Exam Postponed : ಮಾ.13 ರಂದು ನಿಗದಿಯಾಗಿದ್ದ 5 ಮತ್ತು 8 ನೇ ತರಗತಿ ಪರೀಕ್ಷೆ ಮುಂದೂಡಿಕೆ!!!

Exam Postponed: ಹೈಕೋರ್ಟ್ ಏಕಸದಸ್ಯ ಪೀಠ 5 ಮತ್ತು 8 ನೇ (5th And 8th Standard Exam) ತರಗತಿಯ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಿ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಸರ್ಕಾರ (Goverment)ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದೆ. ಈ ಪ್ರಕರಣದ ಕುರಿತಂತೆ ಹೈಕೋರ್ಟ್ ಇಂದು ತುರ್ತು ವಿಚಾರಣೆ ನಡೆಸಿದ್ದು, ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡುವ ಮನವಿಗೆ ಹೈಕೋರ್ಟ್ ತಿರಸ್ಕರಿಸಿದೆ. ಸದ್ಯ, ವಿಚಾರಣೆಯನ್ನು ಮಾ.14 ಕ್ಕೆ ಹೈಕೋರ್ಟ್ ಮುಂದೂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಾ.13 ರಂದು ನಡೆಯಬೇಕಿದ್ದ 5 ಮತ್ತು 8 ನೇ ತರಗತಿಯ ಪಬ್ಲಿಕ್ ಪರೀಕ್ಷೆ (Exams Postponed)ಮುಂದೂಡಲಾಗಿರುವ ಬಗ್ಗೆ ಮಾಹಿತಿ ನೀಡಿದೆ.

 

ರಾಜ್ಯದಲ್ಲಿ ಈ ವರೆಗೆ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ (Students) ಪಾಸ್ ಮಾಡಲಾಗುತ್ತಿದ್ದ ಹಿನ್ನೆಲೆ ಇದರಿಂದ ವಿದ್ಯಾರ್ಥಿಗಳ ಕಲಿಕೆಯ ಮೇಲೆ ಪರಿಣಾಮ ಬೀರುತ್ತದೆ. ಮಕ್ಕಳಿಗೆ ಓದಿನ ಮೇಲಿನ ಅಸಕ್ತಿ ಕಡಿಮೆಯಾಗುವ ಆತಂಕದ ಮೇರೆಗೆ ವಿದ್ಯಾರ್ಥಿಗಳ ಕಲಿಕೆಯ(Education) ಮೇಲಾಗುವ ದುಷ್ಪರಿಣಾಮಗಳನ್ನು ಗಮನದಲ್ಲಿರಿಸಿ, ಇದೆ ಪ್ರವೃತ್ತಿ ಮುಂದುವರೆದರೆ ಎಸ್.ಎಸ್.ಎಲ್. ಸಿ (SSLC) ,ಪಿಯುಸಿ(PUC) ಪರೀಕ್ಷೆ ಸೇರಿದಂತೆ ವಿವಿಧ ಕೋರ್ಸ್ ಗಳ ಪ್ರವೇಶ ಪರೀಕ್ಷೆ ಎದುರಿಸುವುದು ಕಷ್ಟ ಎಂದು ಮನಗಂಡ ಸರ್ಕಾರ 5 ಮತ್ತು 8 ನೇ ತರಗತಿ( 5th And 8th Standard Exam)ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆಗೆ ಶಿಕ್ಷಣ ಇಲಾಖೆ ಮುಂದಾಗಿದ್ದು, ಆದರೆ ಇದಕ್ಕೆ ಪೋಷಕರ ವಿರೋಧ ವ್ಯಕ್ತವಾಗಿತ್ತು. ಇದೀಗ ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್ ಪರೀಕ್ಷೆ ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ 2022-23ನೇ ಸಾಲಿನಿಂದ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ (Public Exams)ನಡೆಸಲು ತೀರ್ಮಾನ ಕೈಗೊಂಡಿದ್ದು, ಈ ಬೆನ್ನಲ್ಲೇ 5 ಮತ್ತು 8 ನೇ ತರಗತಿಯ ಬೋರ್ಡ್ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್(HighCourt) ಏಕಸದಸ್ಯ ಪೀಠ ಆದೇಶ ಹೊರಡಿಸಿದ್ದು, ಈ ನಡುವೆ ಮುಂದಿನ ವರ್ಷದಿಂದ ಆಯಾ ನಿಯಮಗಳಿಗನುಸಾರವಾಗಿ ಪರೀಕ್ಷೆ ನಡೆಸಬಹುದು ಎಂಬ ಅಭಿಪ್ರಾಯವನ್ನ ಹೈಕೋರ್ಟ್ ತಿಳಿಸಿದೆ.

ಇದನ್ನೂ ಓದಿ : KPTCL  ನಿಂದ ಮಹತ್ವದ ಮಾಹಿತಿ ಪ್ರಕಟ!

Leave A Reply

Your email address will not be published.