KPSC : ಎರಡು ಇಲಾಖೆಗಳ ಹುದ್ದೆಗೆ ಪರೀಕ್ಷೆ ; ದಿನಾಂಕ ಜೊತೆಗೆ ಪ್ರವೇಶ ಪತ್ರ ಬಿಡುಗಡೆ
KPSC Recruitment Exam : ಈ ಹಿಂದೆ ಕಾರ್ಮಿಕ ಇಲಾಖೆಯ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿಮಾಡಲು ಅರ್ಜಿ ಆಹ್ವಾನಿಸಲಾಗಿತ್ತು. ಇದೀಗ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶ ಪತ್ರ ಬಿಡುಗಡೆ ಮಾಡಲಾಗಿದೆ. (KPSC Recruitment Exam )
ಕರ್ನಾಟಕ ಲೋಕಸೇವಾ ಆಯೋಗವು (KPSC), ಕಾರ್ಮಿಕ ಇಲಾಖೆಯ ವಿವಿಧ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಹಾಲ್ ಟಿಕೆಟ್ ಬಿಡುಗಡೆ ಮಾಡಿದೆ (KPSC Group C Exam Hall Ticket). ಪರಿಕ್ಷೆಯು 18-03-2023 ರಿಂದ 19-03-2023 ರ ತನಕ ನಡೆಯಲಿದೆ. ಮಾರ್ಚ್ 18, 19, 2023 ರಂದು ಕನ್ನಡ ಭಾಷಾ ಪರೀಕ್ಷೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದ್ದು, ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಹಾಲ್ ಟಿಕೆಟ್ ಪಡೆದುಕೊಳ್ಳಬಹುದಾಗಿದೆ. ಹೇಗೆ? ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.
2 ಇಲಾಖೆಗಳ ಹುದ್ದೆಗೆ ಪರೀಕ್ಷೆ ನಡೆಯಲಿದ್ದು, ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿನ ಸಹಾಯಕ ಸಾಂಖ್ಯಿಕ ಅಧಿಕಾರಿ -05HK ಹುದ್ದೆಗಳು, ಕಾರ್ಮಿಕ ಇಲಾಖೆಯಲ್ಲಿನ ಕಾರ್ಮಿಕ ನಿರೀಕ್ಷಕರು – 06HK ಹುದ್ದೆಗಳು ಹಾಗೂ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿನ ಸಾಂಖ್ಯಿಕ ನಿರೀಕ್ಷಕರು – 17HK ಈ ಹುದ್ದೆಗಳಿಗೆ ಪರೀಕ್ಷೆ ನಡೆಯಲಿದೆ.
ಹಾಲ್ ಟಿಕೆಟ್ ಪಡೆದುಕೊಳ್ಳುವುದು ಹೇಗೆ?
• ಮೊದಲು ಕರ್ನಾಟಕ ಲೋಕಸೇವಾ ಆಯೋಗದ ವೆಬ್‌ಸೈಟ್ https://www.kpsc.kar.nic.in/index.html ಗೆ ಭೇಟಿ ನೀಡಿ. • ಅಲ್ಲಿರುವ ‘Download Hall -Ticket For Examination Scheduled on 18-03-2023, 19-03-2023 ಎಂಬ ಲಿಂಕ್ ಕ್ಲಿಕ್ ಮಾಡಿ. • ನಂತರ ಯೂಸರ್‌ನೇಮ್, ಪಾಸ್‌ವರ್ಡ್ ಹಾಕಿ, ಲಾಗಿನ್ ಆಗಬೇಕು. • ಇಷ್ಟಾದ ಬಳಿಕ ನಿಮಗೆ ಪ್ರವೇಶ ಪತ್ರ ಕಾಣಿಸುತ್ತದೆ ಅದನ್ನು ಡೌನ್‌ಲೋಡ್ ಮಾಡಿ, ಪ್ರಿಂಟ್ ತೆಗೆದುಕೊಳ್ಳಿ.
ಹಾಗೆಯೇ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪ್ರವೇಶ ಪತ್ರದ ಜೊತೆಗೆ ಅಧಿಕೃತ ಯಾವುದಾದರೊಂದು ಗುರುತಿನ ಚೀಟಿಯನ್ನು ತೆಗೆದುಕೊಂಡು ಹಾಜರಾಗಬೇಕು. ಇನ್ನು ಪ್ರವೇಶ ಪತ್ರದ ಇಲ್ಲವಾದರೆ ಅಭ್ಯರ್ಥಿಗಳಿಗೆ ಪರೀಕ್ಷಾ ಕೊಠಡಿಗೆ ಹಾಜರಾಗಲು ಅವಕಾಶವಿರುವುದಿಲ್ಲ.
ಇದನ್ನೂ ಓದಿ : Exam Postponed : ಮಾ.13 ರಂದು ನಿಗದಿಯಾಗಿದ್ದ 5 ಮತ್ತು 8 ನೇ ತರಗತಿ ಪರೀಕ್ಷೆ ಮುಂದೂಡಿಕೆ!!!