H3N2 Virus : ರಾಜ್ಯಕ್ಕೆ ಕಾಲಿಟ್ಟಿದೆ ಮಹಾಮಾರಿ ‘H3N2’ ವೈರಸ್‌, ಇಂದು ಮಹತ್ವದ ಸಭೆ, ಮಾರ್ಗಸೂಚಿ ಬಿಡುಗಡೆ

H3N2 virus :ಇತ್ತೀಚೆಗೆ ಬೆಳಿಗ್ಗೆ ಎದ್ದಾಗ ಚುಮು ಚುಮು ಚಳಿಯಾದರೆ ಮಧ್ಯಾಹ್ನ ರಣ ಬಿಸಿಲು ಹವಾಮಾನದಲ್ಲಿ ಬದಲಾವಣೆ ಉಂಟಾಗುತ್ತಿರುವ ಹಿನ್ನೆಲೆ ಜ್ವರ (Fever) ಶೀತ (cold) ,ಕೆಮ್ಮಿನ ಸಮಸ್ಯೆ ವ್ಯಾಪಕವಾಗಿ ಕಂಡುಬರುತ್ತಿದೆ. ಇದರಿಂದಾಗಿ ಹೊಸ ಸಮಸ್ಯೆ ಎದುರಾಗುವ ಲಕ್ಷಣಗಳು ಗೋಚರಿಸುತ್ತಿವೆ. ಹೀಗಾಗಿ, ಬೆಂಗಳೂರು ಸೇರಿದಂತೆ ಹಲವೆಡೆ ನಿರಂತರ ಕೆಮ್ಮು, ಉಸಿರಾಟದ ತೊಂದರೆ ಮತ್ತು ಜ್ವರದಿಂದ ಬಳಲುತ್ತಿರುವ ರೋಗಿಗಳು ಆಸ್ಪತ್ರೆಗೆ ದಾಖಲಾಗುವ ಸಂಖ್ಯೆ ಏರಿಕೆ ಕಾಣುತ್ತಿದೆ.ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್‌)ಯ ತಜ್ಞರು ಎಚ್‌3ಎನ್‌2 ವೈರಸ್‌ನ ಉಪತಳಿ ಮುಖ್ಯ ಕಾರಣವೆಂದು ತಿಳಿಸಿದ್ದಾರೆ.

ಇತ್ತೀಚೆಗೆ ಎಲ್ಲೆಡೆ ದೀರ್ಘಕಾಲಿಕ ಕೆಮ್ಮು ಮತ್ತು ಜ್ವರದ(Health Problems) ಲಕ್ಷಣಗಳು ಗೋಚರಿಸುತ್ತಿವೆ. ಹೀಗಾಗಿ, ಈ ಲಕ್ಷಣಗಳು H3N2 ಸೋಂಕಿನಿಂದ (H3N2 virus) ಉಂಟಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಡಾ. ಸುಧಾಕರ್ ರವರು ಇಂದು ತಜ್ಞರ ಜೊತೆಗೆ ಈ ಬಗ್ಗೆ ಮಹತ್ವದ ಸಭೆ ನಡೆಸಲಿದ್ದು, H3N2ಇನ್ ಪ್ಲುಯಂಜಾ ಕುರಿತಂತೆ ಹೊಸ ಆರೋಗ್ಯ ಸಂಬಂಧಿ ಮಾರ್ಗಸೂಚಿ ಬಿಡುಗಡೆ ಮಾಡುವ ಲಕ್ಷಣಗಳಿವೆ ಎನ್ನಲಾಗುತ್ತಿದೆ.

ಹವಾಮಾನ ಬದಲಾವಣೆ (Weather change), ವಾಯುಮಾಲಿನ್ಯಗಳಿಂದ ಶೀತಜ್ವರ ಸಾಮಾನ್ಯವಾಗಿ ಬಿಟ್ಟಿದ್ದು, ಈ ಶೀತ ಜ್ವರ (Health Problems)ಒಂದು ವಾರದ ಒಳಗೆ ಕಡಿಮೆಯಾಗುತ್ತದೆ. ಆದರೆ ಕೆಮ್ಮು 2-3 ವಾರಗಳ ಕಾಲ ಮುಂದುವರೆಯುತ್ತಿದೆ. ಹೀಗಾಗಿ, ದೀರ್ಘ ಕಾಲದ ಕೆಮ್ಮು, ಜ್ವರದ ಬಗ್ಗೆ ನಿರ್ಲಕ್ಷ್ಯ ಧೋರಣೆ ತೋರದೆ ಎಚ್ಚರಿಕೆ ವಹಿಸುವಂತೆ ಎಚ್ಚರಿಕೆ ನೀಡಲಾಗಿದೆ. H3N2 ಬಗ್ಗೆ ಇಂಡಿಯನ್ ಮೆಡಿಕಲ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಆತಂಕ ವ್ಯಕ್ತಪಡಿಸಿದೆ. ಸಿಕ್ಕಿದ ಎಲ್ಲ ಆಂಟಿಬಯೋಟಿಕ್ ಮಾತ್ರೆಗಳನ್ನು ಬಳಸದಂತೆ ಎಚ್ಚರಿಕೆ ನೀಡಿದೆ. ಆರೋಗ್ಯ ಸಚಿವರಾದ ಸುಧಾಕರ್ ರವರು ಈ ಬಗ್ಗೆ ಮಾಹಿತಿ ನೀಡಿದ್ದು, H3N2 ಬಗ್ಗೆ ಈಗಾಗಲೇ ಆರೋಗ್ಯ ಇಲಾಖೆ ಆಯುಕ್ತರು ಹಾಗೂ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ತಜ್ಞರು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆಗೆ ಇಂದು ಚರ್ಚೆ ನಡೆಸಿದ ನಂತರ ಕಾಯಿಲೆಯ ಸ್ಥಿತಿಗತಿ ಕುರಿತು ಮಾಹಿತಿ ಪಡೆದ ಬಳಿಕ ರಾಜ್ಯದಲ್ಲಿ ಈ ಬಗ್ಗೆ ಕೈಗೊಳ್ಳುವ ಕ್ರಮಗಳ ಕುರಿತು ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

Leave A Reply

Your email address will not be published.