ಮಂಗಳೂರು : ಚೂರಿಯಿಂದ ಇರಿದು ಯುವಕನ ಕೊಲೆ ಯತ್ನ,ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

ullala: ಮಂಗಳೂರು : ಯುವಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಉಳ್ಳಾಲ(ullala) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾ.3 ರ ತಡರಾತ್ರಿ ನಡೆದಿದೆ.

 

ಉಳ್ಳಾಲ ಕೋಟೆಪುರ ನಿವಾಸಿ ಸದಕತ್ತುಲ್ಲಾ (34) ಕೊಲೆಯತ್ನಕ್ಕೆ ಒಳಗಾದವರು. ಗಾಯಾಳುವನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಛಬ್ಬಿ ಅಲಿಯಾಸ್ ಕಬೀರ್ ಮತ್ತು ರಾಝಿಕ್ ಎಂಬವರು ಇನ್ನಿಬ್ಬರನ್ನು ಸೇರಿಸಿಕೊಂಡು ಕೃತ್ಯ ಎಸಗಿರುವುದಾಗಿ ತಿಳಿದು ಬಂದಿದೆ. ಇಬ್ಬರಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

ಸದಕತ್ತುಲ್ಲಾ ಮನೆಯಲ್ಲಿದ್ದ ಸಂದರ್ಭ ಎದುರುಗಡೆ ಕರೆಸಿ ಚೂರಿಯಿಂದ ಹೊಟ್ಟೆ ಭಾಗಕ್ಕೆ ಇರಿಯಲಾಗಿದೆ. ತಕ್ಷಣ ಮನೆಮಂದಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಫಿಶ್ ಆಯಿಲ್ ಮಿಲ್ ಮಾಲೀಕರಿಂದ ಬೆದರಿಸಿ ಹಣ ಪಡೆದಿರುವ ವಿಚಾರದಲ್ಲಿ ಇಬ್ಬರ ನಡುವೆ ವೈಷಮ್ಯವಿತ್ತು. ಕೆಲ ತಿಂಗಳುಗಳ ಹಿಂದೆ ಇದೇ ವಿಚಾರಕ್ಕೆ ಸಂಬಂಧಿಸಿ ಆರೋಪಿಗಳ ಪೈಕಿ ಓರ್ವನಿಗೆ ಸದಕತ್ತುಲ್ಲಾ ತಂಡ ಹಲ್ಲೆ ನಡೆಸಿತ್ತು.

ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದಕ್ಕೆ ಪ್ರತೀಕಾರವಾಗಿ ದಾಳಿ ನಡೆದಿರುವ ಸಾಧ್ಯತೆ ಇದೆ ಎನ್ನಲಾಗಿದೆ.

Leave A Reply

Your email address will not be published.