Toll : ಬೆಂಗಳೂರು – ಮೈಸೂರು ಹೈವೇಯಲ್ಲಿ ನಾಳೆಯಿಂದ ಟೋಲ್ ಸಂಗ್ರಹ? ಎಷ್ಟಿದೆ ದರ?
Toll : ರಾಮನಗರ: ಜನರು ಕಾತುರದಿಂದ ಕಾಯುತ್ತಿದ್ದ ಬೆಂಗಳೂರು- ಮೈಸೂರು ಹೈವೇಯನ್ನು (Bangalore Mysore Highway) ಪ್ರಧಾನಿ ಮೋದಿ ( PM Modi) ಸಾರಥ್ಯದಲ್ಲಿ ನಿನ್ನೆ ಲೋಕಾರ್ಪಣೆಗೊಂಡಿದೆ. ಈ ವಿಚಾರವಾಗಿ ರಾಜಕೀಯ ನಾಯಕರು (Political Party) ಹಲವು ಚರ್ಚೆ ಮಾಡಿದ್ದರು. ಆದ್ರೂ ವಿರೋಧದ ದಶಪಥ ಹೆದ್ದಾರಿ ಅನಾವರಣಗೊಳಿಸಲಾಗಿದೆ.
ಇದೀಗ ಬೆಂಗಳೂರು-ಮೈಸೂರು ಹೈವೇಯಲ್ಲಿ ಟೋಲ್ ಸಂಗ್ರಹ ಸಾಧ್ಯತೆಯಿದೆ. ಮಾ. 14ರಿಂದ ಟೋಲ್ ಸಂಗ್ರಹ ಮಾಡುತ್ತೇವೆಂದು ಈ ಹಿಂದೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದರು. ಆದರೆ ಟೋಲ್ ಸಂಗ್ರಹದ ಬಗ್ಗೆ ಕೇಂದ್ರದಿಂದ ಯಾವುದೇ ಸೂಚನೆ ಬಂದಿಲ್ಲ ಎಂದು ಯೋಜನಾ ನಿರ್ದೇಶಕ ಶ್ರೀಧರ್ ಮಾಹಿತಿ ನೀಡಿದ್ದಾರೆ.
ಇನ್ನು ಎಕ್ಸ್ಪ್ರೆಸ್ ಹೈವೇಯಲ್ಲಿ(Express Highway) ಟೋಲ್ ಸಂಗ್ರಹ(Toll Collection) ವಿಚಾರದಲ್ಲಿ ಗೊಂದಲವಿದ್ದು, ಕಾಂಗ್ರೆಸ್ (Congress), ಸಮಾನ ಮನಸ್ಕ ವಕೀಲರು, ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳಿಂದ ನಾಳೆ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಹಾಗಾಗಿ ಬೆಂಗಳೂರು-ಮೈಸೂರು ಹೈವೇಯಲ್ಲಿ ಟ್ರಾಫಿಕ್ (Traffic) ಬಿಸಿ ತಟ್ಟುವ ಸಾಧ್ಯತೆ ಇದೆ.
55 ಕಿಲೋಮೀಟರ್ಗೆ 155 ರೂ. ಟೋಲ್ ನಿಗದಿಯಾಗಿದೆ. ಮತ್ತುಳಿದ 55 ಕಿಲೋಮೀಟರ್ಗೆ 155 ರೂ. ನಿಗದಿಪಡಿಸಲಾಗಿದೆ. ಅಲ್ಲಿಗೆ ಒಟ್ಟು 300 ರೂ. ಟೋಲ್ ಪಾವತಿಸಬೇಕು. ಒಂದು ದಿವಸಕ್ಕೆ 5 ಕೋಟಿ ರೂ. ಸಂಗ್ರಹವಾಗಲಿದೆ. ಅಲ್ಲಿಗೆ ವರ್ಷಕ್ಕೆ 2,444 ಕೋಟಿ ರೂ. ಸಂಗ್ರಹವಾದಂತಾಗಲಿದೆ. 10 ವರ್ಷ ಟೋಲ್ ಸಂಗ್ರಹಕ್ಕೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಅಲ್ಲಿಗೆ 10 ವರ್ಷದಲ್ಲಿ 20,440 ಕೋಟಿ ರೂ. ಸಂಗ್ರಹವಾಗಲಿದೆ. ರಸ್ತೆ ಮಾಡಲು 12 ಸಾವಿರ ಕೋಟಿ ರೂ. ವೆಚ್ಚವಾಗಿದೆ.
ಬೆಂಗಳೂರಿನಿಂದ ನಿಡಘಟ್ಟವರೆಗಿನ 56-ಕಿಮೀ ಉದ್ದದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಬಳಸುವ ವಾಹನಗಳ ಟೋಲ್ ದರಗಳ ಮಾಹಿತಿಯನ್ನು NHAI ಅಧಿಕಾರಿಗಳು ತಿಳಿಸಿದ್ದಾರೆ. ಕಾರುಗಳು ಮತ್ತು ಇತರ ಲಘು ಮೋಟಾರು ವಾಹನಗಳ ಏಕಮುಖ ಸಂಚಾರಕ್ಕೆ 135 ರೂ. ಪಾವತಿಸಬೇಕಾಗುತ್ತದೆ. ಬಸ್‌ಗಳು 460 ರೂ. ಮತ್ತು ಭಾರೀ ಮೋಟಾರು ವಾಹನಗಳು 750-900 ರೂ.ಗಳ ನಡುವೆ ಪಾವತಿಸಬೇಕಾಗಬಹುದು ಎಂದು NHAI ಅಧಿಕಾರಿಗಳು ತಿಳಿಸಿದ್ದರು.