ರಾಜ್ಯದಲ್ಲಿ ಬಿಜೆಪಿಗೆ ಮತ್ತೆ ಶಾಕ್ ; ಮೂವರು ಸಚಿವರು,ನಾಲ್ವರು ಶಾಸಕರು ಕಾಂಗ್ರೆಸ್ಗೆ ಸೇರ್ಪಡೆ ಖಚಿತ

BJP MLA resign :ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಗೆ ಚುನಾವಣಾ ಪರ್ವದಲ್ಲಿ ತಮ್ಮದೇ ಪಕ್ಷದ ಶಾಸಕರು,ಸಚಿವರು ಶಾಕ್ ನೀಡಿದ್ದಾರೆ.

 

ರೇಷ್ಮೆ ಮತ್ತು ಯುವ ಜನ ಸೇವೆ ಸಚಿವ ನಾರಾಯಣ ಗೌಡರು ಬಿಜೆಪಿ ತೊರೆದು (BJP MLA resign) ಕಾಂಗ್ರೆಸ್‌ ಸೇರ್ಪಡೆಗೊಳ್ಳುವುದು ಬಹುತೇಕ ಖಚಿತವಾಗಿದೆ.ಇದರೊಂದಿಗೆ ಸಚಿವ ವಿ.ಸೋಮಣ್ಣ,ಬೆಂಗಳೂರಿನ ಪ್ರಭಾವಿ
ಸಚಿವರೊಬ್ಬರು, ಚಿತ್ರದುರ್ಗ ಹಾಗೂ ವಿಜಯ ನಗರ ಜಿಲ್ಲೆಯ ಇಬ್ಬರು ಶಾಸಕರು ಬಿಜೆಪಿ ತೊರೆಯಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ನಡುವೆ ವಿ.ಸೋಮಣ್ಣ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಪ್ರಮುಖರು ಮನವೊಲಿಕೆಗೆ ಮುಂದಾಗಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯ ದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿರುವ ಸಚಿವರು, ಈ ಮಾಸಾಂತ್ಯಕ್ಕೆ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರುವ ಭರವಸೆ ನೀಡಿದ್ದಾರೆಂದು ತಿಳಿದುಬಂದಿದೆ

ಸದ್ಯಕ್ಕೆ ಬಿಜೆಪಿಯಿಂದ ನಾಲ್ವರು ಶಾಸಕರು ಕಾಂಗ್ರೆಸ್‌ ಸೇರುವುದು ಖಚಿತವಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಈ ಬೆಳವಣಿಗೆ ಆಡಳಿತ ಪಕ್ಷಕ್ಕೆ ತುಸು ಮುಜುಗರ ಉಂಟು ಮಾಡಿದೆ.

Leave A Reply

Your email address will not be published.