H.D.Kumaraswamy : ರೈತರ ಮಕ್ಕಳನ್ನು ಮದುವೆಯಾಗಲು ಬಯಸುವಿರಾ? ನಿಮಗೆ ದೊರಕಲಿದೆ 2 ಲಕ್ಷ! ಕುಮಾರಸ್ವಾಮಿಯಿಂದ ಹೆಣ್ಮಕ್ಕಳಿಗೆ ಭರ್ಜರಿ ಆಫರ್‌!!!

H.D.Kumaraswamy :ಪ್ರಸ್ತುತ ರೈತರ ಕುಟುಂಬದ ಮಕ್ಕಳನ್ನು ಮದುವೆ (marriage ) ಆಗಲು ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ಹೆಣ್ಣುಮಕ್ಕಳಿಗೆ ಭವಿಷ್ಯ ರೂಪಿಸಿಕೊಳ್ಳಲು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ (H.D.Kumaraswamy) ಅವರು ಸಿಹಿ ಸುದ್ದಿ ನೀಡಿದ್ದಾರೆ.

 

ಸದ್ಯ ರೈತರ ಮಕ್ಕಳನ್ನು ಮದುವೆಯಾಗುವ ‘ಹೆಣ್ಣು ಮಕ್ಕಳಿಗೆ 2 ಲಕ್ಷʼ ಪ್ರೋತ್ಸಾಹ ಧನವನ್ನು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದಾರೆ. ಅಂದರೆ ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ 2 ಲಕ್ಷ ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದಾರೆ.

ಒಂದೊಂದು ಊರಲ್ಲಿ 50 ರಿಂದ 100 ಗಂಡು ಮಕ್ಕಳು ಹುಡುಗಿ ಸಿಗದೇ ಕಾಯುತ್ತಿದ್ದಾರೆ. ಹೆಣ್ಣು ಸಿಗಲಿಲ್ಲ ಎಂದು ದುಃಖಿತರಾಗಿದ್ದಾರೆ. ಜೀವನದ ಮುಂದಿನ ಹಂತದ ಬಗ್ಗೆ ಚಿಂತೆ ಮಾಡುತ್ತಿದ್ದಾರೆ. ಈ ಎಲ್ಲಾ ಆಧಾರದ ಮೇರೆಗೆ ಸೂಕ್ತ ತೀರ್ಮಾನ ಕೈಗೊಂಡು ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ಎರಡು ಲಕ್ಷ ರೂಪಾಯಿ ಪ್ರೋತ್ಸಾಹ ಧನ ನೀಡಲಾಗುವುದು ಎಂದು ತಿಳಿಸಿದರು.

ಈಗಾಗಲೇ ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಣುಮಕ್ಕಳಿಗೆ ಪ್ರೋತ್ಸಾಹ ಧನ ನೀಡುವುದರಿಂದ ರಾಜ್ಯದ ಬೊಕ್ಕಸಕ್ಕೆ ಎಷ್ಟು ಹಣ ಖರ್ಚಾಗುತ್ತದೆ ಎಂದು ಲೆಕ್ಕ ಹಾಕಲಾಗಿದೆ.

ಈ ಯೋಜನೆಯನ್ನು ಜಾರಿಗೆಗೊಳಿಸುವುದರಿಂದ ಯಾವುದೇ ಸಮಸ್ಯೆ ಇಲ್ಲ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಈ ಯೋಜನೆ ಜಾರಿ ನಿಶ್ಚಿತ ಎಂದು ಹೆಚ್‌ಡಿಕೆ ಭರವಸೆ ನೀಡಿದರು.

ಈ ಕುರಿತು ಬೇಲೂರಿನಲ್ಲಿ ಪಂಚರತ್ನ ಯಾತ್ರೆಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ ಅವರು, ಹಳ್ಳಿಯಲ್ಲಿ ನೆಲೆಸಿರುವ ರೈತರ ಮಕ್ಕಳಿಗೆ ಯಾರೂ ಹೆಣ್ಣು ಕೊಡುತ್ತಿಲ್ಲ. ಇದೊಂದು ದೊಡ್ಡ ಸಾಮಾಜಿಕ ಸಮಸ್ಯೆಯಾಗಿದೆ. ಈ ಸಮಸ್ಯೆಯನ್ನು ನಿವಾರಿಸುವ ಸಲುವಾಗಿ ಈ ಯೋಜನೆ ಜಾರಿಯ ಅಗತ್ಯವಿದೆ ಎಂದು ಜನರಿಗೆ ಭರವಸೆ ನೀಡಿದ್ದಾರೆ.

Leave A Reply

Your email address will not be published.