KPSC:ವಿವಿಧ ಗ್ರೂಪ್ ಸಿ ಹುದ್ದೆಗಳಿಗೆ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ!

KPSC Group C ExamDates : ಕರ್ನಾಟಕ ಲೋಕಸೇವಾ ಆಯೋಗವು (KPSC)ವಿವಿಧ ಗ್ರೂಪ್‌ ಸಿ ಪೋಸ್ಟ್‌ಗಳ ನೇಮಕಾತಿ ಪ್ರಕ್ರಿಯೆಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಈ ಹಿಂದೆಯೇ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಇದೀಗ, ಕರ್ನಾಟಕ ಪಬ್ಲಿಕ್ ಸರ್ವೀಸ್ ಕಮಿಷನ್ ವಿವಿಧ ಗ್ರೂಪ್‌ ಸಿ ಹುದ್ದೆಗಳಿಗೆ, ಇದೀಗ ಕಾರಣಾಂತರಗಳಿಂದ ಪರಿಷ್ಕೃತ ವೇಳಾಪಟ್ಟಿಯನ್ನು(KPSC Group C ExamDates) ಬಿಡುಗಡೆ ಮಾಡಿ ಪ್ರಕಟಣೆ ಹೊರಡಿಸಲಾಗಿದೆ.

2022 ನೇ ಸಾಲಿನಲ್ಲಿ ಅಧಿಸೂಚನೆ ಹೊರಡಿಸಿದ್ದ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಸಾಂಖ್ಯಿಕ ನಿರೀಕ್ಷಕರು, ಸಹಾಯಕ ಸಾಂಖ್ಯಿಕ ಅಧಿಕಾರಿ ಮತ್ತು ಕಾರ್ಮಿಕ ಇಲಾಖೆಯಲ್ಲಿನ ಕಾರ್ಮಿಕ ನಿರೀಕ್ಷಕರು ಹುದ್ದೆಗಳಿಗೆ ಇದೀಗ ಪರಿಷ್ಕೃತ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳು ಈ ಹಿಂದಿನ ವೇಳಾಪಟ್ಟಿಯ ಬದಲಿಗೆ ಈಗ ತಿಳಿಸಿದ ದಿನಾಂಕಗಳಂದು ಪರೀಕ್ಷೆಗೆ ಹಾಜರಾಗಬೇಕಾಗುತ್ತದೆ.

ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿನ ಸಾಂಖ್ಯಿಕ ನಿರೀಕ್ಷಕರು, ಸಹಾಯಕ ಸಾಂಖ್ಯಿಕ ಅಧಿಕಾರಿ ಮತ್ತು ಕಾರ್ಮಿಕ ಇಲಾಖೆಯಲ್ಲಿನ ಕಾರ್ಮಿಕ ನಿರೀಕ್ಷಕರು ಹುದ್ದೆಗಳಿಗೆ(kpsc group c exam revised dates) ಸಂಬಂಧಿಸಿದ ಕನ್ನಡ ಭಾಷಾ ಪರೀಕ್ಷೆಯನ್ನು ದಿನಾಂಕ 18-03-2023 ರಂದು ಮಧ್ಯಾಹ್ನ 03-05 ಗಂಟೆವರೆಗೆ ನಡೆಸಲು ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ.

ಮೇಲೆ ತಿಳಿಸಿದ ಸದರಿ ಹುದ್ದೆಗಳಿಗೆ( KPSC Group C Exam Dates)
ಪತ್ರಿಕೆ-1 (ಸಾಮಾನ್ಯ ಜ್ಞಾನ)- 19-03-2023 (ಬೆಳಿಗ್ಗೆ 10 ರಿಂದ 11-30 ಗಂಟೆವರೆಗೆ ) ಪರೀಕ್ಷೆ ನಡೆಯಲಿದೆ.
ಪತ್ರಿಕೆ-2 (ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲಿಷ್, ಕಂಪ್ಯೂಟರ್ ಜ್ಞಾನ) – 19-03-2023 (ಮಧ್ಯಾಹ್ನ 02-04 ಗಂಟೆವರೆಗೆ) ಪರೀಕ್ಷೆಗಳು ನಡೆಯಲಿವೆ.

ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು.KPSC Various Group C Revised Time Table ಈ ಲಿಂಕ್ ಮೂಲಕ ಕೂಡ ಪರಿಷ್ಕೃತ ವೇಳಾಪಟ್ಟಿಯನ್ನು ಗಮನಿಸಬಹುದು.

Leave A Reply

Your email address will not be published.