Health Department : ಸಿಎಂ ನೀಡಿದ್ರು ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಭರ್ಜರಿ ಗುಡ್‌ನ್ಯೂಸ್!
Health Department: ಆರೋಗ್ಯ ಇಲಾಖೆಯ (Health Department) ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ(workers) ಭರ್ಜರಿ ಗುಡ್‌ನ್ಯೂಸ್ ಇಲ್ಲಿದೆ. ಹೌದು, ವೇತನ ಹೆಚ್ಚಳ, ಸೇವಾ ಭದ್ರತೆ ಕಡತ ಮಂಡಿಸಿ ಸಿಎಂ ಆದೇಶ ಹೊರಡಿಸಿದ್ದಾರೆ.
ಈ ಹಿಂದೆ ರಾಜ್ಯದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಗುತ್ತಿಗೆ ಮತ್ತು ಹೊರಗುತ್ತಿಗೆ ಆಧಾರದ ನೌಕರರು ತಮ್ಮ ಹಲವು ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿದ್ದರು. ಈ ಬಗ್ಗೆ ಮುಷ್ಕರ ನಡೆಸಿ ಒತ್ತಾಯಿಸಿದ್ದರು ಕೂಡ. ಇದೀಗ ಇವರಿಗೆ ಸಿಎಂ(CM) ಸಿಹಿಸುದ್ದಿ ನೀಡಿದ್ದಾರೆ.
ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ವೇತನ ಹೆಚ್ಚಳ (Salary Hike), ಸೇವಾ ಭದ್ರತೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಕಡತವನ್ನು ಮಂಡಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai ) ಆದೇಶ ಮಾಡಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್ ಮಂಜುನಾಥ್ ಪ್ರಸಾದ್ ಅವರು, ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದಿಂದ ಮುಖ್ಯಮಂತ್ರಿಯವರಿಗೆ ಸಲ್ಲಿಸಿರುವ ಮನವಿ ಪತ್ರವನ್ನು ಲಗತ್ತಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಟಿಪ್ಪಣಿ ಹೊರಡಿಸಿದ್ದಾರೆ.
ಆರೋಗ್ಯ ಇಲಾಖೆ ಮತ್ತು ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಕೆಲಸ ಮಾಡುತ್ತಿರುವ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ವೇತನ ಹೆಚ್ಚಳ ಹಾಗೂ ಸೇವಾ ಭದ್ರತೆಗೆ ಬಗೆಗಿನ ವಿವಿಧ ಬೇಡಿಕೆಗಳನ್ನೊಳಗೊಂಡ ಪತ್ರವನ್ನು ನೀಡಿ, ಬೇಡಿಕೆ ಈಡೇರಿಸುವಂತೆ ಕೋರಿದ್ದಾರೆ. ಈ ಬಗ್ಗೆ ಕಡತವನ್ನು ಮುಖ್ಯಮಂತ್ರಿಯವರ ಅವಗಾಹನೆಗೆ ಮಂಡಿಸುವಂತೆ ಆದೇಶಿಸಿದ್ದಾರೆ ಎನ್ನಲಾಗಿದೆ.
ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಕಾಂತಾರ-2 ಡಾ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುತೂಹಲ ಮೂಡಿಸಿದೆ ಈ ಭೇಟಿ !