7th Pay Commission : ರಾಜ್ಯ ಸರಕಾರಿ ನೌಕರರ ಮುಷ್ಕರ ಪರಿಣಾಮ, SSLC ಪರೀಕ್ಷೆ ಮುಂದೂಡಿಕೆ!!!

7th pay commission: 7ನೇ ವೇತನ ಆಯೋಗ(7th pay commission) ವರದಿ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ನಡೆಸುತ್ತಿರುವ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ಈ ಹಿನ್ನೆಲೆ ಇಂದು ನಡೆಯಬೇಕಿದ್ದ ಪರೀಕ್ಷೆಗಳ ಮೇಲೆ ಪ್ರಭಾವ ಬೀರಿದ್ದು, ಇಂದು ಬೆಂಗಳೂರು, ಕಲಬುರಗಿಯಲ್ಲಿ ನಡೆಯಬೇಕಿದ್ದ ಪರೀಕ್ಷೆಗಳು ಮುಂದೂಡಲ್ಪಟ್ಟಿದೆ.

7ನೇ ವೇತನ ಆಯೋಗ(7th pay commission) ವರದಿ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ನಡೆಸುತ್ತಿರುವ ಮುಷ್ಕರದ ಹಿನ್ನೆಲೆ ವಿದ್ಯಾರ್ಥಿಗಳ ಪರೀಕ್ಷೆಗಳ ಮೇಲೆ ಪ್ರಭಾವ ಬೀರಿದೆ. ಎಸ್‌ಎಸ್‌ಎಲ್ಸಿ ಪೂರ್ವಭಾವಿ ಪರೀಕ್ಷೆಗೂ ಸರಕಾರಿ ನೌಕರರ ಮುಷ್ಕರದ ಬಿಸಿ ತಟ್ಟಿದ್ದು, ಮುಷ್ಕರದ ಹಿನ್ನೆಲೆ ಪ್ರೌಢಶಾಲಾ ಶಿಕ್ಷಕರ ಸಂಘ ಕರ್ತವ್ಯಕ್ಕೆ ಗೈರು ಹಾಜರಾಗಲು ನಿರ್ಧರಿಸಿ 80,000 ಪ್ರೌಢಶಾಲೆ ಶಿಕ್ಷಕರು ಇಂದು ಕರ್ತವ್ಯಕ್ಕೆ ಗೈರಾಗಿದ್ದಾರೆ ಎಂದು ತಿಳಿದು ಬಂದಿದೆ.

ಹೀಗಾಗಿ, ಬೆಂಗಳೂರಿನಲ್ಲಿ ಇಂದು ನಡೆಯಬೇಕಿದ್ದ ಎಸ್‌ಎಸ್‌ಎಲ್ಸಿ ಪೂರ್ವಭಾವಿ ಪರೀಕ್ಷೆ ಮುಂದೂಡಲಾಗಿದೆ. ಬೆಂಗಳೂರಿನಲ್ಲಿ ಇಂದು ನಡೆಯಬೇಕಿದ್ದ ಎಸ್‌ಎಸ್‌ಎಲ್ಸಿ ತೃತೀಯ ಭಾಷೆ ಹಿಂದಿ ವಿಷಯದ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಈ ಪರೀಕ್ಷೆಯನ್ನು ಈ ಮಾರ್ಚ್ 6 ರಂದು ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ.

ರಾಜ್ಯ ಸರ್ಕಾರಿ ನೌಕರರು ಮುಷ್ಕರ (Karnataka Government Employees Strike)7ನೇ ವೇತನ ಆಯೋಗ ವರದಿ ಜಾರಿಗೆಗೊಳಿಸಲು ಹಿಂದಿನಿಂದಲೂ ಮನವಿ ಸಲ್ಲಿಸುತ್ತಿದ್ದು ಇದಕ್ಕೆ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದ ಕಾರಣ ರಾಜ್ಯ ಸರ್ಕಾರಿ ನೌಕರರು ಮುಷ್ಕರ (Strike) ನಡೆಸುತ್ತಿದ್ದಾರೆ. ಈ ಮುಷ್ಕರಕ್ಕೆ ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಯ ಸುಮಾರು 10 ಲಕ್ಷ ನೌಕರರು ಸಾಥ್ ನೀಡಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಹೀಗಾಗಿ, ರಾಜ್ಯ ಸರ್ಕಾರಿ ನೌಕರರ ಮುಷ್ಕರ ವಿದ್ಯಾರ್ಥಿಗಳ ಪರೀಕ್ಷೆಗಳ ಮೇಲೆ ಪರಿಣಾಮ ಬೀರಿದೆ. ಇಂದು(ಮಾರ್ಚ್ 01) ರಂದು ನಡೆಯಬೇಕಿದ್ದ ಪದವಿಪೂರ್ವ ಕಾಲೇಜುಗಳ ಪ್ರಥಮ ಪಿಯುಸಿ ಪರೀಕ್ಷೆಗಳನ್ನು ಬೆಂಗಳೂರು ದಕ್ಷಿಣ ಜಿಲ್ಲೆ, ಬಾಗಲಕೋಟೆಯಲ್ಲಿ ಮುಂದೂಡಲಾಗಿದೆ. ಇದರ ಜೊತೆಗೆ ಕಲಬುರಗಿಯಲ್ಲಿ ನಡೆಯಬೇಕಿದ್ದ ಎಸ್​ಎಸ್​ಎಲ್​ಸಿ ಪೂರ್ವಭಾವಿ ಪರೀಕ್ಷೆಯನ್ನೂ(SSLC Exams) ಕೂಡ ಮುಂದೂಡಲಾಗಿದೆ.

ರಾಜ್ಯಾದ್ಯಂತ ಸರಕಾರಿ ನೌಕರರ ಮುಷ್ಕರದ ಹಿನ್ನೆಲೆ ಹೆಚ್ಚಿನ ಕಡೆಗಳಲ್ಲಿ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. ಬಾಗಲಕೋಟೆಯಲ್ಲಿ ಇಂದು ನಡೆಯಬೇಕಿದ್ದ ಪ್ರಥಮ ಪಿಯುಸಿ (FIRST PUC) ಹಿಂದಿ, ಸಂಸ್ಕೃತ ಭಾಷೆ ಪರೀಕ್ಷೆ ನಡೆಯಬೇಕಾಗಿತ್ತು. ಆದರೆ ಮುಷ್ಕರದ ಹಿನ್ನೆಲೆ ಪರೀಕ್ಷೆ ಮುಂದೂಡಿಕೆಯಾಗಿದ್ದು, ಈ ಕುರಿತು ಬಾಗಲಕೋಟೆ ಡಿಡಿಪಿಯು ಡಾ ಕೃಷ್ಣಪ್ಪ ಪಿ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಈ ನಡುವೆ ಕಲಬುರಗಿಯಲ್ಲಿ ಇಂದು ನಡೆಬೇಕಿದ್ದ ಹಿಂದಿ(Hindi) ವಿಷಯದ ಎಸ್​ಎಸ್​ಎಲ್​ಸಿ ಪೂರ್ವಭಾವಿ ಪರೀಕ್ಷೆಯನ್ನು ಕೂಡ ರದ್ದು ಮಾಡಿ ಮಾರ್ಚ್ 6ರಂದು ನಡೆಸಲು ಕಲಬುರಗಿ ಡಿಡಿಪಿಐ ಸಂಕ್ರೆಪ್ಪಗೌಡ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಮುಷ್ಕರಕ್ಕೆ ಇಲ್ಲಿನ ಶಾಲಾ ಶಿಕ್ಷಕರು ಕೂಡ ಸಾಥ್ ನೀಡಿದ ಹಿನ್ನೆಲೆ ಪರೀಕ್ಷೆಯನ್ನು ಮುಂದೂಡುವ ತೀರ್ಮಾನ ಕೈಗೊಳ್ಳಲಾಗಿದೆ.

ಬೆಂಗಳೂರು ದಕ್ಷಿಣ ಜಿಲ್ಲೆ ಪದವಿಪೂರ್ವ ಕಾಲೇಜುಗಳಲ್ಲಿ ಇಂದು ನಡೆಯಬೇಕಿದ್ದ ಪ್ರಥಮ ಪಿಯುಸಿ Biology, Computer science, Electronics and Sociology ವಿಷಯದ ಪರೀಕ್ಷೆಗಳನ್ನು ಸರ್ಕಾರಿ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಎದುರಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಮುಂದೂಡಲಾಗಿದೆ. ಹೀಗಾಗಿ, ಇಂದು ನಡೆಯಬೇಕಿದ್ದ ಪರೀಕ್ಷೆಗಳು ದಿನಾಂಕ 4-3-2023ರಂದು ನಡೆಯಲಿವೆ. ಇದರ ಜೊತೆಗೆ, ಇನ್ನುಳಿದ ಪರೀಕ್ಷೆಗಳು ಯಾವುದೇ ಬದಲಾವಣೆ ಇಲ್ಲದೆ ನಡೆಯಲಿದ್ದು, ಒಂದು ವೇಳೆ ಬದಲಾವಣೆಗಳಿದ್ದಲ್ಲಿ ನಿಮ್ಮ ಗಮನಕ್ಕೆ ತರಲಾಗುವುದು ಎಂದು ಬೆಂಗಳೂರು ದಕ್ಷಿಣ ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

Leave A Reply

Your email address will not be published.