Moto G72 : ಫೋಟೋಗ್ರಫಿ ಪ್ರಿಯರಿಗೆ ಇಲ್ಲಿದೆ ಗುಡ್‌ನ್ಯೂಸ್‌! 108MP ಕ್ಯಾಮೆರ ಹೊಂದಿರೋ ಈ ಫೋನ್‌ ತೀರಾ ಕಡಿಮೆ ಬೆಲೆಗೆ ಲಭ್ಯ!

Moto G72: ಮೊಬೈಲ್ ಮಾರುಕಟ್ಟೆಯಲ್ಲಿ ಸ್ಮಾರ್ಟ್ ಫೋನ್ (smartphone ) ಹವಾ ಹೆಚ್ಚಾಗಿರುವ ಜೊತೆಗೆ ಮೊಬೈಲ್ ಕಂಪನಿ ನಡುವೆ ಪೈಪೋಟಿ ಹೆಚ್ಚಾಗಿದೆ. ಈಗಾಗಲೇ ಅನೇಕ ಕಂಪನಿಗಳು ಶವೋಮಿ, ರೆಡ್ಮಿ, ರಿಯಲ್ ಮಿ, ಸ್ಯಾಮ್​ಸಂಗ್, ಹೀಗೆ ಬಹುತೇಕ ಎಲ್ಲ ಮೊಬೈಲ್ ಬ್ರ್ಯಾಂಡ್​ಗಳು 108 ಮೆಗಾಫಿಕ್ಸೆಲ್ ಕ್ಯಾಮೆರಾದ ಫೋನನ್ನು ಪರಿಚಯಿಸಿವೆ. ಆದರೆ ಕಳೆದ ವರ್ಷ ಅನಾವರಣ ಮಾಡಿದ 108 ಮೆಗಾಫಿಕ್ಸೆಲ್ ಕ್ಯಾಮೆರಾದ ಮೋಟೋ ಜಿ72 (Moto G72) ಸ್ಮಾರ್ಟ್​ಫೋನ್ ಅತ್ಯಂತ ಕಡಿಮೆ ಬೆಲೆಗೆ ಮಾರಾಟ ಆಗುತ್ತಿದೆ.

ಹೌದು, ಮೋಟೋ G72 ಸ್ಮಾರ್ಟ್‌ಫೋನಿನ 6GB RAM + 128GB ಸ್ಟೋರೇಜ್‌ ವೇರಿಯಂಟ್‌ ಬೆಲೆಯಲ್ಲಿ ಬರೋಬ್ಬರಿ 3,000ರೂ. ಇಳಿಕೆ ಮಾಡಲಾಗಿದೆ. ಪ್ರಸ್ತುತ 6GB + 128GB ವೇರಿಯಂಟ್‌ ಕೇವಲ 15,999ರೂ. ಗಳಿಗೆ ಸೇಲ್ ಆಗುತ್ತಿದೆ. ಈ ಫೋನನ್ನು ನೀವು ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್ ಮೂಲಕ ಖರೀದಿಸಬಹುದು. ಇದರ ಜೊತೆಗೆ ಎಕ್ಸ್​ಚೇಂಜ್ ಆಫರ್ ಕೂಡ ಲಭ್ಯವಿದೆ.

ಮೋಟೋ G72 ಸ್ಮಾರ್ಟ್‌ಫೋನಿನ ವಿಶೇಷತೆ :
ಈ ಫೋನ್ 1080 x 2400 ಪಿಕ್ಸಲ್ ರೆಸಲ್ಯೂಶನ್ ಸಫೋರ್ಟ್‌ ಪಡೆದಿದ್ದು, 6.6 ಇಂಚಿನ ಫುಲ್​ ಹೆಚ್​ಡಿ+ pOLED ಡಿಸ್‌ಪ್ಲೇ ಹೊಂದಿದೆ. 120Hz ರಿಫ್ರೆಶ್ ರೇಟ್​ನಿಂದ ಕೂಡಿದೆ. ಮೀಡಿಯಾ ಟೆಕ್ ಹಿಲಿಯೋ G99 ಪ್ರೊಸೆಸರ್‌ ವೇಗದ ಜೊತೆ ಆಂಡ್ರಾಯ್ಡ್‌ 12 ಓಎಸ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಇನ್ನು ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ವಿಸ್ತರಣೆಗೆ ಅವಕಾಶ ಇರಲಿದೆ. IP52 ರೇಟಿಂಗ್ ಅನ್ನು ಸಹ ಹೊಂದಿದ್ದು, ವಾಟರ್ ರೆಸಿಸ್ಟೆನ್ಸ್‌ ಆಯ್ಕೆ ಪಡೆದಿದೆ. ಡಾಬ್ಲಿ ಅಟ್ಮೋಸ್‌ ಆಡಿಯೋದೊಂದಿಗೆ ಸ್ಟಿರಿಯೊ ಸ್ಪೀಕರ್ ರಚನೆಯನ್ನು ಈ ಸ್ಮಾರ್ಟ್‌ಫೋನ್‌ ಒಳಗೊಂಡಿದೆ.

ಮುಖ್ಯವಾಗಿ ಮೋಟೋ G72 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಎರಡನೇ ಕ್ಯಾಮೆರಾ 8 ಮೆಗಾಫಿಕ್ಸೆಲ್​ನ ಆಲ್ಟ್ರಾ ವೈಲ್ಡ್‌ ಆಂಗಲ್ ಲೆನ್ಸ್‌ ಪಡೆದಿದೆ. ಮೂರನೇ ಕ್ಯಾಮೆರಾ 2 ಮೆಗಾಫಿಕ್ಸೆಲ್​ನ ಮೈಕ್ರೋ ಶೂಟರ್ ಸೆನ್ಸಾರ್‌ ಅನ್ನು ಹೊಂದಿದೆ. ಇದರೊಂದಿಗೆ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿರಲಿದೆ.

ಇನ್ನು ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು , 33W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯ ಕೂಡ ಇದೆ.

ಇನ್ನುಳಿದಂತೆ, ವೈ-ಫೈ, ಬ್ಲೂಟೂತ್ 5.0, ಎನ್‌ಎಫ್‌ಸಿ, ಜಿಪಿಎಸ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ನೀಡಲಾಗಿದೆ.

ಸದ್ಯ ಗ್ರಾಹಕರಿಗೆ ಮೋಟೋ G72 ಸ್ಮಾರ್ಟ್‌ಫೋನ್ ಗ್ರೇ ಮತ್ತು ಪೋಲಾರ್ ಬ್ಲೂ ಬಣ್ಣದ ಲಭ್ಯವಿದ್ದು, ಫೋಟೋಗ್ರಫಿ ಪ್ರಿಯರಾಗಿದ್ದಲ್ಲಿ ಅಂತಹವರಿಗೆ ಈ ಸ್ಮಾರ್ಟ್ ಫೋನ್ ಹೇಳಿ ಮಾಡಿಸಿದಂತೆ ಇದೆ.

Leave A Reply

Your email address will not be published.