ಸರಕಾರಿ ನೌಕರರು ಕೆಲಸಕ್ಕೆ ಗೈರಾದರೆ Dies Non ಎಂದು ಪರಿಗಣಿಸಿ ಅವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ

Dies Non: ಬೆಂಗಳೂರು : ಸರಕಾರಿ ನೌಕರರು ಅನಿವಾರ್ಯ ಕಾರಣಗಳಿಂದ ಕಚೇರಿಗೆ ಹಾಜರಾಗದೆ ಇದ್ದಲ್ಲಿ ಪೂರ್ವಾನುಮತಿ ಪಡೆಯುವುದು ಕಡ್ಡಾಯ. ಒಂದು ವೇಳೆ ಸೂಚನೆ ನೀಡದೆ ಕೆಲಸಕ್ಕೆ ಗೈರಾದರೆ Dies Non ಎಂದು ಪರಿಗಣಿಸಿ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸರಕಾರ ಎಚ್ಚರಿಕೆ ನೀಡಿದೆ.

 

7ನೇ ವೇತನ ಆಯೋಗದ ವರದಿ ಜಾರಿ ಮತ್ತು ಹಳೆ ಪಿಂಚಣಿ ಯೋಜನೆ ಜಾರಿ ಬೇಡಿಕೆಗಳನ್ನು ಮುಂದಿಟ್ಟು ಸರಕಾರಿ ನೌಕರರು ಬುಧವಾರದಿಂದ ಮುಷ್ಕರಕ್ಕೆ ಕರೆ ನೀಡಿದ್ದಾರೆ.

ಕೆಲಸಕ್ಕೆ ಗೈರಾಗುವ ಮೂಲಕ ಪ್ರತಿಭಟನೆ ನಡೆಸಲು ನೌಕರರ ಸಂಘ ನಿರ್ಧರಿಸಿದೆ. ತುರ್ತು ಸೇವೆ ಹೊರತುಪಡಿಸಿ ಯಾವುದೇ ನೌಕರರು ಕೆಲಸಕ್ಕೆ ಹಾಜರಾಗಬಾರದೆಂದು ತಿಳಿಸಿದೆ.

ಈ ನಡುವೆ ಸರಕಾರ ಮಂಗಳವಾರ ಕಠಿಣ ಎಚ್ಚರಿಕೆ ನೀಡುವ ಸುತ್ತೋಲೆಯೊಂದನ್ನು ಹೊರಡಿಸಿದೆ. ಸರಕಾರದ ವಿಶೇಷಾಧಿಕಾರಿ ಹಾಗೂ ಸಕ್ಷಮ ಪ್ರಾಧಿಕಾರಿ ಆದಿತ್ಯ ಆಮ್ಲನ್ ಬಿಸ್ವಾಸ್ ಈ ಸುತ್ತೋಲೆ ಹೊರಡಿಸಿದ್ದಾರೆ.

Leave A Reply

Your email address will not be published.