬರೂ ಸಚಿವರು ತನ್ನ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ಇಬ್ಬರ ರಾಜಿನಾಮೆಯನ್ನು ಸಿಎಂ ಅರವಿಂದ್ ಕೇಜ್ರಿವಾಲ್ ಅಂಗೀಕರಿಸಿದ್ದಾರೆ ಎಂದು ತಿಳಿದುಬಂದಿದೆ.

ದೆಹಲಿಯಲ್ಲಿ ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದ ಈ ಇಬ್ಬರು ಸಚಿವರ ರಾಜೀನಾಮೆಗೆ ಬಿಜೆಪಿ ನಿರಂತರ ಬೇಡಿಕೆ ಇಟ್ಟಿತ್ತು. ತನ್ಮಧ್ಯೆ, ದೆಹಲಿ ಸರ್ಕಾರದಲ್ಲಿನ ತಮ್ಮ ಸ್ಥಾನಗಳಿಗೆ ಈ ಇಬ್ಬರು ನಾಯಕರುಗಳು ರಾಜೀನಾಮೆ ನೀಡಿದ್ದಾರೆ. ಸದ್ಯಕ್ಕೆ ದೊರೆತ ಮಾಹಿತಿಗಳ ಪ್ರಕಾರ ಮನೀಶ್ ಸಿಸೋಡಿಯಾ ಅವರ ಖಾತೆಗಳನ್ನು ಕೈಲಾಶ್ ಗೆಹ್ಲೋಟ್ ಮತ್ತು ರಾಜ್ ಕುಮಾರ್ ಆನಂದ್ ಅವರಿಗೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

AAP ಪಕ್ಷದಲ್ಲಿ ಸಿಸೋಡಿಯಾ ಕೇಜ್ರಿವಾಲ್ ಬಳಿಕ ಎರಡನೇ ಹಂತದ ಪ್ರಮುಖ ನಾಯಕರು. ಸಚಿವ ಸತ್ಯೇಂದ್ರ ಜೈನ್ ಈಗಾಗಲೇ ಜೈಲಿನಲ್ಲಿದ್ದು, ಅಂದಿನಿಂದ ಸತ್ಯೇಂದ್ರ ಜೈನ್ ಅವರ ಇಲಾಖೆಗಳನ್ನೂ ಸಿಸೋಡಿಯಾ ನಿರ್ವಹಿಸುತ್ತಿದ್ದರು. ಇದೀಗ ಅವರ ಬಂಧನದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಆಡಳಿತಾರೂಢ AAP ಪಕ್ಷ ತೀವ್ರ ಮುಜುಗರಕ್ಕೀಡಾಗಿದೆ.

ಮನೀಶ್ ಸಿಸೋಡಿಯಾ ಅವರು ಬರೋಬ್ಬರಿ 18 ಸಚಿವಾಲಯಗಳ ಉಸ್ತುವಾರಿಯನ್ನು ನಿರ್ವಹಿಸುತ್ತಿದ್ದರು. ಸಿಸೋಡಿಯಾ ಅವರು ಶಿಕ್ಷಣ, ಆರೋಗ್ಯ, ಕೈಗಾರಿಕೆ, ವಿದ್ಯುತ್, ಗೃಹ, ನಗರಾಭಿವೃದ್ಧಿ, ಹಣಕಾಸು, ಕಲೆ-ಸಂಸ್ಕೃತಿ ಮತ್ತು ಭಾಷೆ, ಜಾಗೃತಿ, ಕಾರ್ಮಿಕ ಮತ್ತು ಉದ್ಯೋಗ, ಯೋಜನೆ, ಭೂಮಿ ಮತ್ತು ಕಟ್ಟಡ, ಸೇವೆಗಳು, ಪ್ರವಾಸೋದ್ಯಮ, ನೀರಾವರಿ ಜೊತೆಗೆ ಲೋಕೋಪಯೋಗಿ ಇಲಾಖೆಯನ್ನು ಹೊಂದಿದ್ದಾರೆ. ಪ್ರವಾಹ ನಿಯಂತ್ರಣ ಮತ್ತು ಜಲ ಇಲಾಖೆಯನ್ನೂ ಸೇರಿಸಿ ಅವರು ಒಟ್ಟು 18 ಸಚಿವಾಲಯಗಳನ್ನು ಅವರು ನಿರ್ವಹಿಸುತ್ತಿದ್ದರು.

ಈ ಮಧ್ಯೆ ತಮ್ಮನ್ನು ಸಿಬಿಐ ಬಂಧಿಸಿದ ಸಿಸೋಡಿಯಾ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್, ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸುವಂತೆ ಸಲಹೆ ನೀಡಲಾಗಿದೆ. ಆದರೆ ದೆಹಲಿ ಅಬಕಾರಿ ನೀತಿ ಹಗರಣ ಸಿಬಿಐ ಬಂಧನ ಪ್ರಶ್ನಿಸಿದ ಮನೀಶ್ ಸಿಸೋಡಿಯಾ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ. ಈಗ ಮನೀಶ್ ಸಿಸೋಡಿಯಾರನ್ನು, ಮಾರ್ಚ್ 4 ರವರೆಗೆ ಸಿಬಿಐ ವಶಕ್ಕೆ ದೆಹಲಿ ಕೋರ್ಟ್ ಒಪ್ಪಿಸಿದೆ.

ಅಬಕಾರಿ ಹಗರಣ ಪ್ರಕರಣದಲ್ಲಿ ಮಧ್ಯ ಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಸಿಸೋಡಿಯಾ ಅವರನ್ನು ಸಿಬಿಐ ಅಧಿಕಾರಿಗಳು 5 ದಿನಗಳ ಕಾಲ ವಶಕ್ಕೆ ಪಡೆದಿದ್ದಾರೆ. ಕಾಂಗ್ರೆಸ್ ನಾಯಕ ಮತ್ತು ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಸಿಸೋಡಿಯಾ ಪರ ಸುಪ್ರೀಂ ಕೋರ್ಟ್ ನಲ್ಲಿ ಸಿಸೋಡಿಯಾ ಬಂಧನದ ವಿರುದ್ಧ ಇಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ (CIJ Chandrachud) ಮತ್ತು ನ್ಯಾಯಮೂರ್ತಿ ಪಿ.ಎಸ್.ನರಸಿಂಹ ಅವರ ಪೀಠವು ವಿಚಾರಣೆ ನಡೆಸಿತು. ಆಗ ಸಿಜೆಐ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು. ‘ನೀವು ಹೈಕೋರ್ಟ್‌ಗೆ ಹೋಗಬೇಕಿತ್ತು, ನೀವು ನೇರವಾಗಿ ಸುಪ್ರೀಂ ಕೋರ್ಟ್‌ನಿಂದ ಜಾಮೀನನ್ನು ಏಕೆ ಕೇಳುತ್ತಿದ್ದೀರಿ ‘ ಎಂದು ಪ್ರಶ್ನಿಸಿದರು. ಆರ್ಟಿಕಲ್ – 32 ರ ಅಡಿಯಲ್ಲಿ ನೀವು ಇಲ್ಲಿಗೆ ಏಕೆ ಬಂದಿದ್ದೀರಿ ? ಇದು ಖಂಡಿತಾ ಒಳ್ಳೆಯ ಮತ್ತು ಆರೋಗ್ಯಕರ ಸಂಪ್ರದಾಯವಲ್ಲ ಎಂದು ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಮೊದಲು ಜಾಮೀನಿಗಾಗಿ ದೆಹಲಿ ಹೈಕೋರ್ಟ್‌ಗೆ ಮೊರೆ ಹೋಗುವಂತೆ ನ್ಯಾಯಾಲಯ ಸಿಸೋಡಿಯಾಗೆ ಸಲಹೆ ನೀಡಿದೆ.

Leave A Reply

Your email address will not be published.