ರಾಜ್ಯದಲ್ಲಿ ʼಹಳೆಯ ಪಿಂಚಣಿ ಯೋಜನೆʼ ಜಾರಿಗೆ- ರಾಜ್ಯ ಸರಕಾರ ಆದೇಶ

Defined – Pension Scheme: ರಾಷ್ಟ್ರೀಯ ಪಿಂಚಣಿ ಯೋಜನೆ(National Pension System) ಹೂಡಿಕೆಗಳ ಸಂಯೋಜನೆಯಾಗಿದೆ. ಈ ಯೋಜನೆಯಲ್ಲಿ ಸರ್ಕಾರಿ ಉದ್ಯೋಗಿ ಕೂಡ ಮೂಲ ವೇತನದ ಶೇಕಡಾ 10ರಷ್ಟನ್ನು ನಿವೃತ್ತಿ ನಿಧಿಗೆ ಕೊಡುಗೆಯಾಗಿ ನೀಡಬೇಕಾಗುತ್ತದೆ. ರಾಜ್ಯದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲಿಗೆ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಲಾಗಿದೆ.

ರಾಜ್ಯ ಸರ್ಕಾರವು ರಾಜ್ಯದಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲು ತೀರ್ಮಾನಿಸಿ ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿ 01.04.2006 ರ ಬಳಿಕ ಸರ್ಕಾರಿ ಸೇವೆಗೆ ಸೇರಿರುವ ನೌಕರರಿಗೆ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿಗೆ ತರಲಾಗಿದೆ.

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ 21.02.2023 ಮನವಿಯಲ್ಲಿ ಕರ್ನಾಟಕ ರಾಜ್ಯದಲ್ಲಿ ಪ್ರಸ್ತುತ ಜಾರಿಯಲಿರುವ ಸರ್ಕಾರಿ ನೌಕರರ ನೂತನ ಪಿಂಚಣಿ ಯೋಜನೆಗೆ ಕುರಿತಂತೆ ದೇಶದ ಹಲವು ರಾಜ್ಯಗಳು, ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲಾಗಿ ಈ ಹಿಂದೆ ಜಾರಿಯಲ್ಲಿದ್ದ ಹಳೆಯ ಪಿಂಚಣಿ ಯೋಜನೆಯನ್ನು ಅನುಷ್ಠಾನ ಮಾಡಲಾಗಿದೆ. ಅದೇ ರೀತಿ ಕರ್ನಾಟಕ ರಾಜ್ಯದಲ್ಲೂ ಸಹ ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲಿಗೆ ಹಳೆಯ ಪಿಂಚಣಿ ಯೋಜನೆಯನ್ನು (Defined – Pension Scheme) ಜಾರಿಗೆ ತರುವಂತೆ ಸರ್ಕಾರವನ್ನು ಮನವಿ ಮಾಡಿದ್ದಾರೆ.

ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿಯನ್ನು ಪರಿಶೀಲಿಸಿದ ಸರ್ಕಾರವು ಈಗಾಗಲೇ ಹಳೆಯ ಪಿಂಚಣಿ ಯೋಜನೆ (Defined – Persion Scheme)ಯನ್ನು ಮರು ಜಾರಿ ಮಾಡಿರುವ ರಾಜ್ಯಗಳಲ್ಲಿ ಈ ಯೋಜನೆಯನ್ನು ಅನುಷ್ಠಾನ ಮಾಡಿರುವ ಬಗ್ಗೆ ಕೈಗೊಂಡಿರುವ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲು ತೀರ್ಮಾನಿಸಿ ಆದೇಶ ಹೊರಡಿಸಿದೆ.

Leave A Reply

Your email address will not be published.