ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಇನ್ನಿಲ್ಲ

Share the Article

ಬೆಂಗಳೂರು : ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಅವರು ಮೈಸೂರಿನಲ್ಲಿ ಹೃದಯಾಘಾತದಿಂದ ಶನಿವಾರ ನಿಧನರಾದರು.

ಮಾಜಿ ಸಂಸದರೂ ಆಗಿರುವ ಧ್ರುವನಾರಾಯಣ್ ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದರು.ಪ್ರಸ್ತುತ ವಿಧಾನಸಭಾ ಚುನಾವಣೆಯ ಸಿದ್ದತೆಯ ಪ್ರಕ್ರಿಯೆಯಲ್ಲಿ ತೊಡಗಿಕೊಂಡಿದ್ದರು.

1961 ಜುಲೈ 31ರಂದು ಚಾಮರಾಜನಗರ ಜಿಲ್ಲೆಯ ಹೆಗ್ಗವಾಡಿ ಗ್ರಾಮದಲ್ಲಿ ಜನನಿಸಿದ್ದ ಧ್ರುವನಾರಾಯಣ, ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಬಿಎಸ್‌ಸಿ ಕೃಷಿ ಪದವಿ ಪಡೆದುಕೊಂಡಿದ್ದರು. ನಂತರ ಸ್ನಾತಕೋತ್ತರ ಪದವಿ ಪಡೆದು, 1983ರಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದರು.

ಈ ಬಾರಿಯ ಚುನಾವಣೆಯಲ್ಲಿ ನಂಜನಗೂಡು ಕ್ಷೇತ್ರದಿಂದ ಸ್ಪರ್ಧಿಸಲು ತಯಾರಿ ನಡೆಸುತ್ತಿದ್ದರು.

 

Leave A Reply