ಟೈಲರ್ ಅಂಗಡಿಗೆ ಹೋದ ನರ್ಸಿಂಗ್ ವಿದ್ಯಾರ್ಥಿನಿ ನಾಪತ್ತೆ

Udupi (ಉಡುಪಿ) :ಟೈಲರ್ ಅಂಗಡಿಗೆ ಹೋಗಿ ಬರುವುದಾಗಿ ಹೇಳಿ ಹೋದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬರು ನಾಪತ್ತೆಯಾಗಿರುವ ಕುರಿತು ಉಡುಪಿ ಜಿಲ್ಲೆಯಿಂದ ವರದಿಯಾಗಿದೆ.

ಉಡುಪಿ (Udupi) ಜಿಲ್ಲೆಯ ಕುಂದಾಪುರ ತಾಲೂಕು ಕೆರಾಡಿ ಗ್ರಾಮದ ನಿವಾಸಿ, ಭೂಮಿಕಾ (18) ಎಂಬ ಯುವತಿ ನಾಪತ್ತೆಯಾದವರು.

ಭೂಮಿಕಾ ಅವರು ಬ್ರಹ್ಮಾವರದಲ್ಲಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದು, ಫೆ.26ರಂದು ಕೆರಾಡಿಯ ತನ್ನ ಮನೆಯಿಂದ ಟೈಲರ್ ಅಂಗಡಿಗೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ (08254) 258233, 9480805460, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ (08254) 251031, 9480805434 , ಸಂಪರ್ಕಿಸುವಂತೆ ಕೊಲ್ಲೂರು ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Leave A Reply

Your email address will not be published.