ಸಮಾಜ ಕಲ್ಯಾಣ ಇಲಾಖೆ 2021-22 : ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
Social Welfare Department :ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡುವ ದೃಷ್ಟಿಯಿಂದ ಸಮಾಜ ಕಲ್ಯಾಣ ಇಲಾಖೆ 2021-22ನೇ ಸಾಲಿನ ಸ್ಕಾಲರ್ಷಿಪ್ ಗೆ ಅರ್ಜಿ ಆಹ್ವಾನಿಸಿದ್ದು (Social Welfare Department), ಅರ್ಹ ವಿದ್ಯಾರ್ಥಿಗಳು ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಈ ಪ್ರೋತ್ಸಾಹಧನ ನೀಡಲಾಗುತ್ತಿದ್ದು, ಎಸ್.ಎಸ್.ಎಲ್.ಸಿ ಅಂಕಪಟ್ಟಿ ಪ್ರತಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಹಿಂದಿನ ತರಗತಿಯ ವ್ಯಾಸಂಗ ಪ್ರಮಾಣ ಪತ್ರ/ಅಂಕ ಪಟ್ಟಿಗಳು, ಚಾಲ್ತಿಯಲ್ಲಿರುವ ವಿದ್ಯಾರ್ಥಿಗಳ ವೈಯಕ್ತಿಕ ಬ್ಯಾಂಕ್ ಖಾತೆಯ ವಿವರಗಳು ಅರ್ಜಿ ಸಲ್ಲಿಸಲು ಅವಶ್ಯಕವಾಗಿರುತ್ತದೆ.
ಅರ್ಜಿ ಸಲ್ಲಿಕೆ ವಿಳಾಸ :
ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಛೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬಳಿ ಇರುವ ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ:217, 2ನೇ ಮಹಡಿ, ದೂ. ಸಂಖ್ಯೆ: 080-29787447
ಹೆಚ್ಚಿನ ಮಾಹಿತಿಗೆ :
ಉಪ ನಿರ್ದೇಶಕರ ಕಛೇರಿ-080-29787447,
ಸಹಾಯಕ ನಿರ್ದೇಶಕರು, ದೇವನಹಳ್ಳಿ ತಾಲ್ಲೂಕು-080-7681784, ದೊಡ್ಡಬಳ್ಳಾಪುರ-080-7623681, ಹೊಸಕೋಟೆ-080-7931528, ನೆಲಮಂಗಲ-080-7723172
ಅರ್ಜಿಗಳನ್ನು ಸಲ್ಲಿಸುವ ದಿನಾಂಕ : ಮಾರ್ಚ್ 15 2023.
ಇದನ್ನೂ ಓದಿ : BECIL Recruitment 2023 : ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಉದ್ಯೋಗ : ಒಟ್ಟು ಹುದ್ದೆ-28, ಅರ್ಜಿ ಸಲ್ಲಿಸಲು ಕೊನೆ ದಿನ-ಮಾ.24