KSFC Recruitment 2023 : ಕರ್ನಾಟಕ ರಾಜ್ಯ ಹಣಕಾಸು ನಿಗಮದಲ್ಲಿ ಭರ್ಜರಿ ಉದ್ಯೋಗವಕಾಶ; ವೇತನ 52 ಸಾವಿರದಿಂದ 97 ಸಾವಿರದವರೆಗೆ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

KSFC Recruitment 2023: ಇಂದಿನ ಕಾಲದಲ್ಲಿ ಸರಕಾರಿ ಹುದ್ದೆಗಳನ್ನು ಅಲಂಕರಿಸುವುದು ಸುಲಭದ ಮಾತಲ್ಲ. ಪೈಪೋಟಿಯ ನಡುವೆ ನೆಚ್ಚಿನ ಹುದ್ದೆ (Job)ಪಡೆಯಲು ನಾನಾ ರೀತಿಯ ಹರಸಾಹಸ ಪಟ್ಟು ಕಂಗಾಲಾಗಿದ್ದೀರಾ? ಹಾಗಿದ್ರೆ ಇಲ್ಲಿದೆ ನೋಡಿ ಸಿಹಿ ಸುದ್ದಿ. ಹೌದು!! ಉದ್ಯೋಗಾಂಕ್ಷಿಗಳಿಗೆ ಬಹು ಮುಖ್ಯ ಮಾಹಿತಿ ಇಲ್ಲಿ ನೀಡಲಾಗಿದೆ. ನೀವೇನಾದರೂ ಬೆಂಗಳೂರಿನಲ್ಲಿ ನೌಕರಿಗಾಗಿ ಹುಡುಕಾಟ ನಡೆಸುತ್ತಿದ್ದರೆ ನಿಮಗಿದು ಸುವರ್ಣ ಅವಕಾಶ!!ಕರ್ನಾಟಕ ರಾಜ್ಯ ಹಣಕಾಸು ನಿಗಮದಲ್ಲಿ 48 ಹುದ್ದೆಗಳಿಗೆ ಅರ್ಜಿ ಅಹ್ವಾನ ಮಾಡಲಾಗಿದ್ದು, ಆಸಕ್ತರು ಕೊನೆಯ ದಿನದ ಮೊದಲೇ ಅರ್ಜಿ ಸಲ್ಲಿಸಿ.

ಕರ್ನಾಟಕ ರಾಜ್ಯ ಹಣಕಾಸು ನಿಗಮವು( Karnataka State Financial Corporation) ಫೆಬ್ರವರಿ 2023 ರ KSFC ಅಧಿಕೃತ ಅಧಿಸೂಚನೆಯ ಅನುಸಾರ 41 ಡೆಪ್ಯುಟಿ ಮ್ಯಾನೇಜರ್( Deputy Manager)(ತಾಂತ್ರಿಕ ಮತ್ತು ಕಾನೂನು) ಖಾಲಿ ಹುದ್ದೆಗಳನ್ನ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ.

ಅಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಖಾಲಿ ಹುದ್ದೆಗಳು, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಬಗ್ಗೆ ಮಾಹಿತಿ ತಿಳಿದುಕೊಳ್ಳುವುದು ಉತ್ತಮ. ಈ ಕುರಿತ ಮಾಹಿತಿ ಇಲ್ಲಿ ನೀಡಲಾಗಿದೆ.

KSFC ಹುದ್ದೆಯ ವಿವರಗಳು(KSFC Recruitment 2023)
ಸಂಸ್ಥೆಯ ಹೆಸರು: ಕರ್ನಾಟಕ ರಾಜ್ಯ ಹಣಕಾಸು ನಿಗಮ (KSFC)
ಹುದ್ದೆಗಳ ಸಂಖ್ಯೆ: 41
ಡೆಪ್ಯುಟಿ ಮ್ಯಾನೇಜರ್ (ತಾಂತ್ರಿಕ)- 11 ಹುದ್ದೆಗಳು
ಡೆಪ್ಯುಟಿ ಮ್ಯಾನೇಜರ್ (ಕಾನೂನು)- 18 ಹುದ್ದೆಗಳು
ಡೆಪ್ಯುಟಿ ಮ್ಯಾನೇಜರ್ (ಹಣಕಾಸು ಮತ್ತು ಖಾತೆಗಳು)- 12 ಹುದ್ದೆಗಳು

ಶೈಕ್ಷಣಿಕ ಅರ್ಹತೆ:
ಉಪ ವ್ಯವಸ್ಥಾಪಕ (ತಾಂತ್ರಿಕ) ಹುದ್ದೆಗೆ ಪದವಿ ಪೂರ್ಣಗೊಳಿಸಿರಬೇಕು. ಉಪ ವ್ಯವಸ್ಥಾಪಕರು (ಕಾನೂನು)ಹುದ್ದೆಗೆ ಕಾನೂನಿನಲ್ಲಿ ಪದವಿ ಪೂರ್ಣಗೊಳಿಸಿರಬೇಕು.ಉಪ ವ್ಯವಸ್ಥಾಪಕರು (ಹಣಕಾಸು ಮತ್ತು ಖಾತೆಗಳು) ಹುದ್ದೆಗೆ KSFC ಅಧಿಕೃತ ಅಧಿಸೂಚನೆಯ ಅನುಸಾರ ಅಭ್ಯರ್ಥಿಯು ACA/ ICWA/ MBA/ M.Com/ CFA/ PGDMA ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳ ಮೂಲಕ ಮುಗಿಸಿರಬೇಕಾಗುತ್ತದೆ.

ಅರ್ಜಿ ಶುಲ್ಕ
SC/ST ಅಭ್ಯರ್ಥಿಗಳು: ರೂ.1500/-
Cat-I/Cat-2A/Cat-2B/Cat-3A & Cat-3B ಅಭ್ಯರ್ಥಿಗಳಿಗೆ ರೂ.2000/- ಆಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18-Mar-2023
ವಯೋಮಿತಿ:
ಕರ್ನಾಟಕ ರಾಜ್ಯ ಹಣಕಾಸು ನಿಗಮದ ನೇಮಕಾತಿ ಅಧಿಸೂಚನೆಯ ಅನುಸಾರ, ಅಭ್ಯರ್ಥಿಯು ಕನಿಷ್ಠ 25 ವರ್ಷಗಳು ಮತ್ತು ಗರಿಷ್ಠ 40 ವರ್ಷಗಳಾಗಿರಬೇಕು.

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 3 ವರ್ಷಗಳು
SC, ST ಅಭ್ಯರ್ಥಿಗಳು: 5 ವರ್ಷಗಳು
PWD ಅಭ್ಯರ್ಥಿಗಳು: 10 ವರ್ಷಗಳು

ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ

ಮಾಸಿಕ ವೇತನ: ರೂ. 52,650 – 97,100/-
ಅಧಿಕೃತ ವೆಬ್‌ಸೈಟ್: ksfc.in

ಪಾವತಿ ವಿಧಾನ: ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿದೆ.

ಅರ್ಜಿ ಸಲ್ಲಿಸುವಾಗ ಯಾವುದೇ ಗೊಂದಲ ಅನುಮಾನಗಳಿದ್ದರೆ, ಅಭ್ಯರ್ಥಿಗಳು ಸಹಾಯವಾಣಿ ಸಂಖ್ಯೆ 080 22263322 (ext.870) ಅನ್ನು ಕಚೇರಿ ಸಮಯದಲ್ಲಿ ಹಾಗೂ ಎಲ್ಲಾ ಕೆಲಸದ ದಿನಗಳಲ್ಲಿ ಸಂಪರ್ಕಿಸಬಹುದಾಗಿದೆ. ಆಸಕ್ತ ಅರ್ಭ್ಯರ್ಥಿಗಳು ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿದ ನಂತರ ಅಗತ್ಯ ದಾಖಲೆಗಳನ್ನು ಲಗತ್ತಿಸಿದ ಬಳಿಕ ನೋಂದಾಯಿತ ಪೋಸ್ಟ್ ಅಥವಾ ಸ್ಪೀಡ್ ಪೋಸ್ಟ್ ಮೂಲಕ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಕಳಹಿಸಬೇಕಾಗುತ್ತದೆ.
ಅರ್ಜಿ ಕಳುಹಿಸಬೇಕಾದ ವಿಳಾಸ
The Managing Director, KSFC Head Office, KSFC Bhavana, No.1/1, Thimmaiah Road, Bengaluru 560052

ಆಸಕ್ತ ಅಭ್ಯರ್ಥಿಗಳು ಮೇಲೆ ತಿಳಿಸಿದ ಮಾಹಿತಿ ತಿಳಿದುಕೊಂಡು 18-Mar-2023 ಕೊನೆಯ ದಿನಾಂಕದ ಮೊದಲೇ ಅರ್ಜಿ ಸಲ್ಲಿಸುವುದು ಉತ್ತಮ.

Leave A Reply

Your email address will not be published.