Karnataka 2nd PUC Exam: ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ! ಈ ಷರತ್ತುಗಳ ಬಗ್ಗೆ ತಿಳಿದುಕೊಳ್ಳಿ!

Karnataka 2nd PUC Exam :ನಾಳೆಯಿಂದ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗೆ (Karnataka 2nd PUC Exam) ಈಗಾಗಲೇ ಕ್ಷಣ ಗಣನೆ ಆರಂಭವಾಗಿದೆ. ಸದ್ಯ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮಂಡಳಿ ಸಿದ್ಧತೆ ಕೈಗೊಂಡಿದ್ದು, ಸದ್ಯ 1,109 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 7,26,213 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ ಹೊಸದಾಗಿ 6.29 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 25,847 ಖಾಸಗಿ (private ) ವಿದ್ಯಾರ್ಥಿಗಳು , 70,586 ಪುನರಾವರ್ತಿತ ವಿದ್ಯಾರ್ಥಿಗಳಾಗಿದ್ದಾರೆ. ಅದಲ್ಲದೆ 3,62,509 ಬಾಲಕಿಯರು, ಮತ್ತು 3,63,704 ಬಾಲಕರು ಸೇರಿದ್ದಾರೆ. ಕಲಾ ವಿಭಾಗದಿಂದ 2,34,815, ವಾಣಿಜ್ಯದಲ್ಲಿ 2,47,269 ಮತ್ತು ವಿಜ್ಞಾನ ವಿಭಾಗದಿಂದ 2,44,129 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಪ್ರಸ್ತುತ ಮಾರ್ಚ್​ 9- 29 ರವರೆಗೆ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳು ಬಿಎಂಟಿಸಿ ಬಸ್​​ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಲು ಅವಕಾಶ ನೀಡುವುದಿಲ್ಲ ಎಂದು ಕರ್ನಾಟಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 9, 2023 ರಿಂದ ಮಾರ್ಚ್ 29, 2023 ರವರೆಗೆ ನಡೆಯಲಿದ್ದು, ಪದವಿ ಪೂರ್ವ ಶಿಕ್ಷಣ ಇಲಾಖೆಯು ಈಗಾಗಲೇ ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್‌ಗಳನ್ನು ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ತಮ್ಮ ಪರೀಕ್ಷಾ ಕೇಂದ್ರಗಳಿಗೆ ತಮ್ಮ ಹಾಲ್ ಟಿಕೆಟ್‌ಗಳನ್ನು ಕಡ್ಡಾಯವಾಗಿ ಕೊಂಡೊಯ್ಯಬೇಕು ಎಂದು ತಿಳಿಸಲಾಗಿದೆ.

ದ್ವಿತೀಯ ಪಿಯು ಪರೀಕ್ಷೆಗೆ ಕೈಗೊಂಡಿರುವ ಭದ್ರತಾ ಕ್ರಮಗಳು ಇಂತಿವೆ :
ರಾಜ್ಯದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನೀಡಲಾಗುತ್ತದೆ.
ಸಿಸಿ ಕ್ಯಾಮೆರಾ ಕಣ್ಗಾವಲು, ಪರೀಕ್ಷಾ ಕೇಂದ್ರದ ಸುತ್ತಲಿನ ಜೆರಾಕ್ಸ್ ಕೇಂದ್ರಗಳು ಪರೀಕ್ಷೆ ಅವಧಿಯಲ್ಲಿ ಬಂದ್ ಆಗಲಿದೆ.
ಸೈಬರ್ ಸೆಂಟರ್, ಟ್ಯೂಷನ್ ಕೇಂದ್ರಗಳು, ಕಂಪ್ಯೂಟರ್, ಗೇಮ್ಸ್ ಕೇಂದ್ರಗಳ ಮೇಲೆ ವಿಶೇಷ ನಿಗಾ ಇರಿಸಲಾಗುತ್ತದೆ.
ಈ ಹಿಂದೆ ಪರೀಕ್ಷಾ ಅಕ್ರಮಗಳಲ್ಲಿ ತೊಡಗಿಸಿಕೊಂಡಿದ್ದ ವ್ಯಕ್ತಿಗಳು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ತೆಗೆದುಕೊಳ್ಳಲಾಗುವುದು.
ಶಂಕಿತ ವ್ಯಕ್ತಿಗಳ ಮೇಲೆ ವಿಶೇಷ ನಿಗಾ ಇರಿಸಲಾಗುವುದು.
ಹಿಂದಿನ ವರ್ಷಗಳಲ್ಲಿ ಪರೀಕ್ಷಾ ಅಕ್ರಮ ವರದಿಯಾಗಿರುವ ಪರೀಕ್ಷಾ ಕೇಂದ್ರಗಳಲ್ಲಿ ಹೆಚ್ಚಿನ ನಿಗಾ ಇರಿಸಲಾಗುವುದು.
ಮೊಬೈಲ್‌ಫೋನ್ (Mobile phone ), ಸ್ಮಾರ್ಟ್‌ವಾಚ್ (smartwatch ), ಇಯರ್‌ಫೋನ್ ಸೇರಿದಂತೆ ಎಲ್ಲ ರೀತಿಯ ಎಲೆಕ್ಟ್ರಾನಿಕ್ಸ್ (electronic ) ಸಾಧನಗಳ ನಿಷೇಧ ಮಾಡಲಾಗಿದೆ.
ವಿದ್ಯಾರ್ಥಿಗಳು ಸಮಯ ನೋಡಿಕೊಳ್ಳಲು ಗೋಡೆ ಗಡಿಯಾರದ ವ್ಯವಸ್ಥೆ ಮಾಡಲಾಗುತ್ತದೆ.
ವದಂತಿಗಳನ್ನು ಹಬ್ಬಿಸುವ ಕಿಡಿಗೇಡಿಗಳ ಮೇಲೆ ಸೈಬರ್ ಅಧಿಕಾರಿಗಳು, ಸ್ಥಳೀಯ ಪೊಲೀಸರು (police ) ಹಾಗೂ ಇನ್ನಿತರ ತಂಡಗಳು ವಿಶೇಷ ನಿಗಾ ಇರಿಸಲಾಗುವುದು.
ಪ್ರಶ್ನೆ ಮತ್ತು ಉತ್ತರ ಪತ್ರಿಕೆಗಳ (question and answer pepar )ಸಾಗಣೆ, ಸಂಗ್ರಹಣೆ, ಮೌಲ್ಯಮಾಪನ ಕೇಂದ್ರಗಳಲ್ಲಿ 24/7 ಪೊಲೀಸ್ ಭದ್ರತೆ ನೀಡಲಾಗುವುದು.
ಪರೀಕ್ಷಾ ಕೇಂದ್ರಗಳಲ್ಲಿ ಭದ್ರತಾ ಕಾರ್ಯ ಮತ್ತು ಪರೀಕ್ಷಾ ಕರ್ತವ್ಯದಲ್ಲಿ ತೊಡಗಿಸಿಕೊಳ್ಳುವ ಅಧಿಕಾರಿ ಮತ್ತು ಸಿಬ್ಬಂದಿಗೆ ಮೊಬೈಲ್ ಫೋನ್ ಬಳಕೆ ನಿಷೇಧ ಮಾಡಲಾಗಿದೆ.
ಪರೀಕ್ಷಾ ಕೇಂದ್ರದ ಅಧೀಕ್ಷಕರು ಮಾತ್ರ ಕ್ಯಾಮೆರಾ ಸೌಲಭ್ಯ ಇಲ್ಲದ ಬೆಸಿಕ್ ಮೊಬೈಲ್‌ಫೋನ್ ಬಳಕೆಗೆ ಅನುಮತಿ ನೀಡಲಾಗಿದೆ.

ಮುಖ್ಯವಾಗಿ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪರೀಕ್ಷೆಯ ಕುರಿತು ಯಾವುದೇ ಊಹಾಪೋಹ, ವದಂತಿಗಳಿಗೆ ಕಿವಿಗೊಡದಂತೆ ವಿದ್ಯಾರ್ಥಿಗಳಿಗೆ (Students) ಮತ್ತು ಪೋಷಕರಿಗೆ ಮನವಿ ಮಾಡಲಾಗಿದೆ.

Leave A Reply

Your email address will not be published.