Praveen Nettaru : ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ : ಮತ್ತೋರ್ವ ಆರೋಪಿಯ ಬಂಧನ

Praveen Nettaru Murder Case : ಕರಾವಳಿಯ ಜನತೆಯ ನಿದ್ದೆಗೆಡಿಸಿದ್ದ ಬಿಜೆಪಿ ಯುವ ಕಾರ್ಯಕರ್ತ (BJP Youth Activist)ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ (Parveen Nettaru Murder Case) ದ ಕುರಿತಂತೆ ಸ್ಫೋಟಕ ಮಾಹಿತಿ ಲಭ್ಯವಾಗಿದೆ. ಎನ್‌ಐಎ ಅಧಿಕಾರಿಗಳು ಬೆಂಗಳೂರಿನಲ್ಲಿ ತೌಫೀಲ್‌ ಎಂಬಾತನನ್ನು ಬಂಧಿಸಿದ್ದಾರೆ. ಈತನ ಮೇಲೆ ಐದು ಲಕ್ಷ ಬಹುಮಾನ ಘೋಷಣೆ ಮಾಡಲಾಗಿತ್ತು.

ಜುಲೈ 26 ರಂದು ಪ್ರವೀಣ್ ಅವರ ಕೋಳಿ ಅಂಗಡಿಗೆ ನುಗ್ಗಿ ಹಂತಕರು ಭೀಕರವಾಗಿ ಕೊಲೆ ಮಾಡಿದ್ದು, ಈ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಿಸಿದರೂ ಕೂಡ ಚಿಕಿತ್ಸೆ ಫಲಿಸದೇ ಪ್ರವೀಣ್ ನೆಟ್ಟಾರು ಅಸುನೀಗಿದ್ದು ಗೊತ್ತಿರುವ ಸಂಗತಿ. ಈ ನಡುವೆ ಪ್ರವೀಣ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದರು. ಹೀಗಾಗಿ, ಪ್ರವೀಣ್ ಅವರ ಹತ್ಯೆಗೆ ಕಾರಣರಾದ ಆರೋಪಿಗಳ ಜಾಡು ಅರಸುತ್ತಾ ಖಾಕಿ ಪಡೆಗೆ ಅನೇಕ ಮಾಹಿತಿ ಸಿಕ್ಕಿದೆ. ಇದಲ್ಲದೆ, ಎನ್ಐಎ ಅಧಿಕಾರಿಗಳು ಆರೋಪಿ ಪತ್ತೆಗೆ 5 ಲಕ್ಷ ಹಣ ಬಹುಮಾನ ಘೋಷಣೆ ಮಾಡಿದ್ದರು . ಸದ್ಯ , ಎನ್ಐಎ ಅಧಿಕಾರಿಗಳು ಆರೋಪಿಯೊಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ( ಕೊಲೆ ಪ್ರಕರಣದ ಮತ್ತೊಬ್ಬ ಆರೋಪಿಯನ್ನು ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ಬಂಧಿಸಿದ್ದು, ತೌಫೀಲ್​ ಬಂಧಿತ ಆರೋಪಿ. ಎನ್ಐಎ ಅಧಿಕಾರಿಗಳು ನಿನ್ನೆ (ಮಾ.4) ರಂದು ರಾತ್ರಿ 9.30 ಕ್ಕೆ ಅಮೃತಹಳ್ಳಿ ಠಾಣೆ ವ್ಯಾಪ್ತಿಯ ದಾಸರಹಳ್ಳಿಯಲ್ಲಿ ಬಂಧಿಸಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆಗೆ ಜುಲೈ 23 ಮತ್ತು ಜುಲೈ 24 ರಂದೇ ಹತ್ಯೆಗೆ ಸಂಚು ರೂಪಿಸಿದ್ದ ಆರೋಪಿಗಳು ಯೋಜನೆ ಹಾಕಿಕೊಂಡಿದ್ದರು ಎನ್ನಲಾಗಿದೆ. ಆದರೆ, ಜುಲೈ 23 ರಂದು ಅದೇ ಬೈಕ್​ನಲ್ಲಿ ಕೊಲ್ಲಲು ತಂಡ ಬಂದರು ಕೂಡ ಅಂಗಡಿ ಬಳಿ ಜನರಿದ್ದ ಕಾರಣ ಬಂದ ದಾರಿಗೆ ಸುಂಕವಿಲ್ಲ ಎಂದು ವಾಪಾಸ್ ಆಗಿದ್ದಾರೆ. ಈ ಬಳಿಕ, ಜುಲೈ 24 ರಂದು ಸಂಜೆ 4.30 ಕ್ಕೆ ಕೊಲ್ಲಲು ಪ್ಲಾನ್ ಮಾಡಲಾಗಿತ್ತು. ಹೀಗೆ, ಪ್ರವೀಣ್ ಹತ್ಯೆಗೆ ಆರೋಪಿಗಳು ಮೊದಲು ಎರಡು ಬಾರಿ ಯತ್ನಿಸಿ ವಿಫಲರಾಗಿದ್ದು, ಮೂರನೇ ಯತ್ನದಲ್ಲಿ ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ.

ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಒಟ್ಟು 20 ಆರೋಪಿಗಳ ವಿರುದ್ಧ ಬೆಂಗಳೂರಿನ ಎನ್​ಐಎ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಿದ್ದಾರೆ ಎನ್ನಲಾಗಿದೆ.ಇದರ ಜೊತೆಗೆ NIA ಅಧಿಕಾರಿಗಳು 240 ಸಾಕ್ಷಿಗಳ ಹೇಳಿಕೆಗಳು ಒಳಗೊಂಡ ಒಟ್ಟು 1,500 ಪುಟಗಳ ಚಾರ್ಜ್​ಶೀಟ್ ಅನ್ನು ಕೋರ್ಟ್​ಗೆ ನೀಡಿದ್ದಾರೆ ಎನ್ನಲಾಗಿದೆ. ಕೊಲೆ ಪ್ರಕರಣದ ಅಡಿಯಲ್ಲಿ ಈಗಾಗಲೇ 14 ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಇನ್ನೂ 6 ಆರೋಪಿಗಳ ಪತ್ತೆಗಾಗಿ ತೀವ್ರ ಶೋಧ ಶೋಧ ಕಾರ್ಯ ನಡೆಯುತ್ತಿದೆ ಎನ್ನಲಾಗಿದ್ದು, ಈ ಬಗ್ಗೆ ಮಾಧ್ಯಮವೊಂದು ವರದಿ ಮಾಡಿ ಮಾಹಿತಿ ನೀಡಿದೆ.

Leave A Reply

Your email address will not be published.