ದಕ್ಷಿಣ ಕನ್ನಡ : ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಪಾಲ್ಗೊಂಡ ಉದ್ಯಮಿ ಹೃದಯಾಘಾತದಿಂದ ಮೃತ್ಯು

Heart Attack: ದಕ್ಷಿಣಕನ್ನಡ : ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಪಾಲ್ಗೊಂಡ ಉದ್ಯಮಿಯೋರ್ವರು ಹೃದಯಾಘಾತ ( Heart Attack)ದಿಂದ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮಂಗಳೂರಿನ ಜೆಪ್ಪು ಬಂಟರ ಸಂಘದ ವತಿಯಿಂದ ಏರ್ಪಡಿಸಿದ್ದ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ರಿಯಲ್‌ ಎಸ್ಟೇಟ್‌ ಉದ್ಯಮಿ,ಬಂಟರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಕುಶಲನಾಥ ಶೆಟ್ಟಿ(50) ಮೃತಪಟ್ಟವರು.

ಕುಶಲನಾಥ ಶೆಟ್ಟಿ ಅವರು, ಬಂಟರ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದು, ಸ್ಪರ್ಧೆಯಲ್ಲಿ ಅವರಿದ್ದ ತಂಡ ಗೆಲುವು ಸಾಧಿಸಿತ್ತು, ಸ್ಪರ್ಧೆಯ ಬಳಿಕ ಕುಳಿತಿದ್ದ ಅವರಿಗೆ ಎದೆನೋವು ಕಾಣಿಸಿಕೊಂಡಿತು, ಹಾಗೂ ವಾಂತಿ ಮಾಡಿಕೊಂಡಿದ್ದಾರೆ.

ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅವರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Leave A Reply

Your email address will not be published.