Home Entertainment Oscar 2023 : ಭಾರತಕ್ಕೆ ಮತ್ತೊಂದು ಆಸ್ಕರ್ ಗರಿ! ಪ್ರತಿಷ್ಟಿತ ಆಸ್ಕರ್ ಗೆದ್ದು ಬೀಗಿದ RRR...

Oscar 2023 : ಭಾರತಕ್ಕೆ ಮತ್ತೊಂದು ಆಸ್ಕರ್ ಗರಿ! ಪ್ರತಿಷ್ಟಿತ ಆಸ್ಕರ್ ಗೆದ್ದು ಬೀಗಿದ RRR ಚಿತ್ರದ ‘ನಾಟು ನಾಟು’ ಹಾಡು

Naatu Naatu Song

Hindu neighbor gifts plot of land

Hindu neighbour gifts land to Muslim journalist

Naatu Naatu Song : ಇಡೀ ಜಗತ್ತೇ ಕಾಯುತ್ತಿದ್ದ ಪ್ರತಿಷ್ಠಿತ ಆಸ್ಕರ್ (Oscar) ಪ್ರಶಸ್ತಿಗಳು ಒಂದೊಂದಾಗಿ ಘೋಷಣೆಯಾಗುತ್ತಿವೆ. ಭಾರತಕ್ಕೂ ಹಿಂದಿದೆಯೇ ಪ್ರಶಸ್ತಿಗಳು ಘೋಷಣೆಯಾಗುತ್ತಿವೆ. ತಮಿಳು(Tamilu) ಮೂಲದ ‘ದಿ ಎಲಿಫೆಂಟ್ ವಿಸ್ಪರರ್ಸ್’ ಕಿರು ಚಿತ್ರಕ್ಕೆ ಆಸ್ಕರ್ ಅವಾರ್ಡ್ ಲಭಿಸಿದ ಬೆನ್ನಲ್ಲೇ ಇದೀಗ ಬಹು ನಿರೀಕ್ಷಿತ ಆರ್.ಆರ್.ಆರ್(RRR) ಸಿನಿಮಾದ ‘ನಾಟು ನಾಟು’ (Natu Natu Song) ಹಾಡಿಗೆ ಆಸ್ಕರ್ ಪ್ರಶಸ್ತಿ ಸಂದಿದೆ.

95ನೇ ಸಾಲಿನ ಅಕಾಡೆಮಿ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್​ ಒರಿಜಿನಲ್​ ಸಾಂಗ್​’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ(MM Keeravani) ಸಂಗೀತ ಸಂಯೋಜನೆಯಲ್ಲಿ ಮೂಡಿಬಂದ ಹಾಡು ವಿಶ್ವಮಟ್ಟದಲ್ಲಿ ಸೌಂಡ್ ಮಾಡಿದೆ. ಇಂಗ್ಲಿಷ್ ಹಾಡುಗಳನ್ನು ಹಿಂದಿಕ್ಕಿ ‘ನಾಟು ನಾಟು’ ಪ್ರಶಸ್ತಿ ಬಾಚಿಕೊಂಡಿದೆ.

ರಾಜಮೌಳಿ (Rajamouli) ನಿರ್ದೇಶನದಲ್ಲಿ ಮೂಡಿ ಬಂದ ಆರ್.ಆರ್.ಆರ್ ಚಿತ್ರದ ಈ ಹಾಡು ಮೊದಲಿಂದಲೂ ಆಸ್ಕರ್ ತರುವ ಭರವಸೆಯನ್ನೂ ಮೂಡಿಸಿತ್ತು. ಆಸ್ಕರ್ ವೇದಿಕೆಯ ಮೇಲೆ ಈ ಹಾಡನ್ನು ಗಾಯಕರಾದ ಸಿಪ್ಲಿಗಂಜ ಹಾಗೂ ಕಾಲಭೈರವ ಹಾಡಿದ್ದರು. ಅಮೆರಿಕಾದ ನಟ, ಡಾನ್ಸರ್ ಲಾರೆನ್ ಗೋತ್ಲಿಬ್ ನೃತ್ಯ ಮಾಡಿದ್ದರು. ‘ನಾಟು ನಾಟು’, ‘ಲಿಫ್ಟ್​ ಮಿ ಅಪ್​’, ‘ದಿಸ್ ಈಸ್ ಲೈಫ್​’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್​ ಹಾಡುಗಳು ಅವಾರ್ಡ್ ರೇಸ್​​ನಲ್ಲಿದ್ದವು. ಈ ಪೈಕಿ ‘ನಾಟು ನಾಟು’ ಹಾಡು ಆಸ್ಕರ್ ಗೆದ್ದಿದ್ದು ಭಾರತಕ್ಕೆ ಮತ್ತೊಂದು ಗರಿಮೆಯನ್ನು ತಂದುಕೊಟ್ಟಿದೆ.

ಅಮೆರಿಕಾದ ಲಾಸ್ ಏಂಜಲೀಸ್ ಡಾಲ್ಬಿ ಥಿಯೇಟರ್ ನಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಜಗತ್ತಿನ ಹೆಸರಾಂತ ಕಲಾವಿದರು ಹಾಗೂ ತಂತ್ರಜ್ಞರು ಭಾಗಿಯಾಗಿದ್ದಾರೆ. ನಾಟು ನಾಟು ಹಾಡಿಗೆ ಪ್ರಶಸ್ತಿ ಘೋಷಣೆ ಆಗುತ್ತಿದ್ದಂತೆಯೇ ಸಭಾಂಗಣದ ತುಂಬಾ ಚೆಪ್ಪಾಳೆಯದ್ದೇ ಸದ್ದು. ಭಾರತದಲ್ಲೂ ರಾಮ್ ಚರಣ್ (Ram Charan) ಮತ್ತು ಜ್ಯೂನಿಯರ್ (Jr NTR) ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಭಾರತೀಯ ಸಿನಿಮಾ ರಂಗದ ಅನೇಕರು ಸೋಷಿಯಲ್ ಮೀಡಿಯಾ ಮೂಲಕ ಶುಭಾಶಯ ಕೋರಿದ್ದಾರೆ. ಅದರಲ್ಲೂ ತೆಲುಗು ಸಿನಿಮಾ ರಂಗದಲ್ಲಿ ಹಬ್ಬದ ವಾತಾವರಣವೇ ಕಂಡು ಬಂದಿದೆ.

ಇದನ್ನೂ ಓದಿ : Oscars 2023: ಭಾರತದ ‘ದಿ ಎಲಿಫೆಂಟ್ ವಿಸ್ಪರರ್ಸ್’ ಚಿತ್ರಕ್ಕೆ ಆಸ್ಕರ್ ಪ್ರಶಸ್ತಿ! ಆಸ್ಕರ್ ವೇದಿಕೆಯಲ್ಲಿ ಭಾರತಕ್ಕೆ ಮೊದಲ ಗೆಲುವು!