PUC ವಿದ್ಯಾರ್ಥಿಗಳೇ ಗಮನಿಸಿ, ಪ್ರಶ್ನೆ ಪತ್ರಿಕೆ ಮಾದರಿ ಬದಲಾವಣೆ!
2nd PUC Exam 2023 :2023 ಮಾರ್ಚ್ 9ರಿಂದ -ಮಾರ್ಚ್ 29 ವರೆಗೆ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ(2nd PUC Exam 2023)ಗಳು ನಡೆಯಲಿದ್ದು , ಈ ಹಿನ್ನೆಲೆಯಲ್ಲಿ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯ ನೀರ್ಣಯ ಮಂಡಳಿ, ಈಗಾಗಲೇ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಅಂತಿಮ ಪ್ರವೇಶ ಪತ್ರಗಳನ್ನು ವಿತರಿಸಿದೆ.
ಆದರೆ ಮುಖ್ಯವಾದ ಮಾಹಿತಿಯೆಂದರೆ PUC ವಿದ್ಯಾರ್ಥಿಗಳು ಪರೀಕ್ಷೆಗೆ ಸಿದ್ಧರಾಗಲು ಅನುಕೂಲವಾಗಲೆಂಬ ಉದ್ದೇಶದಿಂದ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾದರಿ ಪ್ರಶ್ನೆಪತ್ರಿಕೆ ಸಿದ್ಧಪಡಿಸಿದ್ದು, ಅನುತ್ತೀರ್ಣರಾಗುವ ವಿದ್ಯಾರ್ಥಿಗಳು ಸುಲಭವಾಗಿ ಉತ್ತೀರ್ಣರಾಗುವಂತೆ ಮಾಡುವ ಉದ್ದೇಶದಿಂದ ಪ್ರಶ್ನೆಪತ್ರಿಕೆ ಮಾದರಿಯನ್ನು ಬದಲಾಯಿಸಲಾಗಿದೆ ಎಂದು ಮಾಹಿತಿ (information )ನೀಡಲಾಗಿದೆ. ಇಷ್ಟು ವರ್ಷ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಿದ್ದ ಪ್ರಶ್ನೆ ಪತ್ರಿಕೆಗೂ ಈ ಬಾರಿ ಪ್ರಶ್ನೆ ಪತ್ರಿಕೆಗೂ ಇರುವ ಮಾದರಿ ಬದಲಾಗಿದೆ ಎಂಬ ಸ್ಪಷ್ಟ ಮಾಹಿತಿ ಮಂಡಳಿಯಿಂದ ಪ್ರಕಟಿಸಲಾಗಿದೆ.
ಮಾರ್ಚ್ 9 ರಿಂದ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಯಲ್ಲಾಗಿರುವ ಬದಲಾವಣೆ ವಿಧಾನ ಇಲ್ಲಿದೆ :
2023ರ ಮಾರ್ಚ್‌ನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯ ಮಾದರಿ ಪ್ರಶ್ನೆಪತ್ರಿಕೆಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದ್ದು, 10 ಅಂಕಗಳಿಗೆ ಬಹು ಆಯ್ಕೆ ಮಾದರಿ (MCQ) ಪ್ರಶ್ನೆಪತ್ರಿಕೆ ನೀಡಿದೆ. ಮಾರ್ಚ್‌ನಲ್ಲಿ ನಡೆಯಲಿರುವ ಪರೀಕ್ಷೆಗೆ ಇದು ತುಂಬಾ ಸಹಾಯವಾಗಲಿದ್ದು ಈ ಬಾರಿ ಬಹು ಆಯ್ಕೆಯ ಪ್ರಶ್ನೆಗಳೂ ಸಹ ಪ್ರಶ್ನೆ ಪತ್ರಿಕೆಯಲ್ಲಿ ಇರಲಿವೆ. ಯಾವ ಮಾದರಿಯಲ್ಲಿ ಎಷ್ಟು ಅಂಕಗಳಲ್ಲಿ ಪ್ರಶ್ನೆ ಬರುತ್ತದೆ ಎನ್ನುವ ಕುರಿತು ಇಲ್ಲಿ ಸರಿಯಾದ ರೀತಿಯ ಮಾದರಿಯನ್ನು ನೀಡಲಾಗಿದೆ.
ವಿವಿಧ ವಿಭಾಗದಲ್ಲಿ ಕ್ರಮವಾಗಿ 2 ಅಂಕದ 11 ಪ್ರಶ್ನೆಗಳನ್ನು ನೀಡಿದೆ. 3 ಅಂಕದ 4 ಪ್ರಶ್ನೆಗಳು, 4 ಅಂಕದ 6 ಪ್ರಶ್ನೆಗಳು, 5 ಮತ್ತು 6 ಅಂಕದ 2 ಪ್ರಶ್ನೆಗಳನ್ನು ನೀಡಲಾಗಿದೆ. ಒಟ್ಟಾರೆ 80 ಅಂಕಗಳಿಗೆ ವಿಸ್ತ್ರತವಾಗಿ ವಾಕ್ಯ ರೂಪದಲ್ಲಿ ಉತ್ತರಿಸುವ ಪ್ರಶ್ನೆಗಳಿವೆ. ಇದರಲ್ಲಿ ಸಂದಂರ್ಭ ಸೂಚಿಸಿ ಬರೆಯುವುದು, ಸ್ವಾರಸ್ಯ ರೂಪದಲ್ಲಿ ಉತ್ತರ, ಪದ್ಯದ ಭಾವಾರ್ಥ, ಭಾಷಾಭ್ಯಾಸ, ಪ್ರಬಂಧ, ಪತ್ರಲೇಖನ ಮತ್ತು ಗಾದೆ ಮಾತು ವಿಸ್ತರಿಸಿ ಬರೆಯುವ ಪ್ರಶ್ನೆಗಳನ್ನು ನೀಡಲಾಗಿದೆ.
ಅದಲ್ಲದೆ ಅಧಿಕೃತ ಜಾಲತಾಣದಿಂದ ನೀವು ಪ್ರಶ್ನೆ ಪತ್ರಿಕೆಯನ್ನೂ ಸಹ ಡೌನ್ಲೋಡ್ (download) ಮಾಡಿಕೊಳ್ಳಬಹುದು. ಅಲ್ಲಿ ಈ ಬಾರಿಯ ಹೊಸ ಮಾದರಿ ಪ್ರಶ್ನೆ ಪತ್ರಿಕೆಯನ್ನು ಬಿಡುಗಡೆ ಮಾಡಲಾಗಿದೆ. ಆ ಕಾರಣದಿಂದ ವಿದ್ಯಾರ್ಥಿಗಳು (student ) ಹೆಚ್ಚಿನ ಅಭ್ಯಾಸವನ್ನು ಮಾಡುವುದಕ್ಕೆ ಇದು ಸಹಾಯವಾಗಲಿದೆ.
ಈ ಬಾರಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯ ನೀರ್ಣಯ ಮಂಡಳಿಯು ಹಲವಾರು ಪ್ರಯತ್ನಗಳು ನಡೆಸುತ್ತಿದ್ದು, ಇದರಿಂದ ಅನುತ್ತೀರ್ಣರಾಗುವ ವಿದ್ಯಾರ್ಥಿಗಳು ಸುಲಭವಾಗಿ ಉತ್ತೀರ್ಣರಾಗುವಂತೆ ಮಾಡುವ ಉದ್ದೇಶದಿಂದ ಪ್ರಶ್ನೆಪತ್ರಿಕೆ ಮಾದರಿಯ ಹೊಸ ಪ್ರಯತ್ನ ಕೈಗೊಳ್ಳಲಾಗಿದೆ.