Karnataka Hijab Ban : ತುರ್ತು ವಿಚಾರಣೆ ನಿರಾಕರಿಸಿದ ಸುಪ್ರೀಂಕೋರ್ಟ್‌! 3 ನ್ಯಾಯಮೂರ್ತಿಗಳ ಪೀಠ ರಚನೆಗೆ ಅಸ್ತು

Karnataka Hijab Ban : ಈ ಹಿಂದೆ ಎರಡು ಬಣಗಳ ನಡುವೆ ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್ ಪ್ರಕರಣ ಮತ್ತೊಮ್ಮೆ ಮುನ್ನಲೆಗೆ ಬರುವ ಎಲ್ಲಾ ಲಕ್ಷಣಗಳು ಕಂಡುಬರುತ್ತಿವೆ. ಇತ್ತೀಚೆಗೆ ಕರ್ನಾಟಕದ ಸರ್ಕಾರಿ ಶಾಲೆಯ ಮುಸ್ಲಿಂ ವಿದ್ಯಾರ್ಥಿನಿಯರ ಗುಂಪೊಂದು ಹಿಜಾಬ್ (Hijab) ಧರಿಸಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವಂತೆ ಮನವಿ ಮಾಡಿ ಸುಪ್ರೀಂ ಕೋರ್ಟ್(Karnataka Hijab Ban) ಮೆಟ್ಟಿಲೇರಿದ ಪ್ರಕರಣ ಇತ್ತೀಚೆಗೆ ವರದಿಯಾಗಿತ್ತು.

ಸದ್ಯ, ಈ ಕುರಿತು ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ಕೋರಿ ಮನವಿ ಸಲ್ಲಿಸಿರುವ ವಿದ್ಯಾರ್ಥಿನಿಯರ ಈ ಅರ್ಜಿಯನ್ನು ಶೀಘ್ರವೇ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕೆಂದು ಮುಸ್ಲಿಂ ವಿದ್ಯಾರ್ಥಿನಿಯರ ಗುಂಪು ಮನವಿ ಸಲ್ಲಿಸಿದ್ದು ಇದನ್ನು ಸುಪ್ರೀಂ ಕೋರ್ಟ್ ಪರಿಗಣಿಸುವುದಾಗಿ ಸೂಚಿಸಿದೆ. ಸರ್ಕಾರಿ ಕಾಲೇಜುಗಳಲ್ಲಿ ಪಿಯು ಪರೀಕ್ಷೆ ಬರೆಯುವಾಗ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಮೂವರು ನ್ಯಾಯಮೂರ್ತಿಗಳ ಪೀಠ ರಚನೆ ಮಾಡುವುದಾಗಿ ಸುಪ್ರೀಂ ಕೋರ್ಟ್ ಶುಕ್ರವಾರ ತಿಳಿಸಿದೆ.

ಹೋಳಿ ರಜಾದಿನಗಳು ಕಳೆದ ನಂತರ, ಈ ಪ್ರಕರಣವನ್ನು ವಿಚಾರಣೆಗೆ ನಿಗದಿ ಮಾಡುವ ಕುರಿತಾಗಿ ಈ ಮೊದಲು ನ್ಯಾಯಮೂರ್ತಿಗಳಾದ ಪಿಎಸ್ ನರಸಿಂಹ ಮತ್ತು ಜೆಪಿ ಪರ್ಡಿವಾಲಾ ಅವರನ್ನು ಒಳಗೊಂಡ ನ್ಯಾಯಪೀಠ ತೀರ್ಮಾನ ಕೈಗೊಂಡಿತ್ತು. ಪದವಿಪೂರ್ವ ಪರೀಕ್ಷೆಗಳು ಮುಂದಿನ ವಾರದಲ್ಲಿ ಶುರುವಾಗಲಿದ್ದು ಈ ಸಂದರ್ಭದಲ್ಲಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಲು ಕರ್ನಾಟಕ ಸರ್ಕಾರಕ್ಕೆ ( Karnataka Hijab Ban Case in Supreme Court)ಆದೇಶ ನೀಡಬೇಕೆಂದು ಮನವಿ ಸಲ್ಲಿಸಿರುವ ಅರ್ಜಿಯನ್ನು ತುರ್ತು ವಿಚಾರಣೆಗೆ ಒಳಪಡಿಸಲು ಮಾಡಿದ್ದ ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ ಎಂದು ತಿಳಿದು ಬಂದಿದೆ.

ಪಿಯು ಪರೀಕ್ಷೆಗಳು (Puc Exams) ಸರ್ಕಾರಿ ಶಾಲೆಗಳಲ್ಲಿ ನಡೆಯುತ್ತಿದ್ದು, ಇಲ್ಲಿ ಹಿಜಾಬ್ ಅಥವಾ ಶಿರವಸ್ತ್ರ ಧರಿಸಲು ಅವಕಾಶ ಕಲ್ಪಿಸಿಲ್ಲ. ಹೀಗಾಗಿ, ಮುಸ್ಲಿಂ ಹೆಣ್ಣುಮಕ್ಕಳು ಮತ್ತೊಂದು ಶೈಕ್ಷಣಿಕ ವರ್ಷವನ್ನು ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಅವರ ಅರ್ಜಿಯನ್ನು ತುರ್ತಾಗಿ ವಿಚಾರಣೆ ಮಾಡಬೇಕು ಎಂದು ಮಹಿಳಾ ವಕೀಲರೊಬ್ಬರು ಮನವಿ ಸಲ್ಲಿಸಿದ್ದು ಈ ಕುರಿತ ವಿಚಾರಣೆಗೆ ನ್ಯಾಯಪೀಠ ರಚಿಸುವ ಆಶ್ವಾಸನೆಯನ್ನು ಸಿಜೆಐ ಡಿವೈ ಚಂದ್ರಚೂಡ್ ನೀಡಿದ್ದರು. ಈ ಪ್ರಕರಣವನ್ನು ರಜೆ ಆರಂಭವಾಗುವ ಹಿಂದಿನ ದಿನ ನಿಗದಿಪಡಿಸಲಾಗಿದೆ ಎಂದು ಪೀಠ ತಿಳಿಸಿದೆ. ಮುಖ್ಯ ನ್ಯಾಯಮೂರ್ತಿ, ಪೀಠ ಸ್ಥಾಪನೆ ಮಾಡುವುದಾಗಿ ಹೇಳಿದ್ದು, ಆದರೆ ದಿನಾಂಕ ಇನ್ನೂ ಕೂಡ ನಿಗದಿಪಡಿಸಿಲ್ಲ ಎನ್ನಲಾಗಿದೆ.

Leave A Reply

Your email address will not be published.